ಪರಿಶಿಷ್ಟ ಜಾತಿ, ಪ.ಪಂಗಡ ಸಮುದಾಯಗಳಿಗೆ ನಿಗದಿಪಡಿಸಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡು ಎಸ್ಸಿ, ಎಸ್ಟಿ ಸಮುದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ಯಾಯ ಎಸಗಿದ್ದಾರೆ ಎಂದು ಮಾಜಿ ಮೇಯರ್ ಶಿವಕುಮಾರ್ ದೂರಿದರು.
ಮೈಸೂರು : ಪರಿಶಿಷ್ಟ ಜಾತಿ, ಪ.ಪಂಗಡ ಸಮುದಾಯಗಳಿಗೆ ನಿಗದಿಪಡಿಸಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡು ಎಸ್ಸಿ, ಎಸ್ಟಿ ಸಮುದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ಯಾಯ ಎಸಗಿದ್ದಾರೆ ಎಂದು ಮಾಜಿ ಮೇಯರ್ ಶಿವಕುಮಾರ್ ದೂರಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬುಡಕಟ್ಟು ಸಮುದಾಯಕ್ಕೆ ಸೇರಿದ ದ್ರೌಪದಿ ಮುರ್ಮು ಅವರನ್ನು ಬಿಜೆಪಿ ರಾಷ್ಟ್ರಪತಿಯಾಗಿ ಆಯ್ಕೆ ಮಾಡಿದರೆ, ಆ ಸಾಂವಿಧಾನಿಕ ಸ್ಥಾನದಲ್ಲಿರುವ ಮುರ್ಮು ಅವರ ಬಗ್ಗೆ ಕಿಂಚಿತ್ತೂ ಗೌರವಿಲ್ಲದೆ, ಅವರನ್ನು ಬಹಳ ಏಕವಚನದಿಂದಲೇ ನಿಂದಿಸಿ, ಅವಮಾನ ಮಾಡಿದ್ದಾರೆ ಎಂದು ಕಿಡಿಕಾರಿದರು.
ಭದ್ರತೆಯ ಕಾರಣದಿಂದಾಗಿ ಶಿಷ್ಠಾಚಾರದ ಪ್ರಕಾರ ರಾಷ್ಟ್ರಪತಿಗಳನ್ನು ಸಂಸತ್ ಭವನ ಉದ್ಘಾಟನೆ ಹಾಗೂ ಅಯೋಧ್ಯೆಯ ಶ್ರೀರಾಮಮಂದಿರ ಉದ್ಘಾಟನೆಯ ಕಾರ್ಯಕ್ರಮಕ್ಕೆ ಆಹ್ವಾನಿಸಲಿಲ್ಲ. ಈ ವಿಚಾರವನ್ನು ರಾಷ್ಟ್ರಪತಿಗಳಿಗೆ ಮೊದಲೇ ತಿಳಿಸಿ, ಅವರ ಅನುಮತಿಯನ್ನೂ ಪಡೆದುಕೊಳ್ಳಲಾಗಿತ್ತು. ಹಾಗಾಗಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯ ಕುರಿತು ರಾಷ್ಟ್ರಪತಿಗಳೇ ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿಯಿಂದ ರಾಷ್ಟ್ರಪತಿಗಳಿಗೆ ಯಾವುದೇ ರೀತಿಯಿಂದ ಅವಮಾನವಾಗುವಂತೆ ಮಾಡಿಲ್ಲ. ಅಗೌರವ ತೋರಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಎಸ್ಸಿ ಎಸ್ಟಿಗಳ ಅಭಿವೃದ್ಧಿಗೆ ಮೀಸಲಾದ ಅನುದಾನವನ್ನು ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆಂದು ದುರ್ಬಳಕೆ ಮಾಡಿಕೊಂಡಿರುವ ಸಿಎಂ ಸಿದ್ದರಾಮಯ್ಯನವರು, ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ ಅನುದಾನ ನೀಡುವುದಾಗಿ ಘೋಷಿಸಿ, ಅದರಲ್ಲಿ ಮೊದಲ ಕಂತಾಗಿ ಒಂದುವರೆ ಸಾವಿರ ಕೋಟಿ ರೂ. ಬಿಡುಗಡೆಗೊಳಿಸಿದ್ದಾರೆ. ಆದರೆ ಪರಿಶಿಷ್ಟ ಜಾತಿ, ಪಂಗಡದವರಿಗೆ ಯಾವುದೇ ಅನುದಾನವನ್ನು ಬಿಡುಗಡೆಗೊಳಿಸಿಲ್ಲ. ಇದು ನೂನ ಸರ್ಕಾರ ಮಾಡಿಲ್ಲ. ಇದು ಸಿದ್ದರಾಮಯ್ಯನವರು ಎಸ್ಸಿ, ಎಸ್ಟಿ ಸಮುದಾಯಗಳ ಬಗ್ಗೆ ಅನುಸರಿಸುತ್ತಿರುವ ತಾತ್ಸಾರ ಧೋರಣೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಯಿಂದಲೇ ಎಸ್ಟಿ ಸಮುದಾಯಕ್ಕೆ ಅನೇಕ ಕೊಡುಗೆ ಸಿಕ್ಕಿದೆ
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಎಸ್ಟಿ ಮೋರ್ಚಾದ ಮೈಸೂರು ನಗರಾಧ್ಯಕ್ಷ ಪಡುವಾರಹಳ್ಳಿ ರಾಮಕೃಷ್ಣ, ಗ್ರಾಮಾಂತರ ಜಿಲ್ಲಾಧ್ಯಕ್ಷ ಮುದ್ದುಕೃಷ್ಣ, ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ನಾರಾಯಣ್ ಲೋಲಪ್ಪ, ಕೃಷ್ಣ ನಾಯಕ, ಮಾಧ್ಯಮ ಸಂಚಾಲಕ ಮಹೇಶ್ ರಾಜೇ ಅರಸ್ ಮತ್ತಿತರರು ಉಪಸ್ಥಿತರಿದ್ದರು.
