'ಬಡ, ಮಧ್ಯಮ ವರ್ಗಕ್ಕೆ ಕೈಗೆಟುಕುವ ದರದಲ್ಲಿ ಶೀಘ್ರ ಪೆಟ್ರೋಲ್ ಲಭಿಸಲಿದೆ'

ತೆರಿಗೆ ಕಡಿಮೆ ಮಾಡಿ ಬಡ ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ ಪೆಟ್ರೋಲ್‌, ಡೀಸೆಲ್‌ ಲಭ್ಯವಾಗಿದೆ. ನಾಗರೀಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವರು ಭರವಸೆ ನೀಡಿದ್ದಾರೆ. 

Soon Petrol Diesel Price Will reduce Says Minister MTB nagaraj snr

ಹೊಸಕೋಟೆ (ಮಾ.13):  ಬಿಜೆಪಿ ಪಕ್ಷ ದೇಶದಲ್ಲಿ ಅತಿ ದೊಡ್ಡ ಪಕ್ಷವಾಗಿದ್ದು, ಮತ್ತಷ್ಟುಸಂಘಟನೆ ದೃಷ್ಠಿಯಿಂದ ಯುವ ಮೋರ್ಚಾ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಸಚಿವ ಎಂಟಿಬಿ ನಾಗರಾಜ್‌ ತಿಳಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ನಗರ ಯುವ ಮೋರ್ಚಾ ಉಪಾಧ್ಯಕ್ಷರನ್ನಾಗಿ ಮಂಜುನಾಥ್‌ ಯಾದಿ ಅವರನ್ನು ನೇಮಕ ಮಾಡಿ ಆದೇಶ ಪತ್ರ ವಿತರಿಸಿ ಮಾತನಾಡಿದರು.

ದೇಶದಲ್ಲಿ ಮೋದಿ ಹಾಗೂ ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡುವ ಮೂಲಕ ಅಭಿವೃದ್ಧಿಶೀಲ ದೇಶದ ನಿರ್ಮಾಣದ ಸಂಕಲ್ಪ ಹೊತ್ತಿದೆ. ದೇಶದಲ್ಲಿ ದಶಕಗಳ ಕಾಲ ಆಡಳಿತ ನಡೆಸಿದ ಸರ್ಕಾರಗಳ ವೈಫಲ್ಯಗಳಿಂದ ಅಧೋಗತಿಗೆ ತಲುಪಿದ್ದ ದೇಶದ ವ್ಯವಸ್ಥೆಯನ್ನು ಸರಿಪಡಿಸಲು ಪೆಟ್ರೋಲ್‌, ಡೀಸೆಲ್‌ ಮೇಲೆ ಸುಂಕ ಹೆಚ್ಚಳ ಅನಿವಾರ್ಯವಾಗಿದೆ. ಆದರೆ ಇದು ಕ್ಷಣಿಕವಾಗಿದ್ದು, ಮುಂದಿನ ದಿನಗಳಲ್ಲಿ ತೆರಿಗೆ ಕಡಿಮೆ ಮಾಡಿ ಬಡ ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ ಪೆಟ್ರೋಲ್‌, ಡೀಸೆಲ್‌ ಲಭ್ಯವಾಗಿದೆ. ನಾಗರೀಕರು ಆತಂಕ ಪಡುವ ಅಗತ್ಯವಿಲ್ಲ. ಎಂದರು.

ಸದನದಲ್ಲಿ ತಪ್ಪು ಉತ್ತರ ನೀಡಿ ಪೇಚಿಗೆ ಸಿಲುಕಿದ ಸಚಿವ MTB

ಬಿಜೆಪಿ ಅಲ್ಪಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ಎ.ಅಪ್ಸರ್‌ ಮಾತನಾಡಿ, ನಗರದಲ್ಲಿ ಮಂಜುನಾಥ್‌ ಯಾದಿ ಅವರು ಬಿಜೆಪಿ ಪಕ್ಷ ಸಂಘಟನೆ ದೃಷ್ಠಿಯಿಂದ ಅವಿರತ ಶ್ರಮಿಸುತ್ತಿರುವ ಪರಿಣಾಮ ಅವರ ಸೇವೆ ಪರಿಗಣಿಸಿ ಯುವ ಮೋರ್ಚಾ ಉಪಾಧ್ಯಕ್ಷರನ್ನಾಗಿ ಮಾಡಿ ಜವಾಬ್ದಾರಿ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷದ ತತ್ವ ಸಿದ್ದಾಂತಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಬಿಜೆಪಿ ಪಕ್ಷವನ್ನು ಅ​ಧಿಕಾರಕ್ಕೆ ತರಲು ಸಹಕರಿಸಬೇಕು ಎಂದರು.

ಬಿಜೆಪಿ ನಗರ ಯುವ ಮೋರ್ಚಾ ಅಧ್ಯಕ್ಷ ಸಂದೀಪ್‌, ಕಾರ್ಯದರ್ಶಿ ರಾಮು, ನಗರಸಭೆ ಸದಸ್ಯ ವೆಂಕಟೇಶ್‌, ಎಸ್‌ಸಿ ಘಟಕದ ಉಪಾಧ್ಯಕ್ಷ ಶಿವರಾಜ್‌, ಕಾರ್ಯದಶಿ ನವೀನ್‌, ಮುಖಂಡರಾದ ಗೋವಿಂದ್‌ರಾಜ್‌, ವಿನೋದ್‌, ಮನ್ಸೂರ್‌ ಇದ್ದರು.

Latest Videos
Follow Us:
Download App:
  • android
  • ios