Asianet Suvarna News Asianet Suvarna News

ಬದಲಾಗಲಿದೆ ಗ್ರಾಮೀಣ ಪ್ರದೇಶ'

ಗ್ರಾಮೀಣ ಪ್ರದೇಶ ಸಂಪೂರ್ಣ ಬದಲಾಗಲಿದೆ.ಶೀಘ್ರವೇ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯತ್ತ ಸಾಗಲಿವೆ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

Soon tumkur Rural Areas Will Change Says Minister Madhuswamy
Author
Bengaluru, First Published Aug 16, 2020, 1:29 PM IST

ತುಮಕೂರು (ಆ.16): ತುಮಕೂರು ಜಿಲ್ಲೆಯ ಗ್ರಾಮೀಣ ಪ್ರದೇಶವು ಎರಡ್ಮೂರು ವರ್ಷಗಳಲ್ಲಿ ಸಾಕಷ್ಟುಅಭಿವೃದ್ಧಿಯ ಬದಲಾವಣೆಯನ್ನು ಕಾಣಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ತಿಳಿಸಿದ್ದಾರೆ.

ನಗರದ ಸರಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ 74ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯ ಇತರೆ ಜಿಲ್ಲೆಗಳನ್ನು ಬಿ ಮತ್ತು ಸಿ ವಲಯಗಳನ್ನಾಗಿ ವಿಂಗಡಿಸಿದ್ದು, ಸ್ಥಳೀಯ ಕಚ್ಚಾ ವಸ್ತುಗಳ ಲಭ್ಯತೆಯನ್ನಾಧರಿಸಿ ಕೈಗಾರಿಕೆಗಳನ್ನು ಆರಂಭಿಸಲು ಪೋ›ತ್ಸಾಹವನ್ನು ನೀಡಲಾಗುತ್ತಿದೆ. ಅದೇ ರೀತಿ ತುಮಕೂರು ಜಿಲ್ಲೆಯಲ್ಲಿ ತೆಂಗು ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸಲು ಕೇರಳದ ಹಣಕಾಸು ಸಚಿವರು ಹಾಗೂ ತೆಂಗು ಸಚಿವರ ಸಂಪರ್ಕದಲ್ಲಿದ್ದು, ವಿಭಿನ್ನ ರೀತಿಯ ತೆಂಗು ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸಲು ಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಮತ್ತೆ 5 ದಿನ ಭಾರೀಮಳೆ : ಎಲ್ಲೆಲ್ಲಿ ಅಲರ್ಟ್..?...

ವಸಂತನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕಾ ನಿವೇಶನಗಳು ಖಾಲಿ ಇದ್ದು, ಕೈಗಾರಿಕ ಪ್ರದೇಶಕ್ಕೆ ಪಿಪಿ ಮಾಡೆಲ್‌ನಲ್ಲಿ ನೀರು ಒದಗಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಅಲ್ಲದೆ ಕುಡಿಯುವ ನೀರು ಕೂಡ ಪೂರೈಸಲಾಗುವುದು. ಒಟ್ಟಾರೆ ಜಿಲ್ಲೆಯಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತನ್ನು ನೀಡಲಿದೆ ಎಂದರು.

ಸ್ಮಾರ್ಟ್‌ಸಿಟಿ ತುಮಕೂರು ನಗರ ಹಾಗೂ ಜಿಲ್ಲೆಯಲ್ಲಿರುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಾಕಷ್ಟುಒತ್ತು ನೀಡಲಾಗಿದೆ. ತುಮಕೂರು ನಗರಕ್ಕೆ ಬುಗುಡನಹಳ್ಳಿ ಕೆರೆಯಿಂದ ಮಾತ್ರ ನೀರು ಪೂರೈಸಲಾಗುತ್ತಿದೆ. ಇನ್ನು 2 ಕೆರೆಗಳಿಂದ ತುಮಕೂರು ನಗರಕ್ಕೆ ನೀರು ಪೂರೈಸಲು ಚಿಂತಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಮರ್ಪಕವಾದ ನೀರು ತುಮಕೂರು ನಗರಕ್ಕೆ ಪೂರೈಕೆಯಾಗಲಿದೆ ಎಂದರು.

ಜಿಲ್ಲೆಯಲ್ಲಿ ಹೆದ್ದಾರಿ ಕಾಮಗಾರಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕೈಗೊಳ್ಳಲಾಗಿದೆ. ಶಿರಾ-ಮೂಡಿಗೆರೆ(ರಾ.ಹೆ.234), ಬೆಂಗಳೂರು-ಶಿವಮೊಗ್ಗ(ರಾ.ಹೆ.206), ಬೀದರ್‌-ಶ್ರೀರಂಗಪಟ್ಟಣ(ರಾ.ಹೆ.158) ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಬೆಂಗಳೂರು-ಶಿವಮೊಗ್ಗ ರಾ.ಹೆ.206ರ ಚತುಷ್ಪಥರಸ್ತೆ ಕಾಮಗಾರಿ ಮುಂದಿನ 6 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು.

