ಬೆಂಗಳೂರು[ಡಿ.07]: ಮೈಸೂರು ರಸ್ತೆಯ ಬಾಲಗಂಗಾಧನನಾಥ ಸ್ವಾಮೀಜಿ ಮೇಲ್ಸೇತುವೆಯಲ್ಲಿ (ಸಿರ್ಸಿ ಫ್ಲೈಓವರ್‌) ಮೈಸೂರು ರಸ್ತೆಯಿಂದ ಪುರಭವನ ಕಡೆಗೆ ಹೋಗುವ ಮಾರ್ಗದ ಡಾಂಬರೀಕರಣ ಕಾಮಗಾರಿಯನ್ನು ಕೆಲವೇ ದಿನಗಳಲ್ಲಿ ಆರಂಭಿಸಲಾಗುವುದು ಎಂದು ಮೇಯರ್‌ ಗೌತಮ್‌ ಕುಮಾರ್‌ ತಿಳಿಸಿದ್ದಾರೆ.

ಶುಕ್ರವಾರ ಬಿಬಿಎಂಪಿ ಹಾಗೂ ಪೊಲೀಸ್‌ ಇಲಾಖೆ ಅಧಿಕಾರಿಗಳೊಂದಿಗೆ ಸಿರ್ಸಿ ಮೇಲ್ಸೇತುವೆಯಲ್ಲಿ ಡಾಂಬರೀಕರಣ ಬಾಕಿ ಇರುವ ಮಾರ್ಗವನ್ನು ಮೇಯರ್‌ ಪರಿಶೀಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗ ಗುರುತಿಸಿಕೊಟ್ಟು ಕಾಮಗಾರಿ ಆರಂಭಿಸಲು ಅನುವು ಮಾಡಿಕೊಡುವಂತೆ ನಗರ ಸಂಚಾರಿ ಪೊಲೀಸರೊಂದಿಗೆ ಚರ್ಚೆ ನಡೆಸಲಾಗಿದೆ. ಇನ್ನು ನಾಲ್ಕು ದಿನಗಳೊಳಗೆ ಪರ್ಯಾಯ ಮಾರ್ಗ ಗುರುತಿಸಿ ಕಾಮಗಾರಿ ಆರಂಭಕ್ಕೆ ಅನುಮತಿ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ. ಅನುಮತಿ ಸಿಕ್ಕ ಕೂಡಲೇ ಡಾಂಬರೀಕರಣ ಆರಂಭಿಸಲಾಗುವುದು ಎಂದು ಹೇಳಿದರು.

ಮಹಿಳಾ ಸುರಕ್ಷತೆಗೆ ಬೆಂಗಳೂರು ಪೊಲೀಸರ ವಿನೂತನ ಕ್ರಮ: ‘ಹಲೋ ನೈಬರ್‌’..

ಸಿರ್ಸಿ ಮೇಲ್ಸೇತುವೆ 2.65 ಕಿ.ಮೀ ಉದ್ದವಿದ್ದು, ಟೌನ್‌ಹಾಲ್‌ ಕಡೆಯಿಂದ ಮೈಸೂರು ರಸ್ತೆ ಕಡೆಗೆ ಸಾಗುವ ಒಂದು ಮಾರ್ಗವನ್ನು ಈಗಾಗಲೇ 5 ಕೋಟಿ ರು. ವೆಚ್ಚದಲ್ಲಿ ಕಳೆದ ಮಾಚ್‌ರ್‍ನಲ್ಲಿ ನೂತನ ತಂತ್ರಜ್ಞಾನ ಬಳಸಿಕೊಂಡು ಡಾಂಬರೀಕರಣ ಮಾಡಲಾಗಿದೆ. ಇದೀಗ ಮತ್ತೊಂದು ಭಾಗದ ರಸ್ತೆಗೆ ಡಾಂಬರೀಕರಣ ಕಾಮಗಾರಿ ಪ್ರಾರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. 

ಹಾಗಾಗಿ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಗುರುತಿಸಿಕೊಡಲು ಸಂಚಾರಿ ಪೊಲೀಸರೊಂದಿಗೆ ಚರ್ಚಿಸಲಾಗಿದೆ. ನಾಲ್ಕೈ ದಿನಗಳಲ್ಲಿ ಕಾಮಗಾರಿ ಆರಂಭಿಸಲು ಅನುಮತಿ ನೀಡುವುದಾಗಿ ಅನುಮತಿ ನೀಡುವುದಾಗಿ ಪೊಲೀಸರು ತಿಳಿಸಿದ್ದು, ಅನುಮತಿ ಸಿಕ್ಕ ಬಳಿಕ 30 ದಿನಗಳೊಳಗೆ ಡಾಂಬರೀಕರಣ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಸಿರ್ಸಿ ಫ್ಲೈಓವರ್‌ನಲ್ಲಿ ಬಾಕಿ ಇರುವ ಮಾರ್ಗದ ಡಾಂಬರೀಕರಣ ಕಾಮಗಾರಿ ಮುಗಿಯುವವರೆಗೆ ವಾಹನ ಸಂಚಾರಕ್ಕೆ ನಾಲ್ಕೈದು ದಿನಗಳಲ್ಲಿ ಪರ್ಯಾಯ ಮಾರ್ಗ ಗುರುತಿಸಿಕೊಡುವ ಬಗ್ಗೆ ಸಂಚಾರಿ ಪೊಲೀಸರೊಂದಿಗೆ ಚರ್ಚಿಸಲಾಗಿದೆ. ನಾಲ್ಕೈದು ದಿನಗಳಲ್ಲಿ ಪಯಾರ್ಯ ಮಾರ್ಗ ಗುರುತಿಸಿ ಅನುಮತಿ ನೀಡುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ. ಅನುಮತಿ ಸಿಕ್ಕ 30 ದಿನಗಳಲ್ಲಿ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ.

- ಬಿ.ಎಚ್‌.ಅನಿಲ್‌ಕುಮಾರ್‌, ಬಿಬಿಎಂಪಿ ಆಯುಕ್ತ