Asianet Suvarna News Asianet Suvarna News

ತಾಂಡಾ‌ ನಿವಾಸಿಗಳಿಗೆ‌ ದಾಖಲೆ ಪ್ರಮಾಣದಲ್ಲಿ ಹಕ್ಕುಪತ್ರ: ಕಲಬುರಗಿ ಡಿಸಿಗೆ ಸಭಾಪತಿ ಪ್ರಶಂಸೆ

ತಾಂಡಾ ನಿವಾಸಿಗಳಿಗೆ ಏಕಕಾಲದಲ್ಲಿ ಪ್ರಧಾನಮಂತ್ರಿಗಳಿಂದ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಆಯೋಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್  ಅವರ ಕಾರ್ಯವೈಖರಿಯನ್ನು ಶ್ಲಾಘಿಸಿ ಡಿಸಿ ಯಶವಂತ ವಿ. ಗುರುಕರ್ ಅವರಿಗೆ ಪ್ರಶಂಸನಾ ಪತ್ರ ನೀಡಿದ ರುವ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ.

Speaker Basavaraj Horatti Praise to Kalaburagi DC Yashwant V Gurukal grg
Author
First Published Jan 22, 2023, 12:00 AM IST

ಕಲಬುರಗಿ(ಜ.22): ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಐದು ಜಿಲ್ಲೆಗಳ 52,072 ತಾಂಡಾ ನಿವಾಸಿಗಳಿಗೆ ಏಕಕಾಲದಲ್ಲಿ ಪ್ರಧಾನಮಂತ್ರಿಗಳಿಂದ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಆಯೋಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್  ಅವರ ಕಾರ್ಯವೈಖರಿಯನ್ನು ಶ್ಲಾಘಿಸಿರುವ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಡಿಸಿ ಅವರಿಗೆ ಪ್ರಶಂಸನಾ ಪತ್ರ ನೀಡಿದ್ದಾರೆ.

1993ರಲ್ಲಿಯೇ ತಾಂಡಾ, ಹಟ್ಟಿಗಳನ್ನು ಕಂದಾಯ ಗ್ರಾಮಕ್ಕೆ ಶಿಫಾರಸ್ಸು ಮಾಡಲಾಗುತ್ತಿದ್ದಾರು, ಇದೀಗ ಅದು ಸಾಕಾರವಾಗಿದೆ. ಇದು ತಮಗೆ ಸಂತೋಷವನ್ನುಂಟು ಮಾಡಿದೆ‌ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ವಲ್ಡ್‌ ಬುಕ್ ಆಫ್ ರೆಕಾರ್ಡ್ ನಿಂದ ಪ್ರಮಾಣ ಪತ್ರ ಪಡೆದಿರುವ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿಸಿ ಒಂದೇ ದಿನ ಅವರೆಲ್ಲರಿಗೂ ಪ್ರಧಾನಮಂತ್ರಿಗಳಿಂದ ಹಕ್ಕು ಪತ್ರ ವಿತರಣೆಯ ಕಾರ್ಯಕ್ರಮ ಅಚ್ಚುಕಟ್ಟಾಗಿ, ತುಂಬಾ ವ್ಯವಸ್ಥಿತವಾಗಿ ಆಯೋಜಿಸಿ ಅಲೆಮಾರಿ ಸಮುದಾಯಕ್ಕೆ ನೆಮ್ಮದಿಯ ಬದುಕು ನೀಡಿ ಇತರರಿಗೆ ಮಾದರಿಯಾಗಿ ಆಡಳಿತ ನೀಡಿದಕ್ಕಾಗಿ ಬಸವರಾಜ ಹೊರಟ್ಟಿ ಅವರು ತಮ್ಮ ಪತ್ರದಲ್ಲಿ ಡಿ.ಸಿ. ಕಾರ್ಯವೈಖರಿಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಕಲಬುರಗಿ: ಕಾಂಗ್ರೆಸ್‌ ತೊರೆದು ಹಲವರು ಬಿಜೆಪಿ ಸೇರ್ಪಡೆ

ಜನ ಸಾಮಾನ್ಯರ‌ ಬದುಕು ಹಸನಗೊಳಿಸಲು ಇದೇ ರೀತಿಯಲ್ಲಿ ಮುಂದಿನ‌ ಸೇವಾ ಅವಧಿಯಲ್ಲಿಯೂ ವಿನೂತನ ಕಾರ್ಯದಲ್ಲಿ ಸಫಲತೆ ಕಾಣಬೇಕು. ಮುಂದಿನ ತಮ್ಮ ವೃತ್ತಿ ಜೀವನ ಯಶಸ್ವಿಯಿಂದ ಕೂಡಿರಲಿ ಎಂದು ಬಸವರಾಜ ಹೊರಟ್ಟಿ ಡಿಸಿಗೆ ಹಾರೈಸಿದ್ದಾರೆ.

Follow Us:
Download App:
  • android
  • ios