ಪರಿಶಿಷ್ಟರಿಗೆ ಬಿಜೆಪಿಯಿಂದ ಸಾಮಾಜಿಕ ನ್ಯಾಯ : ಜಗದೀಶ್‌

ಪರಿಶಿಷ್ಟಜಾತಿಪಟ್ಟಿಯಲ್ಲಿನ ಎಲ್ಲಾ ಸಮುದಾಯಗಳಿಗೂ ವ್ಶೆಜ್ಞಾನಿಕ ನೆಲೆಗಟ್ಟಿನಲ್ಲಿ ಸಾಮಾಜಿಕ ನ್ಯಾಯ ಒದಗಿಸುವ ಮಹತ್ವದ ನಿರ್ಣಯವನ್ನು ಭಾರತೀಯ ಜನತಾ ಪಕ್ಷದ ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಜಿಲ್ಲಾ ಎಸ್ಸಿ ಮೋರ್ಚಾ ಉಪಾಧ್ಯಕ್ಷ ಸೋಮೇನಹಳ್ಳಿ ಜಗದೀಶ್‌ ತಿಳಿಸಿದರು.

 Social justice for Scheduled Castes from BJP Jagadish snr

  ತುರುವೇಕೆರೆ :  ಪರಿಶಿಷ್ಟv ಜಾತಿ ಪಟ್ಟಿಯಲ್ಲಿನ ಎಲ್ಲಾ ಸಮುದಾಯಗಳಿಗೂ ವ್ಶೆಜ್ಞಾನಿಕ ನೆಲೆಗ ಟ್ಟಿನಲ್ಲಿ ಸಾಮಾಜಿಕ ನ್ಯಾಯ ಒದಗಿಸುವ ಮಹತ್ವದ ನಿರ್ಣಯವನ್ನು ಭಾರತೀಯ ಜನತಾ ಪಕ್ಷದ ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಜಿಲ್ಲಾ ಎಸ್ಸಿ ಮೋರ್ಚಾ ಉಪಾಧ್ಯಕ್ಷ ಸೋಮೇನಹಳ್ಳಿ ಜಗದೀಶ್‌ ತಿಳಿಸಿದರು.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸದಾಶಿವ ಆಯೋಗದ ವರದಿ ಜಾರಿಗಾಗಿ 1997ರಿಂದಲೂ ಹೋರಾಟ ನಡೆದಿತ್ತು. ಬಿ.ಎಸ್‌.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ವೇಳೆ ಸದಾಶಿವ ಆಯೋಗ ರಚಿಸಿ 5 ಕೋಟಿ ರು. ಹಣ ಬಿಡುಗಡೆ ಮಾಡುವ ಮೂಲಕ ಒಳಮೀಸಲಿಗೆ ಹಸಿರು ನಿಶಾನೆ ನೀಡಿದ್ದರು. ಇದೀಗ ಎಡ ಹಾಗೂ ಬಲ ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಅಸ್ಪೃಶ್ಯ ಜಾತಿಗಳಾದ ಎಡಗೈಗೆ ಶೇ.6 ಹಾಗೂ ಬಲಗೈಗೆ ಶೇ.5.5, ಸ್ಪಶ್ರ್ಯ ಜಾತಿಗಳಾದ ಭೋವಿ, ಲಂಬಾಣಿ, ಕೊರಮ, ಕೊರಚ ಜಾತಿಗಳಿಗೆ ಶೇ.4.5 ಹಾಗೂ ಅಲೆಮಾರಿ ಸಮುದಾಯಕ್ಕೆ ಶೇಕಡಾ 1ರಷ್ಟುಮೀಸಲು ನಿಗದಿಪಡಿಸಿ ಸಾಮಾಜಿಕ ನ್ಯಾಯವನ್ನು ಬಿಜೆಪಿ ಸರಕಾರ ಎತ್ತಿ ಹಿಡಿದಿದೆ ಎಂದು ಸೋಮೇನಹಳ್ಳಿ ಜಗದೀಶ್‌ ಹರ್ಷ ವ್ಯಕ್ತಪಡಿಸಿದರು.

