ಪಾವಗಡದಲ್ಲಿ ಸಿದ್ದರಾಮಯ್ಯ ಪ್ರಚಾರ : ಜಪಾನ್‌ ಮಾದರಿಯ ಬೃಹತ್‌ ವೇದಿಕೆ

ವಿಧಾನಸಭೆ ಚುನಾವಣೆ ಪ್ರಚಾರದ ಹಿನ್ನಲೆಯಲ್ಲಿ ಮೇ 1ರ ಸೋಮವಾರ ಬೆಳಗ್ಗೆ 11 ಗಂಟೆಗೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಇತರೆ ಗಣ್ಯರು ಪಾವಗಡಕ್ಕೆ ಆಗಮಿಸಲಿದ್ದು ತಾಲೂಕಿನ ಜನತೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

Siddaramaiah s campaign in Pavagada: A big platform like Japan snr

ಪಾವಗಡ: ವಿಧಾನಸಭೆ ಚುನಾವಣೆ ಪ್ರಚಾರದ ಹಿನ್ನಲೆಯಲ್ಲಿ ಮೇ 1ರ ಸೋಮವಾರ ಬೆಳಗ್ಗೆ 11 ಗಂಟೆಗೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಇತರೆ ಗಣ್ಯರು ಪಾವಗಡಕ್ಕೆ ಆಗಮಿಸಲಿದ್ದು ತಾಲೂಕಿನ ಜನತೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪದ ದೊಡ್ಡ ಕ್ರೀಡಾಂಗಣದಲ್ಲಿ ಹೆಲಿಕಾಪ್ಟರ್‌ ಕೆಳಗಿಳಿಯಲು ಸಿದ್ಧತೆ ಕೈಗೊಂಡಿದ್ದಾರೆ. ಇಲ್ಲಿನ ಚಳ್ಳಕರೆ ಕ್ರಾಸ್‌ ಬಳಿಯ ಸುಮಾರು 10 ಎಕರೆ ಜಮೀನಿನಲ್ಲಿ ಮಳೆ ಗಾಳಿಗೆ ತಡೆಯೊಡ್ಡುವ ಜಪಾನ್‌ ಮಾದರಿಯ ಸುಸಜ್ಜಿತವಾದ ಬೃಹತ್‌ ವೇದಿಕೆಯ ಸಿದ್ಧತೆ ಕೈಗೊಂಡಿದ್ದು, 11 ಗಂಟೆಗೆ ಕಾಪ್ಟರ್‌ ಮೂಲಕ ಆಗಮಿಸುವ ಸಿದ್ದರಾಮಯ್ಯರನ್ನು ಕ್ರೀಡಾಂಗಣದಲ್ಲಿ ಸ್ವಾಗತಿ ಬರಮಾಡಿಕೊಳ್ಳಲಿದ್ದಾರೆ. ಬಳಿಕ ಕಾರಿನಲ್ಲಿ ರೋಡ್‌ ಶೋ ಮೂಲಕ ವೇದಿಕೆ ಆಗಮಿಸಲಿದ್ದು ಇದಕ್ಕೂ ಮುನ್ನ ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆಗೆ ಮಾರ್ಲಾಪಣೆ ಸಲ್ಲಿಸಿ, ಶ್ರೀ ಶನೇಶ್ವರಸ್ವಾಮಿ ವೃತ್ತಕ್ಕೆ ತೆರಳಿ, ಅಲ್ಲಿಂದ ವಾಪಸಾಗಿ ಬಳ್ಳಾರಿ ರಸ್ತೆ ಮೂಲಕ ಚಳ್ಳಕರೆ ಕ್ರಾಸ್‌ ರೈತರೊಬ್ಬರ ಜಮೀನೊಂದರಲ್ಲಿ ನಿರ್ಮಿಸಿದ್ದ ಬೃಹತ್‌ ವೇದಿಕೆಗೆ ಆಗಮಿಸಿ ಸಮಸ್ತ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ವೇಳೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್‌, ಮಾಜಿ ಶಾಸಕ ಕೆ.ಎನ್‌.ರಾಜಣ್ಣ, ಮಾಜಿ ಸಂಸದ ಬಿ.ಎನ್‌.ಚಂದ್ರಪ್ಪ, ಮಾಜಿ ಸಚಿವ ಹಾಗೂ ಹಾಲಿ ಶಾಸಕ ವೆಂಕಟರಮಣಪ್ಪ, ಮಾಜಿ ಶಾಸಕ ಉಗ್ರನರಸಿಂಹಪ್ಪ, ಇಲ್ಲಿನ ಕಾಂಗ್ರೆಸ್‌ ಅಭ್ಯರ್ಥಿ ಎಚ್‌.ವಿ.ವೆಂಕಟೇಶ್‌, ಬ್ಲಾಕ್‌ ಕಾಂಗ್ರೆಸ್‌ ನಗರಾಧ್ಯಕ್ಷ ಸುದೇಶ್‌ಬಾಬು, ಮುಖಂಡರಾದ ಎ.ಶಂಕರರೆಡ್ಡಿ, ಕಾಂಗ್ರೆಸ್‌ ಅಧ್ಯಕ್ಷ ವಿರಪಸಮುದ್ರ ರಾಮಾಂಜಿನಪ್ಪ, ಅಲ್ಪಸಂಖ್ಯಾತರ ಘಟಕದ ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿ ಕಾಂಗ್ರೆಸ್‌ ಮುಖಂಡರು ಭಾಗವಹಿಸಲಿರುವುದಾಗಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸುದೇಶ್‌ಬಾಬು ತಿಳಿಸಿದ್ದು ಹೆಚ್ಚಿನ ಸಂಖ್ಯೆಯ ಕಾಂಗ್ರೆಸ್‌ ಕಾರ್ಯಕರ್ತರು ಆಗಮಿಸಿ ಸಮಾರಂಭ ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದ್ದಾರೆ.

