Asianet Suvarna News Asianet Suvarna News

ಬಿಜೆಪಿಗೆ ಬಹುಮತ ಸಿಗದಿದ್ದರೆ ಜೆಡಿಎಸ್ ಬೆಂಬಲ ನೀಡಲ್ಲ: ಸಿದ್ದರಾಮಯ್ಯ

ಮಹಾರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ಆಗಿದೆ| ನಾನು ಇತಿಹಾಸದಲ್ಲಿ ಎಲ್ಲಿಯೂ ಇಂತದ್ದನ್ನು ನೋಡಿರಲಿಲ್ಲ‌| ರಾತ್ರೋರಾತ್ರಿ ರಾಷ್ಟ್ರಪತಿ ಆಡಳಿತ ಹಿಂತೆಗೆದುಕೊಂಡಿದ್ದು, ಬೆಳಗಾಗುವಷ್ಟರಲ್ಲಿ ಬಹುಮತ ಇಲ್ಲದ ಸರ್ಕಾರ ರಚನೆ ಮಾಡಿದ್ದಾರೆ| ಇದಕ್ಕಿಂತ ದೊಡ್ಡ ಪ್ರಜಾಪ್ರಭುತ್ವದ ಅಣಕ ಇನ್ನೊಂದಿಲ್ಲ ಎಂದ ಸಿದ್ದರಾಮಯ್ಯ| 

Siddaramaiah Said that JDS Does Not Support to BJP
Author
Bengaluru, First Published Nov 25, 2019, 9:48 AM IST

ಹುಬ್ಬಳ್ಳಿ(ನ.25): ಬಿಜೆಪಿಯವರು ಎಂಟು ಸ್ಥಾನ ಗೆಲ್ಲದಿದ್ದರೆ ಸಿಎಂ ಯಡಿಯೂರಪ್ಪ ಅವರು ರಾಜೀನಾಮೆ ಕೊಡಬೇಕಾಗುತ್ತದೆ. ಕುದುರೆ ವ್ಯಾಪಾರ ಮಾಡಿ, 17 ಶಾಸಕರನ್ನು ಕೊಂಡುಕೊಂಡು ಸರ್ಕಾರ ಮಾಡಿದ್ದಾರೆ.ಬಿಜೆಪಿಗೆ ಬಹುಮತ ಸಿಗದಿದ್ದರೆ ಜೆಡಿಎಸ್ ಬೆಂಬಲ ನೀಡಲ್ಲ, ನಾನು ಕೂಡ ಜೆಡಿಎಸ್‌ನಲ್ಲಿ ಇದ್ದು ಬಂದವನೆ ಹಾಗಾಗಿ ನನಗೆ ಗೊತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 

ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಪಾಪ ಡಿಸ್ಟರ್ಬ್ ಆಗಿದ್ದಾರೆ. ಸೋಲುತ್ತೇವೆ ಎಂದು ಗೊತ್ತಾಗಿ ಏನೇನೋ ಹೇಳ್ತಿದ್ದಾರೆ ಎಂದು ತಿಳಿಸಿದ್ದಾರೆ. 

ಮಹಾರಾಷ್ಟ್ರದಲ್ಲಿ ಆದ ರಾಜಕೀಯ ಬದಲಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮಹಾರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ಆಗಿದೆ.ನಾನು ಇತಿಹಾಸದಲ್ಲಿ ಎಲ್ಲಿಯೂ ಇಂತದ್ದನ್ನು ನೋಡಿರಲಿಲ್ಲ‌. ರಾತ್ರೋರಾತ್ರಿ ರಾಷ್ಟ್ರಪತಿ ಆಡಳಿತ ಹಿಂತೆಗೆದುಕೊಂಡಿದ್ದು, ಬೆಳಗಾಗುವಷ್ಟರಲ್ಲಿ ಬಹುಮತ ಇಲ್ಲದ ಸರ್ಕಾರ ರಚನೆ ಮಾಡಿದ್ದಾರೆ. ಇದಕ್ಕಿಂತ ದೊಡ್ಡ ಪ್ರಜಾಪ್ರಭುತ್ವದ ಅಣಕ ಇನ್ನೊಂದಿಲ್ಲ ಎಂದು ಹೇಳಿದ್ದಾರೆ. 

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಆಗಬಹುದು ಅಂದುಕೊಂಡಿದ್ದೇನೆ. ಚುನಾವಣೆ ಆದ್ರೆ ನೂರಕ್ಕೆ ನೂರು ನಾವು ಗೆಲ್ಲುತ್ತೇವೆ. ಆಗ ಸಿಎಂ ಯಾರಾಗಬೇಕೆಂದು ಶಾಸಕಾಂಗ ಸಭೆ, ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಹೇಳಿದ್ದಾರೆ. 

ಯಡಿಯೂರಪ್ಪ ಪಾಪ ಡಿಸ್ಟರ್ಬ್ ಆಗಿದ್ದಾರೆ. ಉಪಚುನಾವಣೆಯಲ್ಲಿ ಸೋಲುತ್ತೇವೆ ಎಂದು ಗೊತ್ತಾಗಿ ಏನೇನೋ ಹೇಳ್ತಿದ್ದಾರೆ ಎಂದು ತಿಳಿಸಿದ್ದಾರೆ. 

ಡಿಸೆಂಬರ್ 5ರಂದು ಕರ್ನಾಟಕದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, 9ರಂದು ಫಲಿತಾಂಶ ಪ್ರಕಟವಾಗಲಿದೆ.

Follow Us:
Download App:
  • android
  • ios