'ಜೋಡಿಸಲಾಗದ ಸ್ಥಿತಿಯಲ್ಲಿ ಕಾಂಗ್ರೆಸ್ : ಸಿದ್ದರಾಮಯ್ಯ ಆರ್‌ಎಸ್‌ಎಸ್ ಜಪ '
ಭಾರತ್ ಜೋಡೋ ಕಾರ್ಯಕ್ರಮವು ಅವರ ಪಕ್ಷದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರನ್ನು ಜೋಡಿಸಲು ಸಾಧ್ಯವಿಲ್ಲ. ಇನ್ನು ದೇಶವನ್ನು ಜೋಡಿಸಲು ಸಾಧ್ಯವೆ ಎಂದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ
ಕೊರಟಗೆರೆ (ಅ.03) : ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮವು ಅವರ ಪಕ್ಷದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರನ್ನು ಜೋಡಿಸಲು ಸಾಧ್ಯವಿಲ್ಲ. ಇನ್ನು ದೇಶವನ್ನು ಜೋಡಿಸಲು ಸಾಧ್ಯವೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ (Prime minister ) ಹುಟ್ಟು ಹುಬ್ಬದ ಅಂಗವಾಗಿ ಕೊರಟಗೆರೆ ವಿಧಾನಸಭಾ ಬಿಜೆಪಿ (BJP) ಅಭ್ಯರ್ಥಿ ಆಕಾಂಕ್ಷಿ ಡಾ.ಲಕ್ಷ್ಮೀಕಾಂತ ಹಮ್ಮಿಕೊಂಡಿದ್ದ ವಾಲಿಬಾಲ್ ಪಂದ್ಯಾವಳಿಗಳ ಕಾರ್ಯಕ್ರಮದ ಉದ್ಘಾಟನೆಗೂ ಮುಂಚಿತವಾಗಿ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಡನೆ ಮಾತನಾಡಿದರು.
ಭಾರತ್ ಜೋಡೋ ಕಾರ್ಯಕ್ರಮ ರಾಹುಲ್ ಗಾಂಧಿಯವರು (Rahul Gandhi) ಯಾವ ಕಾರಣಕ್ಕಾಗಿ ಮಾಡುತ್ತಿದ್ದಾರೂ ತಿಳಿಯುತ್ತಿಲ್ಲ, ಕರ್ನಾಟಕದಲ್ಲೇ ಕಾಂಗ್ರೆಸ್ ಪಕ್ಷನ್ನು ಜೋಡಿಸಲಾಗದ ಸ್ಥಿತಿ ಇದ್ದು, ದೇಶ ಜೋಡಿಸಲು ಹೋಗುವುದು ಪ್ರಯೋಜನವಿದೆಯೇ ಎಂದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬೆಳ್ಳಗೆ ಎದ್ದಾಗ ಅವರು ಮೊದಲು ಜಪ ಮಾಡುವುದು ಆರ್‌ಎಸ್‌ಎಸ್ ಬಗ್ಗೆಯೇ. ಈ ಸಂಘಟನೆಯನ್ನು ಕಾಂಗ್ರೆಸ್ ಪಕ್ಷ ತಮ್ಮ ಅಧಿಕಾರ ಅವಧಿಗಳಲ್ಲಿ ದುರುದ್ದೇಶ ಪೂರ್ವಕವಾಗಿ ಯಾವುದೇ ತನಿಖೆ ಮಾಡದೆæ ಕಾರಣವಿಲ್ಲದೇ ನಿಷೇದ ಮಾಡಿದ್ದರು. ಆದರೆ ಪಿಎಫ್‌ಐ ಸಂಘಟನೆಯನ್ನು ಎನ್‌ಐಎ ಸಂಪೂರ್ಣ ತನಿಖೆ ಮಾಡಿ ಸಾಕ್ಷ್ಯ ಸಂಗ್ರಹಿಸಿ ದೇಶದ ಪ್ರಬುದ್ಧ ಮುಸ್ಲಿಂ ಸಂಘಟನೆಗಳೊಂದಿಗೆ ಚರ್ಚಿಸಿ ನಿಷೇಧಿಸಲಾಗಿದೆ. ಆರ್‌ಎಸ್‌ಎಸ್ ಎಂದಿಗೂ ದೇಶದ್ರೋಹ ಕೆಲಸ ಮಾಡಿಲ್ಲ, ಸಿದ್ದರಾಮಯ್ಯ ಯಾರನ್ನೋ ಮೆಚ್ಚಿಸಲು ಆ ಸಂಘಟನೆಯನ್ನು ನಿಷೇಧಿಸಲು ಒತ್ತಾಯಿಸುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪಕ್ಷದ ವಿಧಾನ ಸಭಾ ಆಕಾಂಕ್ಷಿ ಡಾ.ಲಕ್ಷ್ಮೇಕಾಂತ್, ಮಧುಗಿರಿ ಜಿಲ್ಲಾಧ್ಯಕ್ಷ ಬಿ.ಕೆ.ಮಂಜುನಾಥ್, ತಾಲೂಕಾಧ್ಯಕ್ಷ ಪವನ್‌ಕುಮಾರ್, ಮಧುಗಿರಿ ತಾಲೂಕು ಅಧ್ಯಕ್ಷ ನರಸಿಂಹಮೂರ್ತಿ, ಮುಖಂಡರಾದ ತಿಮ್ಮಜ್ಜ, ವಿಜಯ್‌ಕುಮಾರ್, ಸುಶೀಲಮ್ಮ, ಮಮತಾ, ಗುರುದತ್, ದೇವರಾಜು, ಅರುಣ್‌ಕುಮಾರ್, ಸ್ವಾಮಿ, ಭಾನುಪ್ರಕಾಶ್ ಸೇರಿದಂತೆ ಇತರರು ಹಾಜರಿದ್ದರು.
