ದಕ್ಷಿಣ ಕನ್ನಡಕ್ಕೆ ಹೊಸ ಜಿಲ್ಲಾಧಿಕಾರಿ ನೇಮಕ/ ಸಸಿಕಾಂಥ್ ಸೆಂಥಿಲ್ ರಾಜೀನಾಮೆ ನೀಡಿದ್ದರು/ ಸಿಂಧೂ ಬಿ.ರೂಪೇಶ್ ನೂತನ ಜಿಲ್ಲಾಧಿಕಾರಿ
ಮಂಗಳೂರು[ಸೆ. 06] ದಕ್ಷಿಣ ಕನ್ನಡಕ್ಕೆ ನೂತನ ಜಿಲ್ಲಾಧಿಕಾರಿಯ ನೇಮಕವಾಗಿದೆ. ಐಎಎಸ್ ಸೇವೆಗೆ ರಾಜೀನಾಮೆ ಸಲ್ಲಿಸಿದ್ದ ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಜಾಗಕ್ಕೆ ಸಿಂಧೂ ಬಿ.ರೂಪೇಶ್ ಅವರನ್ನು ನೇಮಕ ಮಾಡಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಉಡುಪಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ಸಿಂಧೂ ಬಿ.ರೂಪೇಶ್ ಅವರು ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಲಿದ್ದಾರೆ.
ಸಸಿಕಾಂತ್ ಸೆಂಥಿಲ್ ದಿಢೀರ್ ರಾಜೀನಾಮೆ ಹಿಂದಿನ ಅಸಲಿ ಸತ್ಯ ಬಹಿರಂಗ
2009ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ 2017ರ ಅಕ್ಟೋಬರ್ 10ರಿಂದ ದ.ಕ ಜಿಲ್ಲಾಧಿಕಾರಿಯಾಗಿ ಸೇವೆ ಆರಂಭಿಸಿದ್ದರು. ದಕ್ಷ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ತಮ್ಮ ರಾಜೀನಾಮೆ ವೈಯಕ್ತಿಕ ನಿರ್ಧಾರ ಎಂದು ಹೇಳಿ ಕೆಲ ಸವಾಲುಗಳನ್ನು ಉಲ್ಲೇಖಿಸಿದ್ದರು.