 ಇನ್ನಾದರು ಜನ್ ಕಿ ಬಾತ್ ಕೇಳಲಿ

ಬೆಂಗಳೂರು (ಮೇ.01): ‘ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ, ನೀವು ನೂರು ‘ಮನ್‌ ಕೀ ಬಾತ್‌’ ಕಾರ್ಯಕ್ರಮಗಳನ್ನು ಮುಗಿಸಿದ್ದಕ್ಕೆ ಅಭಿನಂದನೆಗಳು. ಈಗಲಾದರೂ ‘ಜನ್‌ ಕೀ ಬಾತ್‌’ ಕೇಳುತ್ತೀರಾ? ನಿಮ್ಮ ಪಕ್ಷದ ಸಚಿವರೇ ಕಮಿಷನ್‌ ಹಣ ತಿಂದು ಜೈಲಿಗೆ ಹೋಗುತ್ತಿರುವುದೇಕೆ? 40 ಪರ್ಸೆಂಟ್‌ ಕಮಿಷನ್‌ ಬಗ್ಗೆ ಉತ್ತರಿಸುವ ಧೈರ್ಯ ತೋರಿಲ್ಲ ಯಾಕೆ?’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿರುವ ಅವರು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾಗಿದ್ದರೂ ಪೆಟ್ರೋಲ್‌ ಬೆಲೆ ಹೆಚ್ಚಾಗಿರುವುದು ಯಾಕೆ? ‘ನಾ ಖಾವುಂಗಾ ನಾ ಖಾನೆ ದೂಂಗಾ’ ಎಂದು ನೀವು ಹೇಳಿದರೂ, ನಿಮ್ಮ ಪಕ್ಷದ ಸಚಿವರೇ ಕಮಿಷನ್‌ ಹಣ ತಿಂದು ಜೈಲಿಗೆ ಹೋಗುತ್ತಿರುವುದೇಕೆ? ರಾಜ್ಯದ ಸಚಿವರು ಸರ್ಕಾರಿ ಗುತ್ತಿಗೆಗಳಲ್ಲಿ 40% ಕಮಿಷನ್‌ ಕೇಳುತ್ತಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ನಿಮಗೆ ಪತ್ರ ಬರೆದಿದ್ದರೂ ಅದಕ್ಕೆ ಉತ್ತರಿಸುವ ಧೈರ್ಯ ತೋರಿಲ್ಲ ಯಾಕೆ? ಎಂದು ಕೇಳಿದ್ದಾರೆ.

