ಟಿ.ನರಸೀಪುರ (ಮಾ.21):  ಇತ್ತೀಚೆಗೆ ನಡೆದ ಮೈಮುಲ್‌ ಚುನಾವಣೆಯಲ್ಲಿ ಪರಾಭವಗೊಂಡ ಕಾರಣ ಖಿನ್ನತೆಗೆ ಒಳಗಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಪ್ತ ಸಾವಿಗೀಡಾಗಿದ್ದಾರೆ.

 ಜಿಪಂ ಮಾಜಿ ಅಧ್ಯಕ್ಷ ಕೆ.ಸಿ. ಬಲರಾಮ(65) ಶನಿವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 

'ಇನ್ನೊಂದು ತಿಂಗಳಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್‌ಗೆ ರಾಜೀನಾಮೆ' ..

ತಾಲೂಕಿನ ಕುಪ್ಯ ಗ್ರಾಮದವರಾದ ಬಲರಾಮ್‌, ಮೈಮುಲ್‌ ಚುನಾವಣೆಯಲ್ಲಿ ಸೋಲುಂಡಿದ್ದರು. ಇದರಿಂದ ಅವರು ಖಿನ್ನತೆಗೆ ಒಳಗಾಗಿದ್ದರು, ಇದೇ ಬೇಸರದಲ್ಲಿ 2 ದಿನಗಳ ಹಿಂದೆ ವಿಷ ಸೇವಿಸಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.