ಬಾಕಿ ಕೊಡದಿರುವ ಕಾರ್ಖಾನೆಗಳ ಸಕ್ಕರೆ ಜಪ್ತಿ ಮಾಡಿ: ಸಚಿವ ಈಶ್ವರ ಖಂಡ್ರೆ

ಬಾಕಿ ಉಳಿಸಿಕೊಂಡಿರುವ ಜಿಲ್ಲೆಯ ಭಾಲ್ಕೇಶ್ವರ, ಬಿಕೆಎಸ್‌ಕೆ ಕಾರ್ಖಾನೆಗಳು, ಬೀದರ್‌ ಜಿಲ್ಲಾಧಿಕಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಖಡಕ್‌ ಸೂಚನೆ

Sieze Sugar From Unpaid Factories Says Minister Eshwar Khandre grg

ಬೀದರ್‌(ಜು.09): ಕಬ್ಬಿನ ಬಾಕಿ ಉಳಿಸಿಕೊಂಡಿರುವ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಸಕ್ಕರೆ ಜಪ್ತಿ ಮಾಡಿ ರೈತರ ಖಾತೆಗಳಿಗೆ ಜಮೆ ಮಾಡಿ ಸೋಮವಾರ ಸಂಜೆ ಒಳಗಾಗಿ ವರದಿ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕಲ್ಯಾಣ ಕರ್ನಾಟಕ ಪದ್ರೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಕ್ಕರೆ ಕಾರ್ಖಾನೆಗಳಿಗೆ ಬಾಕಿ ನೀಡಲು ಗಡುವು ವಿಸ್ತರಿಸುತ್ತ ಹೋಗದಂತೆ ತಿಳಿಸಿದರು.

ಕಲ್ಯಾಣದ ಅಭಿವೃದ್ಧಿಗೆ ಬಜೆಟ್‌ ಪೂರಕ: ಸಚಿವ ಈಶ್ವರ್ ಖಂಡ್ರೆ

ಬೀದರ್‌ನ ಬಿಕೆಎಸ್‌ಕೆ ಹಾಗೂ ಭಾಲ್ಕೇಶ್ವರ ಸಕ್ಕರೆ ಕಾರ್ಖಾನೆ ರೈತರ ಬಾಕಿ ಉಳಿಸಿಕೊಂಡಿದ್ದು, ಏಪ್ರಿಲ್‌ ತಿಂಗಳಲ್ಲಿಯೇ ಕಬ್ಬಿನ ಹಣ ಪಾವತಿಸಬೇಕಿತ್ತು. ಕಬ್ಬು ಪೂರೈಸಿದ 15 ದಿನಗಳ ಒಳಗಾಗಿ ಬಾಕಿ ಪಾವತಿಸುವುದು ನಿಯಮ, ಅಷ್ಟಕ್ಕೂ ಒಂದು ತಿಂಗಳು ತಡವಾಗಿ ಪಾವತಿಸಿದಲ್ಲಿ ಸಹಿಸಬಹುದು. ಆದರೆ ಮೂರು ತಿಂಗಳಾದರೂ ಬಾಕಿ ಪಾವತಿಸದ ಕಾರ್ಖಾನೆಗಳನ್ನು ಕ್ಷಮಿಸಕೂಡದು ಎಂದು ಸೂಚಿಸಿದರು.

ಈಗಾಗಲೇ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ ಕಾರ್ಯಕ್ರಮವು ಜು.1ರಿಂದ ಬೀದರ್‌ನಿಂದಲೇ ಆರಂಭಗೊಂಡಿದ್ದು ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 68 ಲಕ್ಷ ಸಸಿಗಳನ್ನು ನೆಡಲಾಗಿದೆ. ಜಿಲ್ಲೆಯಲ್ಲಿ 4.22 ಲಕ್ಷ ಸಸಿಗಳನ್ನು ನೆಡಲಾಗಿದೆ. ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆ, ಗ್ರಾಮೀಣ ರಸ್ತೆಗಳ ಬದಿಯಲ್ಲಿ ಸಸಿಗಳನ್ನು ನೆಡಲು ಕ್ರಮ ವಹಿಸಲು ಅರಣ್ಯಾಧಿಕಾರಿಗಳಿಗೆ ತಿಳಿಸಿದರು.

ರಾಜ್ಯದಲ್ಲಿ 7ಲಕ್ಷ ಟನ್‌ ಅಕ್ಕಿ ಇದ್ದರೂ ಕೇಂದ್ರ ಸರ್ಕಾರ ಕೊಡುತ್ತಿಲ್ಲ : ಖಂಡ್ರೆ ಕಿಡಿ

ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು ಬಿತ್ತನೆ ಕಾರ್ಯ ಚುರುಕುಗೊಂಡಿದ್ದು ರೈತರಿಗೆ ಯಾವುದೇ ರೀತಿಯಲ್ಲಿ ಬೀಜ ಹಾಗೂ ರಸಗೊಬ್ಬರಗಳ ಕೊರತೆಯಾಗಬಾರದು. ಬೆಳೆ ಹಾನಿಯಾದ ರೈತರಿಗೆ ಇರುವ ಫಸಲ್‌ ಭಿಮಾ ಯೋಜನೆ ಅಡಿಯಲ್ಲಿ ಬಾಕಿ ಉಳಿದ ಬೆಳೆ ವಿಮಾ ಹಣವನ್ನು ಕೊಡಲೇ ಪಾವತಿಸಲು ಕ್ರಮಕೈಗೊಳ್ಳುವಂತೆ ಜಿಲ್ಲಾ ಕೃಷಿ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ. ಎಂ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ, ಜಿಲ್ಲಾ ಪ್ರದೇಶಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎ ಸೇರಿದಂತೆ ಜಿಲ್ಲಾ ಎಸ್‌ಎಲ…, ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios