Asianet Suvarna News Asianet Suvarna News

Bagalkote: ಲಿಂಗತ್ವ ಅಲ್ಪಸಂಖ್ಯಾತರಿಗೆ ದಾರಿದೀಪವಾದ ಶ್ರಮ ಚೇತನ: ಉಮಾ ಮಹಾದೇವನ್

ಲಿಂಗತ್ವ ಅಲ್ಪಸಂಖ್ಯಾತರು ಸಮಾಜದಲ್ಲಿ ಗೌರವದಿಂದ ಜೀವನ ನಡೆಸುವಂತೆ ಮಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಶ್ರಮ ಚೇತನ-2022 ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಹೇಳಿದರು. 

Shrama Chetana a Beacon for Transgender Minorities Says Uma Mahadevan At Bagalkote gvd
Author
First Published Nov 28, 2022, 8:24 PM IST

ವರದಿ: ಮಲ್ಲಿಕಾರ್ಜುನ ಹೊಸಮನಿ, ಏಷ್ಯಾನೆಟ್ ಸುವರ್ಣನ್ಯೂಸ್, ಬಾಗಲಕೋಟೆ

ಬಾಗಲಕೋಟೆ (ನ.28): ಲಿಂಗತ್ವ ಅಲ್ಪಸಂಖ್ಯಾತರು ಸಮಾಜದಲ್ಲಿ ಗೌರವದಿಂದ ಜೀವನ ನಡೆಸುವಂತೆ ಮಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಶ್ರಮ ಚೇತನ-2022 ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಹೇಳಿದರು. ಬಾಗಲಕೋಟೆ  ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಂಡ ಶ್ರಮ ಚೇತನ-2022 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶ್ರಮ ಚೇತನ ಕಾರ್ಯಕ್ರಮದ ಮೂಲಕ ಲಿಂಗತ್ವ ಅಲ್ಪಸಂಖ್ಯಾತರಲ್ಲಿ ಜಾಗೃತಿ ಮೂಡಿಸಿ ಅವರನ್ನು ಮುಖ್ಯವಾಹಿನಿಗೆ ತರುವ ಕೆಲಸ ಮಾಡಲಾಗುತ್ತಿದೆ. 

ನರೇಗಾ ಯೋಜನೆಯಡಿ ಉದ್ಯೋಗ ಚೀಟಿ ನೀಡಿ ದಿನಕ್ಕೆ 309 ರೂ.ಗಳಂತೆ 100 ದಿನಗಳ ಕೆಲಸ ನೀಡಲಾಗುತ್ತಿದೆ ಎಂದರು. ವೈಯಕ್ತಿಕ ಕಾಮಗಾರಿಗಳಾದ ಕುರಿ, ಮೇಕೆ, ದನದ ಶೆಡ್ ನಿರ್ಮಿಸಲು ನರೇಗಾದಡಿ ಅವಕಾಶವಿದೆ. ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಸಹ ನೀಡಲಾಗುತ್ತಿದೆ. ಈ ಎಲ್ಲ ಯೋಜನೆಗಳ ಲಾಭ ಪಡೆಯಲು ಲಿಂಗತ್ವ ಅಲ್ಪಸಂಖ್ಯಾತರ ಪಡೆಯಲು ಮುಂದೆ ಬರಬೇಕು. ಅಂದಾಗ ಮಾತ್ರ ಸಮಾಜದಲ್ಲಿ ಮುಂದೆ ಬರಲು ಸಾಧ್ಯವಾಗುತ್ತದೆ. ಸರಕಾರ ಈ ನಿಟ್ಟಿನಲ್ಲಿ ವಿಶೇಷ ಸೌಲಭ್ಯಗಳನ್ನು ನೀಡುತ್ತಿದೆ. ಇದರ ಪ್ರಯೋಜನ ಪಡೆದುಕೊಳ್ಳಲು ತಿಳಿಸಿದರು. 

ಪಂಚಮಸಾಲಿಗೆ 2ಎ ಮೀಸಲಾತಿ ಕೊಡಲು ಆರ್ ಎಸ್‌ಎಸ್‌ ಸಹಮತಿ ಇದೆ : ಜಯ ಮೃತ್ಯುಂಜಯ ಶ್ರೀ

ವಿವಿಧ ಯೋಜನೆ ಫಲಾನುಭವಿಗಳಾಗಿ ನೆಮ್ಮದಿ ಪಡೆಯುವಂತಾಗಲಿ: ಬಾಗಲಕೋಟೆ  ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಮಾತನಾಡಿ, ಕಾರ್ಮಿಕ ಜೀವಿ ಶ್ರಮಜೀವಿಯಾಗಬೇಕೆಂಬ ನಿಟ್ಟಿನಲ್ಲಿ ಶ್ರಮ ಚೇತನನ್ನು ಸರಕಾರ ರೂಪಿಸಿದ್ದು, ಇದರ ಪ್ರಯೋಜನ ಪಡೆಯುವ ಮೂಲಕ ಸಮಾಜಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಲಿಂಗತ್ವ ಅಲ್ಪಸಂಖ್ಯಾತರು ಸಮಾಜದ ಹೃದಯ ವೈಶಾಲತೆ ಪಡೆಯುವಂತಾಗಬೇಕು. ನಿಮಗಾಗಿ ಸರಕಾರ ಹತ್ತು ಹಲವಾರು ಯೋಜನೆಗಳನ್ನು ರೂಪಿಸುತ್ತಿದ್ದು, ಶ್ರಮಕ್ಕೆ ತಕ್ಕ ಪ್ರತಿಫಲ ನೀಡುವ ಯೋಜನೆ ಈದಾಗಿದೆ. ಇದರ ಲಾಭ ಪಡೆದುಕೊಂಡು ಸಮಾಜದಲ್ಲಿ ತಲೆ ಎತ್ತಿ ನಿಲ್ಲುವಂತಾಗಬೇಕು ಎಂದರು.