ಬಹು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಈ ಮೀಸಲಾತಿಯನ್ನು ಜಾರಿಗೊಳಿಸಿದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರಿಗೆ ತಾಲೂಕು ಬಿಜೆಪಿ ಘಟಕದ ವತಿಯಿಂದ ವಿಶೇಷ ಅಭಿನಂದನೆ ಸಲ್ಲಿಸುವುದಾಗಿಯೂ ಸೋಮೇನಹಳ್ಳಿ ಜಗದೀಶ್‌ ಹೇಳಿದರು.

ತಾಲೂಕು ಎಸ್ಸಿ ಮೋರ್ಚಾ ಅಧ್ಯಕ್ಷ ರವೀಂದ್ರಕುಮಾರ್‌ ಮಾತನಾಡಿ, ಬಿಜೆಪಿ ದಲಿತ ವಿರೋಧಿ ಎಂಬ ವಿಪಕ್ಷಗಳ ಆರೋಪಕ್ಕೆ ನಮ್ಮ ಸರಕಾರ ತೆರೆ ಎಳೆದಿದೆ. ಈ ಬಾರಿ ದಲಿತರು ಬಿಜೆಪಿಯನ್ನು ಬೆಂಬಲಿಸುವ ಮೂಲಕ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎಸ್‌ಸಿ ಮೋರ್ಚಾ ಉಪಾಧ್ಯಕ್ಷ ಗಂಗಾಧರ್‌, ಪ್ರಧಾನ ಕಾರ್ಯದರ್ಶಿ ಮರಾಠಿಪಾಳ್ಯದ ಚಂದ್ರೇಶ್‌, ಪ.ಪಂ. ಮಾಜಿ ಸದಸ್ಯ ಷಣ್ಮುಖಪ್ಪ, ಕುಣಿಕೇನಳ್ಳಿ ರವೀಂದ್ರ ಮತ್ತು ದೊರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷಗಳು ಒಳ ಮೀಸಲು ವಿಚಾರವನ್ನು ರಾಜಕೀಯಕ್ಕಾಗಿ ಜೀವಂತವಾಗಿರಿಸಿದ್ದರು. ಬಿಜೆಪಿ ಪಕ್ಷ ಒಳಮೀಸಲು ಜಾರಿ ವಿಚಾರದಲ್ಲಿ ಬದ್ಧತೆ ತೋರುವ ಮೂಲಕ ಎಡ ಹಾಗೂ ಬಲಗೈ ಸಮುದಾಯದ ಹಿತ ರಕ್ಷಿಸಿದೆ.

- ರವೀಂದ್ರಕುಮಾರ್‌, ತಾಲೂಕು ಎಸ್ಸಿ ಮೋರ್ಚಾ ಅಧ್ಯಕ್ಷ

ಯಾವ ಜಾತಿಯನ್ನೂ ತೆಗೆದಿಲ್ಲ

ಬೆಂಗಳೂರು (ಮಾ.30): ಪರಿಶಿಷ್ಟ ಜಾತಿ ಪಟ್ಟಿಯಿಂದ ಕೆಲವು ಸಮುದಾಯಗಳನ್ನು ಕೈಬಿಡಲಾಗಿದೆ ಎಂಬ ರಾಜಕೀಯ ಪ್ರೇರಿತ ಕುತಂತ್ರವನ್ನು ಕಾಂಗ್ರೆಸ್‌ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರಿಹಾಯ್ದಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಸಮುದಾಯಗಳಿಗೆ ಕಾಂಗ್ರೆಸ್‌ನವರು ಸುಳ್ಳು ಮಾಹಿತಿ ಕೊಡುತ್ತಿದ್ದಾರೆ. ಬಂಜಾರ, ಭೋವಿ, ಕೊರಚ ಯಾರನ್ನೂ ಕೂಡ ಪಟ್ಟಿಯಿಂದ ತೆಗೆಯಲಾಗುವುದಿಲ್ಲ. ಈ ಬಗ್ಗೆ ಫೆಬ್ರವರಿ ಮಾಹೆಯಲ್ಲಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ. ಇವೆಲ್ಲ ಮಹಾರಾಜರ ಕಾಲದಿಂದಲೂ ಇರುವಂಥ ಸಮುದಾಯಗಳು. ಸಂವಿಧಾನ ಆದ ನಂತರ ಇದ್ದ ಆರು ಸಮುದಾಯಗಳಲ್ಲಿ ಇವೂ ಇದ್ದು, ತೆಗೆಯುವ ಪ್ರಶ್ನೆಯೇ ಇಲ್ಲ ಎಂಬುದನ್ನು ಆಧಾರ ಸಮೇತವಾಗಿ ನೀಡಲಾಗಿದೆ ಎಂದು ತಿಳಿಸಿದರು.

