Asianet Suvarna News Asianet Suvarna News

Karnataka Rains: ಮಳೆ, ಪ್ರವಾಹದಿಂದಾದ ಹಾನಿಗೆ ಶೀಘ್ರ ಪರಿಹಾರ: ಸಚಿವ ಸಿ.ಸಿ. ಪಾಟೀಲ

ಮನೆ ಹಾನಿ ಸಮೀಕ್ಷೆಗೆ ಎಂಜಿನಿಯರ್‌ಗಳ ಕೊರತೆ ಇದ್ದಲ್ಲಿ ಬೇರೆ ಬೇರೆ ಇಲಾಖೆಗಳ ಎಂಜಿನಿಯರ್‌ಗಳನ್ನು ನಿಯೋಜಿಸಿಕೊಂಡು ತಕ್ಷಣ ಪರಿಹಾರ ವಿತರಿಸುವ ಕಾರ್ಯವಾಗಬೇಕು: ಸಚಿವ ಸಿ.ಸಿ. ಪಾಟೀಲ 

Soon Compensation Rain and Flood Damage in Bagalkot Says Minister CC Patil grg
Author
First Published Sep 18, 2022, 9:01 AM IST

ಬಾಗಲಕೋಟೆ(ಸೆ.18):  ಜಿಲ್ಲೆಯಲ್ಲಿ ಮಳೆ ಮತ್ತು ಪ್ರವಾಹದಿಂದ ಉಂಟಾದ ಹಾನಿಗೆ ಅರ್ಹ ಫಲಾನುಭವಿಗಳಿಗೆ ಶೀಘ್ರ ಪರಿಹಾರ ಒದಗಿಸುವ ಕಾರ್ಯವಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಮಳೆ ಹಾಗೂ ಪ್ರವಾಹದಿಂದ ಉಂಟಾದ ಹಾನಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮನೆ ಹಾನಿ ಸಮೀಕ್ಷೆಗೆ ಎಂಜಿನಿಯರ್‌ಗಳ ಕೊರತೆ ಇದ್ದಲ್ಲಿ ಬೇರೆ ಬೇರೆ ಇಲಾಖೆಗಳ ಎಂಜಿನಿಯರ್‌ಗಳನ್ನು ನಿಯೋಜಿಸಿಕೊಂಡು ತಕ್ಷಣ ಪರಿಹಾರ ವಿತರಿಸುವ ಕಾರ್ಯವಾಗಬೇಕು. ನಿರಂತರ ಮಳೆ ಮತ್ತು ಪ್ರವಾಹ ಸನ್ನಿವೇಶ ನೋಡಿಕೊಂಡು ಜನ ಸಂಬಂಧಿಕರ ಮನೆಗೆ ಹೋಗಿರುವ ಸಂಭವ ಇರುತ್ತದೆ. ಇದನ್ನೇ ಮನೆಯಲ್ಲಿ ಯಾರೂ ವಾಸವಿಲ್ಲ ಅಂತ ತಿಳಿದು, ಆ ಮನೆಯನ್ನು ಸಮೀಕ್ಷೆಯಿಂದ ಕೈಬಿಡಬಾರದು. ಬಡವರ ಮನೆಗಳೇ ಹೆಚ್ಚಿನ ಸಂಖ್ಯೆಯಲ್ಲಿ ಮಳೆಗೆ ಹಾನಿಯಾಗಿದ್ದು, ಅವುಗಳನ್ನೆಲ್ಲ ಗಮನದಲ್ಲಿಟ್ಟುಕೊಳ್ಳಬೇಕು ಎಂದರು.

ಬಾದಾಮಿ ತಾಲೂಕಿಗೆ ಸಂಬಂಧಿಸಿದಂತೆ .2 ಕೋಟಿಗಿಂತ ಹೆಚ್ಚಿನ ಅನುದಾನ ಈಗಾಗಲೇ ಬಿಡುಗಡೆಯಾಗಿದ್ದು, ಎ ಮತ್ತು ಬಿ-1, ಬಿ-2 ವರ್ಗದ ಮನೆಗಳಿಗೆ ಮೊದಲನೇ ಹಂತದ ಅನುದಾನ ತಕ್ಷಣ ವಿತರಿಸಬೇಕು. ಸಿ ಕೆಟಗೇರಿಯಲ್ಲಿರುವ ಮನೆಗಳಿಗೆ ಒಂದೇ ಬಾರಿಗೆ . 50 ಸಾವಿರದಂತೆ ಬಿಡುಗಡೆ ಮಾಡತಕ್ಕದ್ದು. ಅದೇ ರೀತಿ ಇತರೆ ತಾಲೂಕುಗಳಲ್ಲಿ ಆಗಿರುವ ಮನೆ ಹಾನಿಗೆ ಎರಡು ದಿನಗಳಲ್ಲಿ ಪರಿಹಾರ ವಿತರಣೆಯಾಗಬೇಕು. ಇದರ ಜೊತೆಗೆ ಬೆಳೆ ಹಾನಿ ಸಮೀಕ್ಷೆ ಮಾಡುವುದು ಕೂಡ ಅಷ್ಟೇ ಅವಶ್ಯ. ಭೂಮಿಯಲ್ಲಿ ನೀರಿನ ತೆವಾಂಶ ಕಡಿಮೆಯಾದ ತಕ್ಷಣ ಕೃಷಿ ಅಧಿಕಾರಿಗಳು ಮುಂದಿನ 10ರಿಂದ 12 ದಿನಗಳಲ್ಲಿ ಸಮೀಕ್ಷೆ ನಡೆಸಿ ಪರಿಹಾರ ಒದಗಿಸುವ ಕೆಲಸವಾಗಬೇಕು ಎಂದರು.