ಆರ್‌ಎಸ್‌ಎಸ್‌ಗೆ ದಲಿತರನ್ನೇಕೆ ಮುಖ್ಯಸ್ಥರನ್ನಾಗಿ ಮಾಡಿಲ್ಲ: ಸಿದ್ದರಾಮಯ್ಯ
ಹುಬ್ಬಳ್ಳಿ : ಆರ್‌ಎಸ್‌ಎಸ್ ಜನ್ಮ ತಾಳಿ 97 ವರ್ಷ ಆಯಿತು. ಈ ವರೆಗೂ ದಲಿತರು, ಹಿಂದುಳಿದವರನ್ನು ಅದರ ಮುಖ್ಯಸ್ಥ(ಸರಸಂಘಚಾಲಕ) ಮಾಡಿಲ್ಲ. ಈ ಪ್ರಶ್ನೆಯನ್ನೇ ನಾನು ಚಲುವಾದಿ ನಾರಾಯಣ ಸ್ವಾಮಿ ಅವರನ್ನು ಕೇಳಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಮೂಲಕ ನಾರಾಯಣಸ್ವಾಮಿ ಟ್ವೀಟ್‌ಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಈಗ ಸಾಂಸ್ಕೃತಿಕ ಭಯೋತ್ಪಾದನೆ ಮಾಡುತ್ತಿದೆ. ಪಠ್ಯ ಪುಸ್ತಕ ವಿಚಾರದಲ್ಲಿ ಈ ರೀತಿ ಮಾಡುತ್ತಿದ್ದಾರೆ. ಬೆಂಕಿ ಹಚ್ಚುವುದೇ ಬಿಜೆಪಿ ಕೆಲಸ ಎಂದು ಕಿಡಿಕಾರಿದರು.
ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಈ ಸಲ ಕಾಂಗ್ರೆಸ್ ಗೆಲುವು ಸಾಧಿಸುತ್ತದೆ. ನಮ್ಮ ಅಭ್ಯರ್ಥಿ ಬಸವರಾಜ ಗುರಿಕಾರ ಪರವಾಗಿ ಧಾರವಾಡ, ಹಾವೇರಿಯಲ್ಲಿ ಪ್ರಚಾರ ನಡೆಸುತ್ತಿದ್ದೇನೆ ಎಂದರು.
ಸಿದ್ದರಾಮಯ್ಯಗೆ ಆರ್‌ಎಸ್‌ಎಸ್ ಪುಸ್ತಕ ಕಳುಹಿಸುವೆ: ಸಿ.ಟಿ.ರವಿ
ಪಿಎಸ್‌ಐ ಅಭ್ಯರ್ಥಿಗಳ ಮನವಿ:
ಇದೇ ವೇಳೆ ಪಿಎಸ್‌ಐ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳು ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ಯಾವುದೇ ಕಾರಣಕ್ಕೂ ಮರುಪರೀಕ್ಷೆಗೆ ಅವಕಾಶ ಮಾಡಿಕೊಡಬೇಡಿ. ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ಹೇರಿ ಎಂದು ಒತ್ತಾಯಿಸಿದರು.
ಪ್ರತಿಭಾವಂತ ವಿದ್ಯಾರ್ಥಿಗಳ ಜತೆಗೆ ಸರ್ಕಾರ ಚೆಲ್ಲಾಟ ಆಡುತ್ತಿದೆ. ಪಿಎಸ್‌ಐ ಹಗರಣದ ಬಗ್ಗೆ ಒಂದು ಕಡೆ ತನಿಖೆ ನಡೆಯುತ್ತಿದೆ. ಹೀಗಿರುವಾಗ ಮರು ಪರೀಕ್ಷೆಗೆ ಆದೇಶ ಮಾಡಿದ್ದು ಏಕೆ? ಸಿಐಡಿ ಈಗಾಗಲೇ ನಮ್ಮನ್ನು ವಿಚಾರಣೆ ಮಾಡಿದೆ. ಇನ್ನೂ ಹತ್ತು ತನಿಖಾ ಸಂಸ್ಥೆಗಳು ನಮ್ಮನ್ನು ವಿಚಾರಣೆ ಮಾಡಲಿ. ತಪ್ಪಿತಸ್ಥರಿಗೆ ಶಿಕ್ಷಯಾಗಲಿ, ಉಳಿದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪ್ರತಿ ನೀಡಲಿ. ನಾವು ಕಾನೂನು ಹೋರಾಟಕ್ಕೂ ಸಿದ್ಧರಿದ್ದೇವೆ ಎಂದು ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಸಿದ್ದರಾಮಯ್ಯ, ಸರ್ಕಾರದೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.
ಕೋಮವಾದಿ ಸೋಲಿಸಲು ಕಾಂಗ್ರೆಸ್‌ಗೆ ಜೆಡಿಎಸ್‌ಗೆ ಬೆಂಬಲ ನೀಡಲಿ
ಧಾರವಾಡ: ರಾಜ್ಯಸಭಾ ಚುನಾವಣೆಯಲ್ಲಿ ಕೋಮುವಾದಿಗಳನ್ನು ಸೋಲಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಒಂದಾಗಬೇಕು ಎಂದಾಗಿದ್ದರೆ ಜೆಡಿಎಸ್ ತಮ್ಮ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಬಾರದಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.