ತುಮಕೂರು(ಅ.04): ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಸಂಸ್ಥಾನ ಮಠದ ಪಟ್ಟಾಧ್ಯಕ್ಷರಾಗಿದ್ದ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ(65) ಇಂದು(ಭಾನುವಾರ) ಲಿಂಗೈಕ್ಯರಾಗಿದ್ದಾರೆ. 

ಇಂದು ಬೆಳಿಗ್ಗೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆಬಿ ಕ್ರಾಸ್ ಬಳಿಯಿರುವ ಶಾಖಾ ಮಠದಲ್ಲಿ ಸ್ವಾಮೀಜಿ ಅವರು ತೀವ್ರ ಹೃದಯಾಘಾತದಿಂದ ಶ್ರೀಗಳು ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದು ಬಂದಿದೆ.

ಗೋಕಾಕ: ಮಹಾಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

ಪಟ್ಟಾಧ್ಯಕ್ಷರಾಗಿದ್ದ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ ಅವರು ರಂಭಾಪುರಿ  ವಿದ್ಯಾಸಂಸ್ಥೆಯ ಆಡಳಿತ ಅಧಿಕಾರಿಯಾಗಿದ್ದರು. ಶ್ರೀಗಳ ನಿಧನಕ್ಕೆ ಗಣ್ಯರು ಸೇರಿದಂತೆ ಅಪಾರ ಸಂಖ್ಯೆಯಲ್ಲಿರುವ ಭಕ್ತಾದಿಗಳು ಕಂಬನಿ ಮಿಡಿದಿದ್ದಾರೆ.