Asianet Suvarna News Asianet Suvarna News

Belagavi : ಕಾಂಗ್ರೆಸ್‌, ಬಿಜೆಪಿ ನಾಯಕರು ಶೀಘ್ರ ಜೆಡಿಎಸ್‌ಗೆ

ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಭಾರೀ ಪ್ರಮಾಣದಲ್ಲಿ ಬದಲಾವಣೆ ಆಗಲಿದ್ದು, ಕಾಂಗ್ರೆಸ್‌ ಹಾಗೂ ಬಿಜೆಪಿ ಪ್ರಮುಖ ನಾಯಕರು ಕೆಲವೇ ದಿನಗಳಲ್ಲಿ ಜೆಡಿಎಸ್‌ ಸೇರ್ಪಡೆಯಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ಜೆಡಿಎಸ್‌ ಮುಖಂಡ ಶಂಕರ ಮಾಡಲಗಿ ಹೇಳಿದರು.

Soon Congress BJP Leaders will Join JDS snr
Author
First Published Nov 5, 2022, 4:56 AM IST

 ಬೆಳಗಾವಿ (ನ.05):  ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಭಾರೀ ಪ್ರಮಾಣದಲ್ಲಿ ಬದಲಾವಣೆ ಆಗಲಿದ್ದು, ಕಾಂಗ್ರೆಸ್‌ ಹಾಗೂ ಬಿಜೆಪಿ ಪ್ರಮುಖ ನಾಯಕರು ಕೆಲವೇ ದಿನಗಳಲ್ಲಿ ಜೆಡಿಎಸ್‌ ಸೇರ್ಪಡೆಯಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ಜೆಡಿಎಸ್‌ ಮುಖಂಡ ಶಂಕರ ಮಾಡಲಗಿ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ರಾಜಕೀಯ (Politics)  ಬದಲಾವಣೆ ಆಗುತ್ತಿದೆ. ಜಿಲ್ಲೆಯ ಹಿರಿಯ ರಾಜಕಾರಣಿಗಳು, ದೊಡ್ಡ ಮನೆತನದವರಾದ ಪ್ರತಾಪರಾವ ಪಾಟೀಲ… ಅವರು ಕೆಲವೇ ದಿನಗಳ ಹಿಂದೆ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು (HD Decegowda) , ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ಸಮ್ಮುಖದಲ್ಲಿ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ರಾಷ್ಟ್ರಸಮಿತಿಯಲ್ಲಿ ಅವರನ್ನು ಸೇರಿಸಿಕೊಳ್ಳುವ ಬಗ್ಗೆ ನಾಯಕರು ಅವರಿಗೆ ಭರವಸೆ ನೀಡಿದ್ದಾರೆ. ಅದರಂತೆ ಜಿಲ್ಲೆಯಲ್ಲಿ ಸಾಕಷ್ಟುಬದಲಾವಣೆ ಆಗುವುದು ನಿಶ್ಚಿತ ಎಂದರು.