ನಿರಾಶ್ರಿತರಿಗೆ ಗೌರವಯುತ ಬದುಕು ನಿರ್ಮಿಸುತ್ತೇವೆ: ಸಚಿವ ಶಿವರಾಮ ಹೆಬ್ಬಾರ

ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು, ದಾದಿಯರು ಹಾಗೂ ಜಿಲ್ಲಾಡಳಿತವು ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಸಾಕಷ್ಟುದುಡಿದ್ದಾರೆ. ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವನಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಕೊರೋನಾ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ 400 ಹಾಸಿಗೆಗಳ ಜಿಲ್ಲಾ ಕೊವಿಡ್‌ ಆಸ್ಪತ್ರೆ, ಪ್ರತಿ ತಾಲೂಕಿನಲ್ಲಿ ಹೈಪೋ› ಆಕ್ಸಿಜನ್‌ ಇರುವ 50 ಹಾಸಿಗೆಗಳು, ಹೆಚ್ಚುವರಿ 2 ವೆಂಟಿಲೇಟರ್‌ ಹಾಗೂ 6 ಐಸಿಯು ಹಾಸಿಗೆಗಳನ್ನು ಮೀಸಲಿಡಲಾಗಿದೆ. ಕೋವಿಡ್‌ ಕೇರ್‌ ಕೇಂದ್ರ ಹಾಗೂ ವೈರಾಲಜಿ ಲ್ಯಾಬ್‌ಗಳು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪಿಸಿದ್ದು, ತಿಪಟೂರಿನಲ್ಲಿ ವೈರಾಲಜಿ ಲ್ಯಾಬ್‌ನ್ನು ಸ್ಥಾಪಿಸಲಾಗುವುದು ಎಂದರು.

ಸೋಂಕಿನ ಲಕ್ಷಣಗಳು ಕಂಡು ಬಂದ ತಕ್ಷಣ ಆಸ್ಪತ್ರೆಗೆ ಬನ್ನಿ, ವಿಳಂಬವಾಗಿ ಆಸ್ಪತ್ರೆಗೆ ಬಂದರೆ ವೈದ್ಯರು ಚಿಕಿತ್ಸೆ ನೀಡಲು ಸಾಕಷ್ಟುಶ್ರಮ ಪಡಬೇಕಾಗುತ್ತದೆ. ಜನರು ಭಯಪಡದೇ ಧೈರ್ಯದಿಂದ ಎದುರಿಸಬೇಕು. ಕೋವಿಡ್‌ಗೆ ಲಸಿಕೆಗಳು ಕಂಡು ಹಿಡಿಯಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಎಲ್ಲಾ ಸಮುದಾಯಗಳಿಗೆ ಸ್ಮಶಾನ ಭೂಮಿ ಇರಬೇಕು. ಜಿಲ್ಲೆಯಲ್ಲಿ ಸ್ಮಶಾನಗಳಿಗೆ ಕೊರತೆಯಾಗಬಾರದು. ಎಲ್ಲಾ ಸಮುದಾಯಗಳಿಗೆ ಸ್ಮಶಾನ ನೀಡುವಂತೆ ಜಿಲ್ಲಾಡಳಿತಕ್ಕೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದರು.

ಕೊರೋನಾ ಸೋಂಕಿನಿಂದಾಗಿ ಶಾಲಾ-ಕಾಲೇಜುಗಳನ್ನು ತೆರೆಯುತ್ತಿಲ್ಲ. ಶಾಲಾ ಕಾಲೇಜು ತೆರೆಯುವ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ಕೊರೋನಾ ಸಂಕಷ್ಟದ ಸಮಯದಲ್ಲಿ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿದ ಮಹನೀಯರನ್ನು ಹಾಗೂ ಸಂಸ್ಥೆಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಸಚಿವರು ತಿಳಿಸಿದರು.

ಸಮಾರಂಭದ ನಂತರ ಮಾತನಾಡಿದ ಸಚಿವರು, ಬೆಂಗಳೂರು ನಗರದಲ್ಲಿ ನಡೆದಿರುವ ಘಟನೆಯ ಬಗ್ಗೆ ಪೊಲೀಸ್‌ ಇಲಾಖೆ ತನಿಖೆ ನಡೆಸುತ್ತಿದೆ. ತನಿಖಾ ವರದಿ ಬಂದ ನಂತರ ವರದಿಯನ್ನು ಆಧರಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದ ಅವರು, ಆಸ್ತಿಗಳನ್ನು ನಾಶ ಮಾಡಿದವರಿಂದ ನಷ್ಟವಸೂಲಿ ಮಾಡುವ ಕುರಿತ 2001ರಲ್ಲಿ ರಾಜ್ಯದಲ್ಲಿ ಕಾನೂನು ಜಾರಿಯಲ್ಲಿದೆ. ಅದಕ್ಕೆ ಪ್ರಾಧಿಕಾರವನ್ನು ರಚನೆ ಮಾಡಿ, ಅಧಿಕಾರ ನೀಡಬೇಕಾಗುತ್ತದೆ. ಈ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್‌, ವಿಧಾನ ಪರಿಷತ್‌ ಶಾಸಕ ಕಾಂತರಾಜು, ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಲತಾ ರವಿಕುಮಾರ್‌, ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಪಾಲಿಕೆ ಮೇಯರ್‌ ಫರೀದಾ ಬೇಗಂ, ಉಪಮೇಯರ್‌ ಶಶಿಕಲಾ ಗಂಗಹನುಮಯ್ಯ, ಜಿಲ್ಲಾಧಿಕಾರಿ ಡಾ. ಕೆ.ರಾಕೇಶ್‌ಕುಮಾರ್‌, ಜಿಲ್ಲಾ ಪಂಚಾಯಿತಿ ಸಿಇಓ ಶುಭಾ ಕಲ್ಯಾಣ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಕೋನವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ತಹಸೀಲ್ದಾರ್‌ ಮೋಹನ್‌ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.

Follow Us:
Download App:
  • android
  • ios