ಹುಬ್ಬಳ್ಳಿ, (ಜುಲೈ.25): ತಾಯಿಗೆ ಕೊರೋನಾ ಪಾಸಿಟಿವ್ ಬಂದ ಕಾರಣ ಮಗ ಆತ್ಮಹತ್ಯೆ ಮಾಡಿಕೊಂಡಿ ಘಟನೆ ಹುಬ್ಬಳ್ಳಿಯ ಕುಲಕರ್ಣಿ ಹಕ್ಕಲದಲ್ಲಿ 

ಮೊಬೈಲ್ ಫೋನ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಾಕೇಶ ರಾಜೇಂದ್ರನ್ ದರ್ಮನ್ (31) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡವರು.

ತಮ್ಮ ಕೊರೋನಾದಿಂದ ಆಸ್ಪತ್ರೆ ಸೇರಿದ್ರೆ, ಅಣ್ಣ ಮಸಣಕ್ಕೆ..!

ಮೃತನ ತಾಯಿಗೆ ಕೋವಿಡ್ 19 ಧೃಢ ಪಟ್ಟಿತ್ತು. ರೈಲ್ವೆ ಆಸ್ಪತ್ರೆಯಲ್ಲಿ ಸಫಾಯಿವಾಲಾ ಅಗಿದ್ದ ಅವರಿಗೆ ರೈಲ್ವೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಮನೆ ಸೀಲ್‌ಡೌನ್ ಮಾಡಿ ರಾಕೇಶ್ ಗೆ ಹೋಂ ಕ್ವಾರಂಟೈನ್ ನಲ್ಲಿರುವಂತೆ ಸೂಚಿಸಲಾಗಿತ್ತು. ಇದರಿಂದ ಮನನೊಂದು ಶುಕ್ರವಾರ ಮನೆಯಲ್ಲೇ ನೇಣು ಬಿಗಿದುಕೊಂಡು ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ವಾರವಷ್ಟೇ ಇಂತಹದ್ದೇ ಪ್ರಕರಣ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ತಮ್ಮನಿಗೆ ಕೊರೋನಾ ಸೋಂಕು ತಗುಲಿದ್ದರಿಂದ ಆಘಾತಗೊಂಡು ಅಣ್ಣನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದ ಗಾಂಧಿನಗರದಲ್ಲಿ ನಡೆದಿದ್ದನ್ನು ಇಲ್ಲಿ ಸ್ಮರಿಸಬಹುದು,