ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಸಮಾಜದ ಅನೇಕ ಸಮಸ್ಯೆಗಳು ಪರಿಹಾರವಾಗುತ್ತವೆ ಎಂದು ರಾಜ್ಯ ಉನ್ನತ ಶಿಕ್ಷಣ, ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ ಅಭಿವೃದ್ಧಿ ಸಚಿವ ಡಾ. ಅಶ್ವತನಾರಾಯಣ ಅಭಿಪ್ರಾಯಪಟ್ಟರು.

ಕೋಟ (ನ.27) : ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಸಮಾಜದ ಅನೇಕ ಸಮಸ್ಯೆಗಳು ಪರಿಹಾರವಾಗುತ್ತವೆ ಎಂದು ರಾಜ್ಯ ಉನ್ನತ ಶಿಕ್ಷಣ, ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ ಅಭಿವೃದ್ಧಿ ಸಚಿವ ಡಾ. ಅಶ್ವತನಾರಾಯಣ ಅಭಿಪ್ರಾಯಪಟ್ಟರು.

ಅವರು ಶನಿವಾರ ಕೋಟ ವಿವೇಕ ಹೈಸ್ಕೂಲಿನ ಕ್ರೀಡಾಂಗಣದಲ್ಲಿ ಕೋಟತಟ್ಟು ಗ್ರಾ.ಪಂ. ಮತ್ತು ಡಾ.ಶಿವರಾಮ ಕಾರಂತ ಪ್ರತಿಷ್ಠಾನಗಳ ಆಶ್ರಯದಲ್ಲಿ ಡಾ.ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗವಾಗಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್‌ರಾಜ್‌ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ -ಸಾಂಸ್ಕೃತಿಕ ಸ್ಪರ್ಧೆ ಹೊಳಪು-2022ಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಿಇಟಿ ಅರ್ಜಿ ತಪ್ಪಿಲ್ಲದೆ ತುಂಬುವುದನ್ನು ಕಲಿಸಲು ಸಹಾಯಕೇಂದ್ರ: ಅಶ್ವತ್ಥನಾರಾಯಣ

ದೈಹಿಕ ಹಾಗೂ ಮಾನಸಿಕವಾಗಿ ಸದೃಢತೆಗಿಂದ ದೊಡ್ಡ ಶಕ್ತಿ ಇನ್ನೊಂದಿಲ್ಲ. ಮುಂದುವರಿದ ರಾಷ್ಟ್ರಗಳ ಅಭಿವೃದ್ಧಿಗೆ ಕ್ರೀಡಾ ಚಟುವಟಿಕೆಗಳೂ ಕಾರಣವಾಗಿವೆ. ಸ್ಥಳೀಯಾಡಳಿತ ಜನಪ್ರತಿನಿಧಿಗಳಿಗಾಗಿಯೇ ನಡೆಯುವ ಹೊಳಪು ಕಾರ್ಯಕ್ರಮ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದರು.

ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್‌ ಕುಮಾರ್‌, ಉಭಯ ಜಿಲ್ಲೆಗಳ ಸ್ಥಳೀಯಾಡಳೀತ ಪ್ರತಿನಿಧಿಗಳ ಪಥ ಸಂಚಲನದ ಗೌರವ ರಕ್ಷೆ ಸ್ವೀಕರಿಸಿದರು.

ವಿಧಾನಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ, ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದರು. ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿಯ ಅಧ್ಯಕ್ಷ ಎಂ.ಎನ್‌.ರಾಜೇಂದ್ರ ಕುಮಾರ್‌, ಕ್ರೀಡಾಜ್ಯೋತಿ ಜ್ವಲನ ಮಾಡಿದರು. ಭಟ್ಕಳ ಶಾಸಕ ಸುನೀಲ್‌ ನಾಯಕ್‌ ಪಥಸಂಚಲನಕ್ಕೆ ಚಾಲನೆ ನೀಡಿದರು. ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌ ಪ್ರತಿಜ್ಞಾ ವಿಧಿ ಭೋಧಿಸಿದರು. ಕೋಟತಟ್ಟು ಪಂಚಾಯಿತಿ ಅಧ್ಯಕ್ಷೆ ಅಶ್ವಿನಿ ದಿನೇಶ್‌ ಅಧ್ಯಕ್ಷತೆ ವಹಿಸಿದ್ದರು.

ಇದೇ ಸಂದರ್ಭ ಸಂವಿಧಾನ ದಿನಾಚರಣೆ ಅಂಗವಾಗಿ ಅತಿಥಿಗಳು ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್‌ ಎಂ., ಸಂವಿಧಾನ ದಿನಾಚರಣೆಯ ಪ್ರತಿಜ್ಞಾ ವಿಧಿ ಬೋಧಿಸಿದರು.

'ಸುಶಾಸನ ಮಾಸ' ಅಂಗವಾಗಿ 10 ಸಾವಿರ ಮಂದಿಗೆ ಉದ್ಯೋಗ ಪತ್ರ ಹಂಚಿಕೆ: ಅಶ್ವತ್ಥನಾರಾಯಣ

ಕಾರ್ಯಕ್ರಮದ ಸಂಚಾಲಕ ಹಾಗೂ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರು ಶಾಸಕ ಸುಕುಮಾರ್‌ ಶೆಟ್ಟಿ, ಕೊಲ್ಲೂರು ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆರಾಡಿ ಚಂದ್ರಶೇಖರ ಶೆಟ್ಟಿ, ಜಿ.ಪಂ. ಸಿಇಒ ಪ್ರಸನ್ನ ಎಚ್‌., ಮಂಗಳೂರು ಮನಪಾ ಮೇಯರ್‌ ಜಯಾನಂದ ಅಂಚನ್‌, ಮಾಜಿ ಜಿ.ಪಂ. ಅಧ್ಯಕ್ಷ ರಾಜು ಪೂಜಾರಿ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ವೈ.ಎಸ್‌.ವಿ. ದತ್ತಾ ಹಾಗೂ ಇತರರು ಉಪಸ್ಥಿತರಿದ್ದರು.