ಹೆಸರು ನೋಂದಾಯಿಸಿ ಹಕ್ಕು ಚಲಾಯಿಸಲಿ: ಬಾಗಲಕೋಟೆ ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ ಮಾತನಾಡಿ, ಸಮಾಜದಲ್ಲಿರುವ ಪಿಡುಗುಗಳು ಹೋಗಬೇಕು. ಲಿಂಗತ್ವ ಅಲ್ಪಸಂಖ್ಯಾತರಿಗೆ ಉದ್ಯೋಗ ಖಾತ್ರಿಯಡಿ ಮನೆ ಮನೆಗೆ ತೆರಳಿ ಜಾಬ್ ಕಾರ್ಡ್‌ ನೀಡುವ ಕಾರ್ಯ ಜಿ.ಪಂ ಸಿಇಓ ಅವರು ಮಾಡುತ್ತಿದ್ದಾರೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಫಲಾನುಭವಿಗಳ ಆಯ್ಕೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರನ್ನು ಗಣನೆಗೆ ತೆಗೆದುಕೊಳ್ಳಲಾಗುವುದು. ಮತದಾನ ಪರಿಷ್ಕರಣೆ ಕಾರ್ಯ ನಡೆದಿದ್ದು, ಲಿಂಗತ್ವ ಅಲ್ಪಸಂಖ್ಯಾತರು ಮತದಾರರ ಪಟ್ಟಿಯನ್ನು ಹೆಸರು ನೋಂದಾಯಿಸಿಕೊಂಡು ಹಕ್ಕು ಚಲಾಯಿಸುವಂತಾಗಬೇಕು ಎಂದರು. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾದ ಶಿಲ್ಪಾ ನಾಗ್ ಪ್ರಾಸ್ತಾವಿಕವಾಗಿ ಮಾತನಾಡಿದರು. 

ಲಿಂಗತ್ವ ಅಲ್ಪಸಂಖ್ಯಾತರಾದ ಮೈಸೂರು ಜಿಲ್ಲೆಯ ಸಾಲಿಗ್ರಾಮದ ಗ್ರಾ.ಪಂ ಸದಸ್ಯೆ ದೇವಿಕಾ, ವಿಜಯನಗರ ಜಿಲ್ಲೆಯ ಕಲ್ಲಹಳ್ಳಿ ಗ್ರಾ.ಪಂ ಸದಸ್ಯೆ ಸುಧಾ ಜೋಗತಿ, ಕೊಪ್ಪಳ ಜಿಲ್ಲೆಯ ಶರಣಮ್ಮ, ಧಾರವಾಡ ಜಿಲ್ಲೆಯ ಮಂಜುಳಾ ತಮ್ಮ ಯಶಸ್ವಿಯ ಅನುಭವವನ್ನು ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ ಉದ್ಯೋಗ ಖಾತ್ರಿ ಯೋಜನೆಯ ಜಾಬ್ ಕಾರ್ಡ್‌ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಎರಡು ಸ್ವಸಹಾಯ ಗುಂಪುಗಳಿಗೆ 1.50 ಲಕ್ಷ ರೂ.ಗಳ ಸಹಾಯಧನದ ಚೆಕ್‍ನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿ.ಪಂ ಸಿಇಓ ಟಿ.ಭೂಬಾಲನ್, ಜಿಲ್ಲಾ‌ಪೊಲೀಸ್ ವರಿಷ್ಠಾಧಿಕಾರಿ‌ ಜಯಪ್ರಕಾಶ, ಗದಗ ಜಿಲ್ಲೆ ಸಿಇಓ ಡಾ.ಸುಶೀಲ ಬಿ, ವಿಜಯಪುರ ಜಿಲ್ಲಾ ಸಿಇಓ ರಾಹುಲ್ ಸಿಂಧೆ, ಯುಕೆಪಿ ಜಿಎಂ ರಾಹುಲ್‍ಪಾಂಡೆ, ಜಿ.ಪಂ ಉಪಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮ ಉಕ್ಕಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.  

ಇಳಕಲ್‌ ಸೀರೆಯ ಮೇಲೆ ಕಾಂತಾರ: ಆಸ್ಕರ್ ಅವಾರ್ಡ್‌ಗಾಗಿ ಶುಭ ಹಾರೈಸಿದ ಯುವ ನೇಕಾರ ಮೇಘರಾಜ್

ಕಾರ್ಯಕ್ರಮದಲ್ಲಿ 47 ಲಿಂಗತ್ವ ಅಲ್ಪಸಂಖ್ಯಾತರಿಗೆ ಸನ್ಮಾನ: ಗ್ರಾಮ ಪಂಚಾಯತಿಯ 4 ಜನ ಸದಸ್ಯರಿಗೆ, ನರೇಗಾದಡಿ ಕಾರ್ಯನಿರ್ವಹಿಸುತ್ತಿರುವ 28 ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಯಡಿ ಸ್ವಸಹಾಯ ಸಂಘದ ಅಧ್ಯಕ್ಷರು, ಸದಸ್ಯರು 15 ಜನ ಸೇರಿ ಒಟ್ಟು 47 ಜನರನ್ನು ಸನ್ಮಾನಿಸಲಾಯಿತು.

Follow Us:
Download App:
  • android
  • ios