ರಮೇಶ ಜಾರಕಿಹೊಳಿ ಜೆಡಿಎಸ್‌ ಸೇರ್ಪಡೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಮೇಶ ಜಾರಕಿಹೊಳಿ ಅವರು ದೊಡ್ಡ ನಾಯಕರು, ಹಿರಿಯ ನಾಯಕರು. ಪಕ್ಷಕ್ಕೆ ಯಾರೇ ಬಂದರೂ ನಮ್ಮ ಜಿಲ್ಲೆಯಿಂದ ಸ್ವಾಗತಿಸುತ್ತೇವೆ. ಸ್ವಾಗತಿಸುವುದು ನಮ್ಮ ಕರ್ತವ್ಯ ಮತ್ತು ಧರ್ಮವಾಗಿದೆ. ಬಂದರೆ ಸ್ವಾಗತಿಸುತ್ತೇವೆ. ಜಿಲ್ಲೆಯಲ್ಲಿ ಸಂಪೂರ್ಣವಾಗಿ ಭಾರಿ ಬದಲಾವಣೆ ಆಗುವ ನಿರೀಕ್ಷೆ ಇದೆ. ಕಾಂಗ್ರೆಸ್‌ ಮತ್ತು ಬಿಜೆಪಿಯ ಪ್ರಮುಖ ನಾಯಕರು ಕೆಲವೇ ದಿನಗಳಲ್ಲಿ ಜೆಡಿಎಸ್‌ ಸೇರ್ಪಡೆಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಡದಿಯಲ್ಲಿ ಮಾಡಲಾದ ಕಾರ್ಯಕ್ರಮದಲ್ಲಿ 123 ಕ್ಷೇತ್ರಗಳ ಟಿಕೆಟ್‌ ಘೋಷಣೆ ಮಾಡಲಾಗಿದೆ. ಬರುವ ಎರಡ್ಮೂರು ದಿನದಲ್ಲಿ ಅಧಿಕೃತವಾಗಿ ಅಭ್ಯರ್ಥಿಗಳ ಹೆಸರನ್ನು ಕುಮಾರಸ್ವಾಮಿ ಅವರು ಘೋಷಣೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು. ಇನ್ನು ನ.6ರಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಅವತ್ತು ಬೆಳಗ್ಗೆ ಎಲ್ಲ 18 ಕ್ಷೇತ್ರಗಳ ಬಗ್ಗೆ ಕಾರ್ಯಕರ್ತರಿಂದ ಮಾಹಿತಿ ಕಲೆ ಹಾಕಲಿದ್ದಾರೆ ಎಂದು ಹೇಳಿದರು.

ಪಂಚರತ್ನದಿಂದ ನಾಡಿನ ಅಭಿವೃದ್ಧಿ

ನಾಡಿನ ರೈತರು, ಬಡವರು, ಶ್ರಮಿಕರು ಹಾಗೂ ನಿರುದ್ಯೋಗಿಗಳಿಗೆ ಪೂರಕವಾಗಿರುವ ಪಂಚರತ್ನ ಯೋಜನೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿಳಿಸಿದರು. ತಾಲೂಕಿನ ಕಸಬಾ ಹೋಬಳಿ ಕೆಲಗೆರೆ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಶ್ರೀಆದಿಶಕ್ತಿ ಹುಲಿಕೆರಮ್ಮ ದೇವಿಯ ಉತ್ಸವ ದೇವತೆಯ ನೂತನ ದೇವಾಲಯದ ಉದ್ಘಾಟನೆ ಹಾಗೂ ನೂತನ ಗೋಪುರದ ಕಳಶ ಸ್ಥಾಪನಾ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ಜೆಡಿಎಸ್‌ ವರಿಷ್ಠರಾದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹಾಗೂ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಜಲಧಾರೆ ಯಾತ್ರೆ ಆರಂಭವಾದಾಗಿನಿಂದ ಈವರೆಗೂ ನಿರಂತರವಾಗಿ ಮಳೆಯಾಗುತ್ತಿದೆ. ಇದರಿಂದ ಅದೆಷ್ಟೋ ವರ್ಷಗಳಿಂದ ಬತ್ತಿ ಹೋಗಿದ್ದ ಕೆರೆ-ಕಟ್ಟೆಗಳು ತುಂಬಿ ತುಳುಕುತ್ತಿವೆ. ಅದರಲ್ಲೂ ನಾಗಮಂಗಲದಲ್ಲಿ ಜೆಡಿಎಸ್‌ ಕಾರ್ಯಕ್ರಮವೆಂದರೆ ಸಾಕು ಮಳೆ ಸಿಂಚನದ ಶುಭ ಸೂಚನೆ ಇದ್ದೇ ಇರುತ್ತದೆ ಎಂದರು. ಗ್ರಾಮಸ್ಥರ ಪರಿಶ್ರಮದಿಂದ ಇಂತಹ ಒಂದು ಉತ್ತಮವಾದ ದೇವಸ್ಥಾನ ನಿರ್ಮಾಣವಾಗಿದೆ. ಶಕ್ತಿ ದೇವತೆಯ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮಕ್ಕೆ ನಾನು ಭಾಗಿಯಾಗಿರುವುದು ನನ್ನ ಸೌಭಾಗ್ಯ. ಈ ಕಾರ್ಯಕ್ರಮಕ್ಕೆ ಮೊದಲು ದೇವೇಗೌಡರು, ನಂತರ ಕುಮಾರಸ್ವಾಮಿ ಅವರು ನಿಗಧಿಯಾಗಿದ್ದರು. ಆದರೆ, ಅನಿವಾರ್ಯವಾಗಿ ನನಗೆ ಇಂತಹ ಅವಕಾಶ ಸಿಕ್ಕಿರುವುದು ನನ್ನ ಪೂರ್ವ ಜನ್ಮದ ಪುಣ್ಯ. ಆ ದೇವಿಯೇ ನನ್ನನ್ನು ಕರೆಸಿಕೊಂಡಿರುವ ನಂಬಿಕೆ ನನಗಾಗಿದೆ ಎಂದರು.

