ಮೈಸೂರು(ಜೂ.11): ಮೈಸೂರು ಸುತ್ತಮುತ್ತ ಭೂ ಹಗರಣಗಳ ತನಿಖೆಗೆ ರೋಹಿಣಿ ಸಿಂಧೂರಿಯನ್ನು ವಿಶೇಷಾಧಿಕಾರಿಯಾಗಿ ನೇಮಿಸಬೇಕು ಎಂದು ಬಿಜೆಪಿ ಎಂಎಲ್ಸಿ ಎಚ್‌.ವಿಶ್ವನಾಥ್‌ ಮನವಿ ಮಾಡಿದ್ದಾರೆ. 

ನಗರದಲ್ಲಿ ಮಾತನಾಡಿದ ಅವರು, ಚಾಮುಂಡಿಬೆಟ್ಟದ ಸುತ್ತಮುತ್ತ ಸಹ ಒತ್ತುವರಿಯಾಗಿದೆ. ಹೀಗಾಗಿ, ಈ ತನಿಖೆಗೆ 6 ತಿಂಗಳ ಕಾಲ ರೋಹಿಣಿ ಸಿಂಧೂರಿ ಅವರನ್ನು ವಿಶೇಷಾಧಿಕಾರಿಯಾಗಿ ನೇಮಿಸಬೇಕು. ಈ ಸಂಬಂಧ ಶನಿವಾರ ಅಥವಾ ಸೋಮವಾರ ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ಎಚ್‌.ವಿಶ್ವನಾಥ್‌ ಹೇಳಿದ್ದಾರೆ. 

ರೋಹಿಣಿ ನಿವೃತ್ತಿಯಾಗಿ ಆಂಧ್ರಕ್ಕೆ ಹೋಗಿ ಅಡಿಗೆ, ಮಕ್ಕಳು ನೋಡ್ಕೊಂಡ್ ಇರ್ಲಿ : ಸಾರಾ ಚಾಲೇಂಜ್

ಹಿಂದಿನ ಡಿಸಿ ರೋಹಿಣಿ ಸಿಂಧೂರಿ ಭೂ ಅಕ್ರಮ ಸಂಬಂಧ 4 ಆದೇಶ ಹೊರಡಿಸಿದ್ದಾರೆ. ಇದನ್ನು ತುರ್ತಾಗಿ ಜಾರಿಗೊಳಿಸಬೇಕು. ಸುಪ್ರೀಂಕೋರ್ಟ್‌ ಆದೇಶ ಇದೆ. ಬಫರ್‌ ಜೋನ್‌ನಲ್ಲಿ ಅಕ್ರಮ ನಡೆಸಲಾಗುತ್ತಿದೆ. ಇದರ ಬಗ್ಗೆ ನಿಗದಿತ ಅವಧಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.