Asianet Suvarna News Asianet Suvarna News

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ- ಅಂತಿಮ ಮತದಾರರ ಪಟ್ಟಿಗಳು ರಾಜಕೀಯ ಪಕ್ಷಗಳಿಗೆ ಹಸ್ತಾಂತರ

ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಅಂತಿಮ ಪಟ್ಟಿಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಲೋಕನಾಥ್ ಅವರು ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೆ ನೀಡಿದರು.

South Teachers Constituency Election- Final Voter Lists Handover to Political Parties snr
Author
First Published Dec 31, 2023, 11:03 AM IST

  ಮೈಸೂರು:  ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಅಂತಿಮ ಪಟ್ಟಿಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಲೋಕನಾಥ್ ಅವರು ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೆ ನೀಡಿದರು.

ದಕ್ಷಿಣ ಶಿಕ್ಷಕರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯ ಪ್ರಕಟಣೆಯ ಸಂಬಂಧ ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 5244 ಮತದಾರರು ಸೇರ್ಪಡೆಗೊಂಡಿದ್ದರು. ಹಕ್ಕು ಮತ್ತು ಆಕ್ಷೇಪಣೆಯ ಅವಧಿಯಲ್ಲಿ 3023 ಮತದಾರರು ಸೇರ್ಪಡೆಗೊಂಡಿದ್ದು, ಒಟ್ಟು 8267 ಮತದಾರರು ಅಂತಿಮ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿದ್ದಾರೆ ಎಂದರು.

ನಿರಂತರ ಪರಿಷ್ಕರಣೆಯ ಅವಧಿಯಲ್ಲಿ ಸೇರ್ಪಡೆಗೆ ಕಲ್ಪಿಸಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ಎಲ್ಲಾ ಅರ್ಹ ಮತದಾರರು ಮತದಾರರ ಪಟ್ಟಿಗೆ ನೋಂದಣಿ ಮಾಡುವ ಕುರಿತು ರಾಜಕೀಯ ಪಕ್ಷಗಳ ವತಿಯಿಂದ ಜಾಗೃತಿ ಮೂಡಿಸಿ ಸಹಕರಿಸಲು ರಾಜಕೀಯ ಪಕ್ಷಗಳಿಗೆ ಅವರು ಮನವಿ ಮಾಡಿದರು

ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದನ್ವಯ ಯಾವುದೇ ಹಂತದಲ್ಲಿಯೂ ಒಬ್ಬರೇ ಹೆಚ್ಚಿನ ಸಂಖ್ಯೆಯ ಅರ್ಜಿಗಳನ್ನು ಸಲ್ಲಿಸಿದಲ್ಲಿ ಸ್ವೀಕರಿಸುವುದಿಲ್ಲ ಎಂದರು.

ಮತದಾರರ ಸಹಾಯವಾಣಿ 1950 ಪ್ರಾರಂಭಿಸಲಾಗಿದ್ದು, ಮತದಾರ ಪಟ್ಟಿ ಪರಿಷ್ಕರಣೆ ಮತ್ತು ಮತದಾಯ ಪಟ್ಟಿಯಲ್ಲಿ ಹೆಸರು ನೋಂದಣಿ, ತೆಗೆದು ಹಾಕುವುದು ಹಾಗೂ ತಿದ್ದುಪಡಿ ಹಾಗೂ ಇತರೆ ಯಾವುದೇ ಚುನಾವಣಾ ಸಂಬಂಧಿತ ಮಾಹಿತಿ ಪಡೆಯಲು ಸಾರ್ವಜನಿಕರು ಸಹಾಯವಾಣಿ ಉಪಯೋಗಿಸಿಕೊಳ್ಳಬಹುದಾಗಿದೆ ಎಂದರು.

ಕಾಂಗ್ರೆಸ್ ಮುಖಂಡರಾದ ಕೆ.ಸಿ. ಶೌಕತ್ ಪಾಶ, ಜೆಡಿಎಸ್ ಫಾಲ್ಕನ್ ಬೋರೇಗೌಡ, ಬಿಜೆಪಿಯ ಡಾ. ವಸಂತ್ ಕುಮಾರ್, ಪಾಪಣ್ಣ, ಆಮ್ ಆದ್ಮಿ ಪಾರ್ಟಿಯ ಐಶ್ವರ್ಯ, ಬಿಎಸ್ಪಿ ಮಹದೇವಸ್ವಾಮಿ, ಚುನಾವಣಾ ಶಿರಸ್ತೇದಾರ ಸುರೇಶ್, ಚುನಾವಣಾ ಶಾಖೆಯ ರಾಕೇಶ್ ಇದ್ದರು.

Follow Us:
Download App:
  • android
  • ios