ಜನರ ಆಶೀರ್ವಾದ ಪಡೆದೇ ಗುದ್ದಲಿ ಪೂಜೆ: ನಿಖಿಲ್‌ ಕುಮಾರಸ್ವಾಮಿ

2023ಕ್ಕೆ ಕುಮಾರಸ್ವಾಮಿ ಸರ್ಕಾರ ಬರುತ್ತದೆ: 2023ಕ್ಕೆ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬಂದೇ ಬರುತ್ತದೆ. ಈ ಸಂದರ್ಭದಲ್ಲಿ ಪಂಚರತ್ನ ಯೋಜನೆ ಅನುಷ್ಠಾನವಾಗುವುದು ಖಚಿತ. ಇದರಿಂದ ರೈತರು, ಬಡವರು, ಶ್ರಮಿಕರು ಹಾಗೂ ನಿರುದ್ಯೋಗಿ ಯುವಶಕ್ತಿಗೆ ಮಹತ್ತರವಾದ ಅನುಕೂಲವಾಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.

ಪಕ್ಷ ಸಂಘಟನೆಯಲ್ಲಿ ಯಾವ ರೀತಿ ತೊಡಗಬೇಕು ಎಂಬ ಬಗ್ಗೆ ಒಂದು ಮಾಹಿತಿ ನೀಡಲಿದ್ದಾರೆ. ಕುಡಚಿಯಲ್ಲಿ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದಾದ ಬಳಿಕ ಸಾಯಂಕಾಲ ನಿಪ್ಪಾಣಿಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಾರನೇ ದಿನ ಖಾಸಗಿ ಹೋಟೆಲ್‌ನಲ್ಲಿ ಬೇರೆ ಸಮಾಜದ ಕಾರ್ಯಕ್ರಮದಲ್ಲಿ ಸಿಎಂ ಇಬ್ರಾಹಿಂ ಭಾಗವಹಿಸಲಿದ್ದಾರೆ. ನಮ್ಮ ಪಕ್ಷ ಮುಂದೆ ಯಾವ ರೀತಿ ಹೋಗಬೇಕು ಎಂಬ ಬಗ್ಗೆ ಚರ್ಚಿಸಲಾಗುವುದು. ಚುನಾವಣೆಗೆ ಇನ್ನು ಕೇವಲ ಆರೇಳು ತಿಂಗಳು ಬಾಕಿ ಇದೆ. ನಮ್ಮ ಮುಂದಿನ ನಡೆ, ಯಾವ ರೀತಿ ಹೋರಾಟ ಮಾಡಬೇಕು ಎಂಬ ಬಗ್ಗೆ ಪಕ್ಷದಿಂದ ಒಂದು ವರ್ಷದಿಂದ ಜನತಾ ಜಲಧಾರೆ, ಜನತಾ ಮಿತ್ರ, ಪಂಚರತ್ನ ಯೋಜನೆಗಳ ಬಗ್ಗೆ ಕಾರ್ಯಕ್ರಮ ಮಾಡಿದ್ದೇವೆ. ಈ ಬಗ್ಗೆ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಎಚ್‌.ಡಿ.ದೇವೇಗೌಡರ ನೇತೃತ್ವದಲ್ಲಿ ಸಭೆಗಳು ಹಾಗೂ ಕಾರ್ಯಕ್ರಮ ನಡೆಯಲಿವೆ ಎಂದು ತಿಳಿಸಿದರು.

Follow Us:
Download App:
  • android
  • ios