Asianet Suvarna News Asianet Suvarna News

ಜೆಡಿಎಸ್‌ನಿಂದ ರೈತರ ಸಮಸ್ಯೆಗೆ ಪರಿಹಾರ: ಎಚ್‌.ಡಿ.ಕುಮಾರಸ್ವಾಮಿ

ರಾಗಿ ಖರೀದಿಯಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದ್ದು, ಕೊಬ್ಬರಿಗೆ ಉತ್ತಮ ಬೆಂಬಲ ಬೆಲೆ ನೀಡುತ್ತಿಲ್ಲ. ಬಡವರಿಗೆ ಸರಿಯಾದ ಶಿಕ್ಷಣ ಹಾಗೂ ಆರೋಗ್ಯ ವ್ಯವಸ್ಥೆ ಸಿಗುತ್ತಿಲ್ಲ, ಬಡವರ ಬದುಕು ಕಷ್ಟವಾಗುತ್ತಿದೆ ಈ ಸಮಸ್ಯೆ ಪರಿಹಾರಕ್ಕೆ ಇರುವುದು ಒಂದೇ ಮಾರ್ಗ. ಜೆಡಿಎಸ್‌ಗೆ ಮತ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

Solution to Farmers problem by JDS says HD Kumaraswamy gvd
Author
First Published Dec 30, 2022, 10:11 PM IST

ಕುಣಿಗಲ್‌ (ಡಿ.30): ರಾಗಿ ಖರೀದಿಯಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದ್ದು, ಕೊಬ್ಬರಿಗೆ ಉತ್ತಮ ಬೆಂಬಲ ಬೆಲೆ ನೀಡುತ್ತಿಲ್ಲ. ಬಡವರಿಗೆ ಸರಿಯಾದ ಶಿಕ್ಷಣ ಹಾಗೂ ಆರೋಗ್ಯ ವ್ಯವಸ್ಥೆ ಸಿಗುತ್ತಿಲ್ಲ, ಬಡವರ ಬದುಕು ಕಷ್ಟವಾಗುತ್ತಿದೆ ಈ ಸಮಸ್ಯೆ ಪರಿಹಾರಕ್ಕೆ ಇರುವುದು ಒಂದೇ ಮಾರ್ಗ. ಜೆಡಿಎಸ್‌ಗೆ ಮತ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು. ಕುಣಿಗಲ್‌ನ ಎಡೆಯೂರು ಸಿದ್ದಲಿಂಗೇಶ್ವರ ಗದ್ದುಗೆ ಪ್ರಥಮ ಬಾರಿಗೆ ಭೇಟಿ ನೀಡಿ ಪೂಜಿ ಸಲ್ಲಿಸಿ ನಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ 24 ಗಂಟೆಗಳಲ್ಲಿ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ, ಹಿರಿಯ ನಾಗರಿಕರಿಗೆ ನೀಡುವ ಮಾಸಾಶನ 5000ಕ್ಕೆ ಏರಿಕೆ, ಪ್ರತಿ ಜಿಲ್ಲೆಯಲ್ಲಿ ಕೈಗಾರಿಕಾ ಹೊಸಹತು ಪ್ರಾರಂಭಿಸಿ ಲಕ್ಷ ಉದ್ಯೋಗ ಸೃಷ್ಟಿ, ನಿವೇಶನ ರಹಿತ ಕುಟುಂಬಗಳಿಗೆ ನಿವೇಶನದ ಜೊತೆಗೆ ಮನೆಯನ್ನು ಉಚಿತವಾಗಿ ನೀಡುತ್ತೇವೆ ಎಂದರು. ಜೆಡಿಎಸ್‌ ಅಭ್ಯರ್ಥಿ ಡಿ.ನಾಗರಾಜಯ್ಯರನ್ನು ಗೆಲ್ಲಿಸಿ. ಅವರನ್ನು ಮಂತ್ರಿ ಮಾಡುತ್ತೇನೆಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಡಿ.ನಾಗರಾಜಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಡಾ.ರವಿ, ತಾಪಂ ಮಾಜಿ ಸದಸ್ಯ ಬಿ.ಎನ್‌.ಜಗದೀಶ್‌, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ್‌ ನಾಯಕ್‌ ಸೇರಿದಂತೆ ಹಲವಾರು ಸ್ಥಳೀಯ ಜೆಡಿಎಸ್‌ ಮುಖಂಡರು ಇದ್ದರು.

