ಬೆಳಗಾವಿ (ಡಿ.06): ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಪ್ರತಿಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ವಿವಿಧ ಮುಖಂಡರು ಶನಿವಾರ ಬೆಳಗಾವಿಯಿಂದ ಬೆಂಗಳೂರಿಗೆ ಒಂದೇ ವಿಮಾನವೇರಿ ಪ್ರಯಾಣಿಸಿದರು.

 ಬೆಳಗಾವಿಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಮುಗಿಸಿಕೊಂಡು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಂಜೆ ವೇಳೆಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಇದೆ ವೇಳೆಗೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೂಡ ಬೆಂಗಳೂರಿಗೆ ತೆರಳಲು ಇಲ್ಲಿಗೆ ಆಗಮಿಸಿದರು. 

ಪ್ರತಾಪ್ ರಾಜೀನಾಮೆ : ಮನವೊಲಿಸಿದ ಸಿದ್ದರಾಮಯ್ಯ? ...

ಇದೆ ವೇಳೆ ವಿಮಾನ ನಿಲ್ದಾಣದ ಲಾಂಜ್‌ನಲ್ಲಿ ಪರಸ್ಪರ ಭೇಟಿಯಾಗಿ ಉಭಯ ಕುಶಲೋಪರಿ ವಿಚಾರಿಸಿಕೊಂಡರು ಎಂದು ಮೂಲಗಳು ತಿಳಿಸಿವೆ. ಇವರಲ್ಲದೆ, ಡಿಸಿಎಂ ಗೋವಿಂದ ಕಾರಜೋಳ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಅರವಿಂದ ಲಿಂಬಾವಳಿ, ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‌ ಕೂಡ ಒಂದೇ ವಿಮಾನದಲ್ಲಿ ತೆರಳಿದರು.