ಬಿಜೆಪಿ ಅಧಿಕಾರದಲ್ಲಿರುವವರೆಗೆ ಅಚ್ಛೇದಿನ್‌ ಬರುವುದಿಲ್ಲ: ಡಿ.ಕೆ.ಶಿವಕುಮಾರ್‌

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಿಗಬೇಕಾಗಿರುವ ತೆರಿಗೆ ಹಂಚಿಕೆಯ ಪಾಲು ಶೇಕಡಾ 4.72ರಿಂದ ಶೇಕಡಾ 3.64ಕ್ಕೆ ಇಳಿದದ್ದು ಯಾಕೆ? ಪಿಎಸ್‌ಐ ನೇಮಕದಲ್ಲಿ ನೂರಾರು ಕೋಟಿ ರು. ಅವ್ಯವಹಾರ ಮಾಡಿ 54 ಸಾವಿರ ಅಭ್ಯರ್ಥಿಗಳ ಜೀವನ ಹಾಳು ಮಾಡಿದ್ದರ ವಿರುದ್ಧ ಮೌನವಾಗಿರುವುದು ಯಾಕೆ? ನೀವು ರೋಡ್‌ ಶೋ ನಡೆಸಿರುವ ಬೆಂಗಳೂರು ರಸ್ತೆಗಳಲ್ಲಿರುವ 25,000 ಗುಂಡಿಗಳನ್ನು ಮುಚ್ಚಲು 7200 ಕೋಟಿ ರು. ಅಂದರೆ ಒಂದು ಗುಂಡಿಗೆ ತಲಾ 9.20 ಲಕ್ಷ ರು. ಖರ್ಚು ಮಾಡಿದರೂ ಗುಂಡಿಗಳು ಉಳಿದುಕೊಂಡಿರುವುದು ಯಾಕೆ ಎಂಬುದು ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ಖಾರವಾಗಿ ಪ್ರಶ್ನಿಸಿದ್ದಾರೆ.

ಕೇಸರಿ ಪೇಟ ನಿರಾಕರಿಸಿದ ಸಿದ್ದು: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭಾನುವಾರ ತುಮಕೂರು ಜಿಲ್ಲೆ ಶಿರಾದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಟಿ.ಬಿ.ಜಯಚಂದ್ರ ಪರ ಭರ್ಜರಿ ಪ್ರಚಾರ ನಡೆಸಿದರು. ಈ ವೇಳೆ, ಅವರಿಗೆ ಕೇಸರಿ ಬಣ್ಣದ ಪೇಟ, ಕಾಂಗ್ರೆಸ್‌ ಪಕ್ಷದ ಶಾಲು ಮತ್ತು ಹಾರ ಹಾಕಲು ಅಭಿಮಾನಿಗಳು ಮುಂದಾದಾಗ, ‘ನನಗೆ ಕೇಸರಿ ಬಣ್ಣದ ಪೇಟ ಬೇಡ’ ಎಂದು ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದರು. ಪೇಟ ನಿರಾಕರಿಸಿ, ಕಾಂಗ್ರೆಸ್‌ ಪಕ್ಷದ ಶಾಲು ಮತ್ತು ಹಾರವನ್ನು ಮಾತ್ರ ಹಾಕಿಸಿಕೊಂಡರು. ಇದೇ ವೇಳೆ, ಶಿರಾದ ಗಡಾರಿ ಹನುಮಂತಪ್ಪ ಎಂಬುವರು ಸಿದ್ದುಗೆ ಟಗರನ್ನು ಉಡುಗೊರೆಯಾಗಿ ನೀಡಿದರು.

ಭ್ರಷ್ಟಾಚಾರವನ್ನು ಎಂದೆಂದಿಗೂ ಬಿಜೆಪಿ ಸಹಿಸುವುದಿಲ್ಲ: ಕೇಂದ್ರ ಸಚಿವ ರಾಜನಾಥ್‌ ಸಿಂಗ್‌

Latest Videos
Follow Us:
Download App:
  • android
  • ios