ಕಾಂಗ್ರೆಸ್ ಸೇರಲು ಸುಧಾಕರ್ ಸಿದ್ಧತೆ?
- ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರೊಂದಿಗಿನ ರಾಜಕೀಯ ವೈಮನಸ್ಯ
- ಸುಧಾಕರ್ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತ
ಚಿಕ್ಕಬಳ್ಳಾಪುರ (ಜು.12):ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರೊಂದಿಗಿನ ರಾಜಕೀಯ ವೈಮನಸ್ಯದಿಂದಾಗಿ ಪಕ್ಷ ತೊರೆದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲನುಭವಿಸಿದ್ದ ಚಿಂತಾಮಣಿಯ ಮಾಜಿ ಶಾಸಕ ಡಾ.ಎಂ.ಸಿ.ಸುಧಾಕರ್ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತವಾಗಿದೆ.
ಅವರು ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಜಿಲ್ಲೆಯ ರಾಜಕಾರಣದಲ್ಲಿ ಕುತೂಹಲ ಕೆರಳಿದೆ.
ಜೆಡಿಎಸ್ ತ್ಯಜಿಸ್ತಾರಾ ಶಾಸಕ : ಕೈ ಸೇರ್ಪಡೆ ಬಗ್ಗೆ ಸ್ಪಷ್ಟನೆ
ತಮ್ಮ ತಂದೆ ಮಾಜಿ ಗೃಹ ಸಚಿವ ಎ.ಚೌಡರೆಡ್ಡಿ ರಾಜಕೀಯ ನಿವೃತ್ತಿ ಬಳಿಕ 2004, 2008ರಲ್ಲಿ ಸತತ ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಚಿಂತಾಮಣಿ ಶಾಸಕರಾಗಿದ್ದ ಡಾ.ಎಂ.ಸಿ.ಸುಧಾಕರ್, 2013, 2018 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಸೋತಿದ್ದರು