Asianet Suvarna News Asianet Suvarna News

ಸಿದ್ದರಾಮಯ್ಯರಿಂದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ : ಈಶ್ವರಪ್ಪ

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದಾಗಿಯೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಇನ್ನಷ್ಟು ಮಂದಿ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದರು.

Siddaramaiah Reason For BJP Form Govt in Karnataka Say Eshwarappa
Author
Bengaluru, First Published Oct 1, 2019, 2:24 PM IST

ಶಿವಮೊಗ್ಗ [ಅ.01]: ನನ್ನ ಹಾಗೂ ಬಿ.ಎಸ್. ಯಡಿಯೂರಪ್ಪ ರನ್ನು ಪರಸ್ಪರ ದೂರ ಮಾಡುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಈ ಸಂಬಂಧ ಪ್ರಕಟವಾದ ವರದಿಗಳೆಲ್ಲವೂ ಸತ್ಯಕ್ಕೆ ದೂರ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.

ನಗರದ ಡಿಎಆರ್ ಮೈದಾನದಲ್ಲಿ ಸೋಮವಾರ ಜಿಲ್ಲೆಯ ವಿವಿಧ ಕಾಮಗಾರಿ ಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತ ನಾಡಿದ ಅವರು, ರಾಜ್ಯದಲ್ಲಿ ಅತಿವೃಷ್ಟಿ ಯಿಂದಾಗಿ ಜನತೆ ಸಂಕಷ್ಟಕ್ಕೆ ಸಿಲುಕಿರುವುದನ್ನು ಮುಂದಿಟ್ಟುಕೊಂಡು ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ತಂತಿ ಯ ಮೇಲೆ ನಡೆಯುತ್ತಿದ್ದೇನೆ ಎಂದು ನೋವು ತೋಡಿಕೊಂಡಿದ್ದಾರೆ. ಯಡಿಯೂರಪ್ಪ ಅವರು ಯಾವುದೇ ಕಾರಣಕ್ಕೂ ಮನನೊಂದುಕೊಳ್ಳುವ ಅವಶ್ಯಕತೆ ಇಲ್ಲ. ರಾಜ್ಯದ ಜನತೆ ಹಾಗೂ ಪಕ್ಷದ ಶಾಸಕರು ನಿಮ್ಮ ಬೆಂಬಲಕ್ಕೆ ಇದ್ದೇವೆ ಎಂದು ಭರವಸೆ ನೀಡಿದರು.

ತಮ್ಮ ಭಾಷಣದಲ್ಲಿ ಮಾಧ್ಯಮದವರ ಮೇಲೆ ಹರಿಹಾಯ್ದ ಈಶ್ವರಪ್ಪ, ತಾವು ಮಾಧ್ಯಮಕ್ಕೆ ನೀಡಿದ ಹೇಳಿಕೆಯನ್ನು ಬೇರೊಂದು ಅರ್ಥದಲ್ಲಿ ಬಿತ್ತರಿಸಲಾಗಿದೆ. ಕೆಲವು ಮಾಧ್ಯಮಗಳಲ್ಲಿ ಯಡಿಯೂರಪ್ಪಗೆ ಈಶ್ವರಪ್ಪ ಟಾಂಗ್ ಎಂದು ಸುದ್ದಿ ಪ್ರಕಟಿಸಿವೆ. ಈ ರೀತಿ ಗೊಂದಲ ಮೂಡಿಸುವ ವ್ಯಕ್ತಿಗಳ ಬಗ್ಗೆ ಹುಷಾರಾಗಿ ಇರಬೇಕು ಎಂದರು. 

ಮಾಜಿ ಸಚಿವ ಯು.ಟಿ. ಖಾದರ್, ಆರೆಸ್ಸೆಸ್ ಮಾದರಿಯಲ್ಲಿ ಸಂಘಟನೆ ಹುಟ್ಟು ಹಾಕಲು ಮುಂದಾಗಿದ್ದಾರೆ ಎಂಬ ಮಾಧ್ಯ ಮದವರ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಆರ್ ಎಸ್‌ಎಸ್ ರಾಷ್ಟ್ರ ಭಕ್ತರನ್ನು ನಿರ್ಮಾಣ ಮಾಡಿದೆ. ಅದೇ ಮಾದರಿಯಲ್ಲಿ ಯು.ಟಿ. ಖಾದರ್ ಸಂಘಟನೆಯನ್ನು ಹುಟ್ಟು ಹಾಕಲಿ. ವ್ಯಕ್ತಿಗತವಾಗಿ ಅಥವಾ ವ್ಯಕ್ತಿಯ ಪರವಾಗಿ ಸಂಘಟನೆ ಕಟ್ಟಿದರೆ ಪ್ರಯೋಜನ ಇಲ್ಲ ಎಂದಿದ್ದೆ. ಹಿಂದೆ ಈ ರೀತಿ ಪ್ರಯತ್ನ ಪಟ್ಟು ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಅವರು ವಿಫಲರಾಗಿದ್ದಾರೆ. ಕುಮಾರ ಸ್ವಾಮಿ ಕೂಡ ವಿಫಲರಾಗುತ್ತಾರೆ ಎಂದು ಹೇಳಿಕೆ ನೀಡಿದ್ದು ನಿಜ. ಆದರೆ ನನ್ನ ಹಾಗೂ ಯಡಿಯೂರಪ್ಪ ನಡುವೆ ಮನಃಸ್ತಾಪ ಮೂಡಿಸುವ ಸಲುವಾಗಿ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರ ಹೆಸರು ಗಳನ್ನು ಸುದ್ದಿಯಿಂದ ಕೈಬಿಡಲಾಗಿದೆ. ಈ ರೀತಿ ಗೊಂದಲ ಸೃಷ್ಟಿ ಸುವ ಕೆಲಸಕ್ಕೆ ಮಾಧ್ಯ ಮದವರು ಕೈಹಾಕಬಾರದು ಎಂದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಇನ್ನಷ್ಟು ಶಾಸಕರು ಬಿಜೆಪಿಗೆ: ಸಿದ್ದ ರಾಮಯ್ಯ ಮಾಡಿದ ಕಾರ್ಯದಿಂದ ಬೇಸತ್ತು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಧಿಕ್ಕಾರ ಹಾಕಿ ಆ ಪಕ್ಷದ ಶಾಸಕರು ಹೊರ ಹೋದರು. ಪರಿಣಾಮ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಯಾಗಿದ್ದಾರೆ. ಸಿದ್ದರಾಮಯ್ಯಗೆ ಇದು ವರೆಗೂ ವಿರೋಧ ಪಕ್ಷದ ಸ್ಥಾನವನ್ನು ನೀಡಿ ಲ್ಲ. ಇದೇ ರೀತಿ ಸಿದ್ದರಾಮಯ್ಯ ವರ್ತನೆ ತೋರುತ್ತಾ ಹೋದರೆ ಇನ್ನಷ್ಟು ಶಾಸಕರು
ತಂತಿಬೇಲಿ ಹಾರಿ ಬಿಜೆಪಿಗೆ ಸೇರ್ಪಡೆಗೊಳ್ಳು ತ್ತಾರೆ ಎಂದು ಭವಿಷ್ಯ ನುಡಿದರು.

ಅಕ್ಟೋಬರ್ 01ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ;

Follow Us:
Download App:
  • android
  • ios