ಪಂಚರತ್ನ ಯಾತ್ರೆ ಸುನಾಮಿ ತಡೆಯಲು ಅಮಿತ್‌ ಶಾ ಕರೆಸ್ತಿದ್ದಾರೆ: ಎಚ್‌.ಡಿ.ಕುಮಾರಸ್ವಾಮಿ

ಎಡೆಯೂರು ಸಿದ್ದಲಿಂಗೇಶ್ವರಗೆ ಎಚ್ಡಿಕೆ ಪೂಜೆ: ಎಡೆಯೂರು ಶ್ರೀ ಸಿದ್ದಲಿಂಗೇಶ್ವರರ ಗದ್ದುಗೆಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪೂಜೆ ಸಲ್ಲಿಸಿದರು. ಕುಮಾರಸ್ವಾಮಿ ಆಗಮನದಿಂದ ಎಡೆಯೂರು ದೇವಾಲಯ ಸೇರಿದಂತೆ ಗ್ರಾಮಗಳಲ್ಲಿ ತೋರಣ ಸೇರಿದಂತೆ ಬ್ಲಂಟಿಂಗ್ಸ್‌, ಫ್ಲೆಕ್ಸ್‌ಗಳು ರಾರಾಜಿಸುತ್ತಿದ್ದವು. ದೇವಾಲಯದ ಸಿಬ್ಬಂದಿ ಸಕಲ ಸಿದ್ಧತೆಯನ್ನು ಮಾಡಿಕೊಂಡು ಪೂರ್ಣಕುಂಭ ಸಮೇತರಾಗಿ ದೇವಾಲಯದ ಒಳಗೆ ಸ್ವಾಗತ ಮಾಡಿದರು. 

ಅರ್ಚಕರು ಕುಮಾರಸ್ವಾಮಿ ಹಾಗೂ ಅವರ ಕುಟುಂಬದ ಹೆಸರಿನಲ್ಲಿ ಶ್ರೀಸಿದ್ದಲಿಂಗೇಶ್ವರರ ಗದ್ದುಗೆಯಲ್ಲಿ ಅರ್ಚನೆ, ಅಭಿಷೇಕ, ಮಹಾಮಂಗಳಾರತಿ, ಪೂಜೆಗಳನ್ನು ನಡೆಸಿದರು. ಸಿದ್ದಲಿಂಗೇಶ್ವರರ ಗದ್ದುಗೆಯ ಮೇಲಿದ್ದ ಹೂವಿನ ಹಾರವನ್ನು ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಹಾಕುವ ಮುಖಾಂತರ ಶ್ರೀಸಿದ್ದಲಿಂಗೇಶ್ವರರ ಆಶೀರ್ವಾದವನ್ನು ನೀಡಲಾಯಿತು. ಪೂಜೆಯ ನಂತರ ರಥದ ಬೀದಿಯಲ್ಲಿ ತೆರೆದ ವಾಹನದಲ್ಲಿ ಕುಮಾರಸ್ವಾಮಿಯವರು ಮೆರವಣಿಗೆಯಲ್ಲಿ ತೆರಳಿದರು.