ಬಾಗಲಕೋಟೆ ಜಿಲ್ಲೆಯಲ್ಲಿ ಮಳೆ ಪ್ರವಾಹದಿಂದ ಉಂಟಾದ ಹಾನಿ ವೀಕ್ಷಿಸಿದ ಸಚಿವ ಸಿ.ಸಿ.ಪಾಟೀಲ್‌

ಜಿಲ್ಲಾಧಿಕಾರಿ ಪಿ. ಸುನೀಲ್‌ಕುಮಾರ ಸಭೆಗೆ ಮಾಹಿತಿ ನೀಡಿ ಪ್ರಾಥಮಿಕ ವರದಿ ಪ್ರಕಾರ ಸೆ. 1ರಿಂದ 16ರವರೆಗೆ ಜಿಲ್ಲೆಯಲ್ಲಿ ಎ ಕೆಟಗೆರಿಯ 489 ಮನೆ ಹಾಗೂ ಬಿ ಮತ್ತು ಸಿ ಕೆಟಗೇರಿಯ 860 ಮನೆಗಳು ಅತಿವ್ರಷ್ಠಿಯಿಂದ ಹಾನಿಗೊಳಗಾಗಿವೆ. 326 ಹಳ್ಳಿಗಳ 18929 ಹೇಕ್ಟೇರ್‌ ಪ್ರದೇಶ ಕೃಷಿ ಮತ್ತು 3823 ಹೆಕ್ಟೇರ್‌ ಪ್ರದೇಶ ತೋಟಗಾರಿಕೆ ಬೆಳೆಗಳು ನಾಶವಾಗಿವೆ. 223 ಮನೆಗಳಿಗೆ ನೀರು ನುಗ್ಗಿದ್ದು, . 22 ಲಕ್ಷ ಪರಿಹಾರ ಬಿಡುಗಡೆಯಾಗಿದೆ. 4 ಜೀವಹಾನಿಯಾಗಿದ್ದು, ಈಗಾಗಲೇ ಪರಿಹಾರಧನ ವಿತರಿಸಲಾಗಿದೆ ಎಂದರು. ಸಭೆಗೆ ಮುನ್ನ ಮಳೆ ಮತ್ತು ಪ್ರವಾಹದಿಂದ ಜಿಲ್ಲೆಯಲ್ಲಿ ಉಂಟಾದ ಹಾನಿ ಕುರಿತಾದ ವಿಡಿಯೋ ಚಿತ್ರವನ್ನು ಸಚಿವರು ವೀಕ್ಷಿಸಿದರು.

ಶಾಸಕ ವಿರಣ್ಣ ಚರಂತಿಮಠ, ವಿಧಾನ ಪರಿಷತ್‌ ಸದಸ್ಯ ಪಿ.ಚ್‌. ಪೂಜಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ. ಭೂಬಾಲನ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಯಪ್ರಕಾಶ ಹಕ್ಕರಕಿ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್‌ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

-ಮನೆ ಹಾನಿ ಸಮೀಕ್ಷೆಗೆ ಎಂಜಿನಿಯರ್‌ಗಳ ಕೊರತೆ ಇದ್ದಲ್ಲಿ ಬೇರೆ ಬೇರೆ ಇಲಾಖೆಗಳ ಎಂಜಿನಿಯರ್‌ಗಳನ್ನು ನಿಯೋಜಿಸಿಕೊಂಡು ತಕ್ಷಣ ಪರಿಹಾರ ವಿತರಿಸುವ ಕಾರ್ಯವಾಗಬೇಕು.
-ನಿರಂತರ ಮಳೆ ಮತ್ತು ಪ್ರವಾಹ ಸನ್ನಿವೇಶ ನೋಡಿಕೊಂಡು ಜನ ಸಂಬಂಧಿಕರ ಮನೆಗೆ ಹೋಗಿರುವ ಸಂಭವ ಇರುತ್ತದೆ.
-ಇದನ್ನೇ ಮನೆಯಲ್ಲಿ ಯಾರೂ ವಾಸವಿಲ್ಲ ಅಂತ ತಿಳಿದು, ಆ ಮನೆಯನ್ನು ಸಮೀಕ್ಷೆಯಿಂದ ಕೈಬಿಡಬಾರದು.
-ಬಡವರ ಮನೆಗಳೇ ಹೆಚ್ಚಿನ ಸಂಖ್ಯೆಯಲ್ಲಿ ಮಳೆಗೆ ಹಾನಿಯಾಗಿದ್ದು, ಅವುಗಳನ್ನೆಲ್ಲ ಗಮನದಲ್ಲಿಟ್ಟುಕೊಳ್ಳಬೇಕು
 

Follow Us:
Download App:
  • android
  • ios