ಒಂದೇ ವೇದಿಕೆಯಲ್ಲಿ ಸಿದ್ದು, ಶ್ರೀರಾಮುಲು..!
ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮ| ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರ| ಸಿದ್ದರಾಮಯ್ಯ ನೇತೃತ್ವದಲ್ಲಿ ರಾಮುಲು ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ|
ಬಾದಾಮಿ(ಫೆ.11): ವಿಧಾನಸಭೆ ಚುನಾವಣೆಯಲ್ಲಿ ಪರಸ್ಪರ ಎದುರಾಳಿಯಾಗಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ಮೊದಲ ಬಾರಿಗೆ ಬಾದಾಮಿಯಲ್ಲಿ ಒಂದೇ ವೇದಿಕೆ ಹಂಚಿಕೊಳ್ಳಲಿದ್ದಾರೆ.
ಬಾದಾಮಿ ತಾಲೂಕಿನಲ್ಲಿ ಶುಕ್ರವಾರ ನೂರಾರು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮವಿದೆ.
ಬಾಗಲಕೋಟೆ: ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ, ಅಬಕಾರಿ ನಿರೀಕ್ಷಕನ ವಿರುದ್ಧ FIR
ಕ್ಷೇತ್ರದ ಶಾಸಕರೂ ಅಗಿರುವ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಬಿ.ಶ್ರೀರಾಮುಲು ಅವರು ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.