ಧಾರವಾಡ(ಡಿ.14): ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರ ಮನೆಗೆ ಭಾನುವಾರ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಅವರ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. 

ತದನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರಿಗೆ ನ್ಯಾಯ ಸಿಕ್ಕೇ ಸಿಗುತ್ತದೆ. ಎಲ್ಲ ಕಾರ್ಯಕರ್ತರು ಧೈರ್ಯದಿಂದ ಇರಬೇಕು ಎಂದು ಹೇಳಿದ್ದಾರೆ.

'ಸಭೆ ಯಶಸ್ವಿ ಆಗದೇ ಹೋದಲ್ಲಿ ಬಿಎಸ್‌ವೈ ಸರ್ಕಾರಕ್ಕೆ ಬಿಸಿ ತಟ್ಟಿಸುತ್ತೇವೆ'

ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಕಾರ್ಯಕರ್ತರಿಗೆ ಧೈರ್ಯ ತುಂಬಿದ್ದೇನೆ. ನ್ಯಾಯಕ್ಕೆ ಯಾವತ್ತಿದ್ದರೂ ಜಯ ದೊರೆಯುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.