ಯಡಿಯೂರಪ್ಪ ಮನೆ ಮೇಲೆ ದಾಳಿ ಕಾಂಗ್ರೆಸ್‌ ಕುತಂತ್ರ: ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ಹೊಡೆದಿದ್ದು ಬಿಜೆಪಿ ಕುತಂತ್ರ ಅಲ್ಲ. ಅದು ಕಾಂಗ್ರೆಸ್‌ ಕುತಂತ್ರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಪಿಎಂ ಮಿತ್ರ ಪಾರ್ಕ್ ಚಾಲನೆಗೆ ನಗರಕ್ಕೆ ಆಗಮಿಸಿದ ಅವರು ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಯಡಿಯೂರಪ್ಪ ಮನೆ ಮೇಲೆ ಕಲ್ಲು ಹೊಡೆದಿದ್ದು ಬಿಜೆಪಿ ಕುತಂತ್ರ ಅಲ್ಲ. ಅದು ಕಾಂಗ್ರೆಸ್‌ ಕುತಂತ್ರ ಎಂದರು.

ಅಭಿವೃದ್ಧಿ ವಿಷಯದಲ್ಲಿ ನಾನು ಯಾವತ್ತೂ ಹಿಂದೆ ಬಿದ್ದಿಲ್ಲ: ಸಿ.ಟಿ.ರವಿ

ಗಲಭೆಯಲ್ಲಿ ಸಿಕ್ಕಿರುವವರು ಕಾಂಗ್ರೆಸ್‌ ನಾಯಕರು. ಕಾಂಗ್ರೆಸ್‌ ಅವರನ್ನು ತಪ್ಪು ದಾರಿಗೆ ಎಳೆದಿದೆ. ರಾತ್ರಿ ಸಭೆ ಮಾಡಿ ಜನರಿಗೆ ತಪ್ಪು ಸಂದೇಶ ರವಾನಿಸಿದ್ದಾರೆ. ಡಿ.ಕೆ.ಶಿವಕುಮಾರ್‌ ಸುಳ್ಳು ಹೇಳೋದನ್ನು ಬಿಡಬೇಕು ಎಂದು ಹರಿಹಾಯ್ದರು. ಲಂಬಾಣಿ ಜನರನ್ನು ಎಸ್ಸಿ ಪಟ್ಟಿಯಿಂದ ತಗೆಯುತ್ತಾರೆ ಅಂತ ಸುಳ್ಳು ಸಂದೇಶ ರವಾನಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಚುನಾವಣೆಗಾಗಿ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದೆ ಎಂಬ ಕಾಂಗ್ರೆಸ್‌ ಆರೋಪಕ್ಕೆ ಉತ್ತರ ನೀಡಿದ ಅವರು ಕಾಂಗ್ರೆಸ್‌ ಗೆ ಹೊಟ್ಟೆಕಿಚ್ಚು, ಅವರು ಮಾಡದೇ ಇರೋದನ್ನು ನಾವು ಮಾಡಿದ್ದೇವೆ. ಜವಲಿ ಪಾರ್ಕ್ನಿಂದ ಕಲಬುರಗಿಗೇ ವರದಾನವೇ ಆಗಿರೋದರಿಂದ ಜನ ಧನ್ಯವಾದ ಹೇಳುತ್ತಿದ್ದಾರೆಂದರು.

ರಾಜ್ಯದಲ್ಲಿ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳ ರಾಜಕೀಯ ಸ್ಥಿತಿ ಚಿಂತಾಜನಕ: ಸಿ.ಎಂ.ಇಬ್ರಾಹಿಂ

Latest Videos
Follow Us:
Download App:
  • android
  • ios