ಕುಮಾರಸ್ವಾಮಿಗೆ ಏಷ್ಯಾ ಬುಕ್‌ ಆಫ್‌ ರೆಕಾಡ್ಸ್‌ ಗೌರವ: ಪಂಚರತ್ನ ರಥಯಾತ್ರೆಯಲ್ಲಿ ರಾಜ್ಯದ ಜನರು ವಿವಿಧ ಬಗೆಯ ಬೃಹತ್‌ ಹಾರಗಳನ್ನು ಹಾಕಿ ಗೌರವಿಸಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಏಷ್ಯಾ ಬುಕ್‌ ಆಫ್‌ ರೆಕಾಡ್ಸ್‌ ಹಾಗೂ ಇಂಡಿಯಾ ಬುಕ್‌ ಆಫ್‌ ರೆಕಾಡ್ಸ್‌ ದಾಖಲೆಗೆ ಪಾತ್ರರಾಗಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಯಲ್ಲಾಪುರದಲ್ಲಿ ಮಾಜಿ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಮಾಡಿದ್ದ ಜಾಗಕ್ಕೆ ಆಗಮಿಸಿದ ಏಷ್ಯಾ ಬುಕ್‌ ಆಫ್‌ ರೆಕಾಡ್ಸ್‌ ತೀರ್ಪುಗಾರರಾದ ಮೋಹಿತ್‌ ಕುಮಾರ್‌ ವತ್ಸ ಹಾಗೂ ಇಂಡಿಯಾ ಬುಕ್‌ ಆಫ್‌ ರೆಕಾಡ್ಸ್‌ ತೀರ್ಪುಗಾರರಾದ ಆರ್‌. ಹರೀಶ್‌ ಅವರು ಮಾಜಿ ಮುಖ್ಯಮಂತ್ರಿ ಅವರಿಗೆ ಎರಡೂ ದಾಖಲೆಗಳ ಪತ್ರಗಳು ಮತ್ತು ಮೆಡಲ್‌ಗಳನ್ನು ಹಸ್ತಾಂತರ ಮಾಡಿದರು.

ಜೆಡಿಎಸ್‌, ಬಿಜೆಪಿ 123 ಸ್ಥಾನ ಗೆದ್ದಿರುವ ಇತಿಹಾಸವಿಲ್ಲ: ಎಚ್‌ಡಿಕೆಗೆ ಚಲುವರಾಯಸ್ವಾಮಿ ತಿರುಗೇಟು

ಈ ಸಂದರ್ಭದಲ್ಲಿ ಮಾತನಾಡಿದ ಏಷ್ಯಾ ಬುಕ್‌ ಆಫ್‌ ರೆಕಾಡ್ರ್ಸ ತೀರ್ಪುಗಾರರಾದ ಮೋಹಿತ್‌ಕುಮಾರ್‌ ಅವರು, ಇದೊಂದು ವಿಶೇಷವಾದ ದಾಖಲೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ರಾಜಕಾರಣಿಯೊಬ್ಬರು ಗೌರವಕ್ಕೆ ಪಾತ್ರರಾಗಿರುವುದು ಹಾಗೂ ರೈತರೇ ಬೆಳೆಗಳನ್ನೇ ಬೃಹತ್‌ ಹಾರಗಳನ್ನಾಗಿ ತಯಾರಿಸಿ ಅವರಿಗೆ ಹಾಕಿ ಸ್ವಾಗತಿಸುತ್ತಿರುವುದು ಸೋಜಿಗ, ಮೊದಲ ದಾಖಲೆ ಎಂದರು. ನಾವು ಸದಾ ದಾಖಲೆಗಳನ್ನು ಹುಡುಕುತ್ತಿರುತ್ತೇವೆ. ದೇವನಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ನಡೆದ ಪಂಚರತ್ನ ರಥಯಾತ್ರೆ ಸಂದರ್ಭದಲ್ಲಿ ಕುಮಾರಸ್ವಾಮಿ ಅವರಿಗೆ ಕೃಷಿ ಬೆಳೆಗಳಿಂದ ತಯಾರಿಸಿದ ಭಾರೀ ಹಾರಗಳನ್ನು ಹಾಕಿ ಬರಮಾಡಿಕೊಂಡ ಬಗ್ಗೆ ಮಾಹಿತಿ ಸಿಕ್ಕಿತು. ಅಂದಿನಿಂದಲೇ ನಾವು ಖುದ್ದು ಪರಿಶೀಲನೆ ಮಾಡಿದೆವು. ನಿನ್ನೆಯೂ ನಾವು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ರಥಯಾತ್ರೆಯ ಜತೆಗೆ ಪ್ರವಾಸ ಮಾಡಿದೆವು. ಬೃಹತ್‌ ಹಾರಗಳ ಗೌರವಕ್ಕೆ ಭಾಜನರಾದ ಏಕೈಕ ವ್ಯಕ್ತಿ ಕುಮಾರಸ್ವಾಮಿ ಅವರು ಎಂದು ಮೋಹಿತ್‌ಕುಮಾರ್‌ ಮಾಹಿತಿ ನೀಡಿದರು.

Follow Us:
Download App:
  • android
  • ios