*  ಬಾಗಲಕೋಟೆ ಜಿಲ್ಲೆಯ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ನಡೆದ ಘಟನೆ*  ಘಟನಾ ಸ್ಥಳಕ್ಕೆ ಎಸ್‌ಪಿ ಜಯಪ್ರಕಾಶ್‌ ಭೇಟಿ ನೀಡಿ*  ಶುಕ್ರವಾರದವರೆಗೆ ಎಲ್ಲ ಸಾರ್ವಜನಿಕ ಸಭೆ, ಸಮಾರಂಭಗಳಿಗೆ ನಿರ್ಬಂಧ

ಬಾಗಲಕೋಟೆ(ಜು.07): ಎರಡು ಅನ್ಯಕೋಮಿನ ಗುಂಪುಗಳ ಮಧ್ಯೆ ಗಲಾಟೆ ನಡೆದು ಇಬ್ಬರಿಗೆ ಚೂರಿ ಇರಿದು ಮತ್ತೊಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ನಿನ್ನೆ(ಬುಧವಾರ) ನಡೆದಿದೆ.

ಘಟನೆಯಲ್ಲಿ ಗಾಯಗೊಂಡವರನ್ನ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಅರಣ್‌ ಮತ್ತು ಆತನ ಸಹೋದರ ಹಾಗೂ ಯಮನೂರು ಎಂಬುವರ ಮೇಲೆ ಹಲ್ಲೆ ಮಾಡಲಾಗಿದೆ. ಗಾಯಾಳುಗಲನ್ನ ಬಾಗಲಕೋಟೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಅಂತ ಜಿಲ್ಲಾಧಿಕಾರಿ ಪಿ ಸುನೀಲ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಯೆಲ್ಲೋ ಬೋರ್ಡ್‌​ ವರ್ಸಸ್​​ ವೈಟ್​ ಬೋರ್ಡ್‌ ಕಾರು ಚಾಲಕರ ಹೋರಾಟ

ಘಟನಾ ಸ್ಥಳಕ್ಕೆ ಎಸ್‌ಪಿ ಜಯಪ್ರಕಾಶ್‌ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಕೆರೂರು ಪಟ್ಟಣದಲ್ಲಿ ಜು.8 ರ ಬೆಳಿಗ್ಗೆ 8 ರ ವರೆಗೆ 144 ಕಲಂ ಜಾರಿ ಮಾಡಲಾಗಿದೆ.ಘ ಟನೆ ಸಂಬಂಧ 5-6 ಜನರನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 

ಘಟನೆ ನಡೆದ ಬೆನ್ನಲ್ಲೇ ಕಿಡಿಗೇಡಿಗಳ ಗುಂಪು ಮಾರುಕಟ್ಟೆ ಮೇಲೆ ತಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿ ಬೈಕ್‌ಗಳನ್ನ ಜಖಂಗೊಳಿಸಿದ್ದಾರೆ. ಹೀಗಾಗಿ ಕೆರೂರು ಪಟ್ಟಣದ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶುಕ್ರವಾರದವರೆಗೆ ಎಲ್ಲ ಸಾರ್ವಜನಿಕ ಸಭೆ, ಸಮಾರಂಭಗಳಿಗೆ ನಿರ್ಬಂಧ ಹೇರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಪಟ್ಟಣದಲ್ಲಿ ಬಿಗಿ ಪೊಲೀಸ್‌ ಭದ್ರತೆ ಕೈಗೊಳ್ಳಲಾಗಿದೆ.