Asianet Suvarna News Asianet Suvarna News

ಆಗ್ನೇಯ ಶಿಕ್ಷಕರ ಕ್ಷೇತ್ರ: ಕರಡು ಮತದಾರರ ಪಟ್ಟಿ ಪ್ರಕಟ

ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ-2023 ರ ಕರಡು ಮತದಾರರ ಪಟ್ಟಿಯನ್ನು 23 ರಂದು ಸಾರ್ವಜನಿಕರ ಮಾಹಿತಿಗಾಗಿ ಪ್ರಚುರಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.

South East Teachers Constituency: Draft Electoral Roll Published snr
Author
First Published Nov 24, 2023, 7:12 AM IST

 ತುಮಕೂರು :  ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ-2023 ರ ಕರಡು ಮತದಾರರ ಪಟ್ಟಿಯನ್ನು 23 ರಂದು ಸಾರ್ವಜನಿಕರ ಮಾಹಿತಿಗಾಗಿ ಪ್ರಚುರಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.

ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಜಿಲ್ಲಾಧಿಕಾರಿಗಳ ಕಚೇರಿ, ತುಮಕೂರು ಮಹಾನಗರಪಾಲಿಕೆ, ಜಿಲ್ಲೆಯ ಎಲ್ಲಾ ಉಪವಿಭಾಗಾಧಿಕಾರಿಗಳ ಕಚೇರಿ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಕಚೇರಿ, ತಿಪಟೂರು, ಶಿರಾ ನಗರಸಭೆ, ಎಲ್ಲಾ ಪುರಸಭೆ, ಪಟ್ಟಣ ಪಂಚಾಯತಿ, ಶಿಕ್ಷಣ ಸಂಸ್ಥೆಗಳ ಸೂಚನಾ ಫಲಕದಲ್ಲಿ ಕರಡು ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ ಎಂದು ತಿಳಿಸಿದರು.

ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಶ್ರೀ ವೈ.ಎ.ನಾರಾಯಣಸ್ವಾಮಿ ಅವರ ಪದಾವಧಿಯು 21-6-2024ರಂದು ಕೊನೆಗೊಳ್ಳಲಿದ್ದು, ಭಾರತ ಚುನಾವಣಾ ಆಯೋಗದ ಅರ್ಹತಾ ದಿನಾಂಕ: 01-11-2023೩ಕ್ಕೆ ಅನ್ವಯಿಸುವಂತೆ 23-11-2023 ೩ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ತಿಳಿಸಿದರು.

ಒಟ್ಟು 3287 ಪುರುಷ, 2234 ಮಹಿಳಾ ಸೇರಿದಂತೆ ಒಟ್ಟು 6061 ಸೇರ್ಪಡೆಗೊಂಡ ಅರ್ಹ ಮತದಾರರಿದ್ದು, 23-11-2023ರಂದು ಪ್ರಕಟಿಸಲಾಗಿರುವ ಕರಡು ಮತದಾರರ ಪಟ್ಟಿಗೆ ಯಾವುದೇ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ 23 ರಿಂದ ಡಿಸೆಂಬರ್ 9, ರೊಳಗಾಗಿ ಮತದಾರರ ನೋಂದಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು, ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ, ತುಮಕೂರು ಜಿಲ್ಲೆ, ತುಮಕೂರು ಆಯುಕ್ತರು, ತುಮಕೂರು ಮಹಾನಗರಪಾಲಿಕೆ, ಜಿಲ್ಲೆಯ ಎಲ್ಲಾ ಉಪವಿಭಾಗಾಧಿಕಾರಿಗಳು, ಜಿಲ್ಲೆಯ ಎಲ್ಲಾ ತಾಲೂಕು ತಹಸೀಲ್ದಾರವರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಡಿ.12 ರೊಳಗಾಗಿ ತಲುಪುವಂತೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.

ಭಾರತದ ಪ್ರಜೆಯಾಗಿರುವ ಮತ್ತು ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿ ಮತ್ತು ನ.1ಕ್ಕೆ ಮೊದಲು 6 ವರ್ಷಗಳ ಅವಧಿಯಲ್ಲಿ ಕನಿಷ್ಟ ಒಟ್ಟು 3 ವರ್ಷಗಳಷ್ಟು, ದರ್ಜೆಯಲ್ಲಿ ಪ್ರೌಢಶಾಲೆಗಿಂತ ಕಡಿಮೆ ಇಲ್ಲದ ನಿರ್ದಿಷ್ಟ ಪಡಿಸಿದಂತಹ ರಾಜ್ಯದೊಳಗಿನ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಬೋಧನಾ ವೃತ್ತಿಯಲ್ಲಿ ನಿರತ ಪ್ರತಿಯೊಬ್ಬ ವ್ಯಕ್ತಿಯೂ ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹನಾಗಿರುತ್ತಾನೆ.

ಸ್ವೀಕೃತವಾಗುವ ಹಕ್ಕು ಮತ್ತು ಆಕ್ಷೇಪಣೆ ಡಿ. 25ರೊಳಗಾಗಿ ಪರಿಶೀಲಿಸಿ ವಿಲೇ ಪಡಿಸಲಾಗುವುದು. ನಂತರ ಡಿ.30ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ತಮ್ಮ ಕುಟುಂಬದ ಸದಸ್ಯರು ಮರಣ ಹೊಂದಿದ್ದಲ್ಲಿ ತಮ್ಮ ವ್ಯಾಪ್ತಿಯ ಬಿಎಲ್‌ಒ ಗಳಿಗೆ ನಮೂನೆ ೭ರಲ್ಲಿ ಅರ್ಜಿ ಸಲ್ಲಿಸಿ ಮೃತಪಟ್ಟವರ ಹೆಸರನ್ನು ಸ್ವಯಂ ಪ್ರೇರಿತರಾಗಿ ಮತದಾರರ ಪಟ್ಟಿಯಿಂದ ತೆಗೆಸಬೇಕೆಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಉಪಸ್ಥಿತರಿದ್ದರು.

Follow Us:
Download App:
  • android
  • ios