ನ.18-19ರಂದು ಮತದಾರರ ಪಟ್ಟಿ ಬದಲಾವಣೆಗೆ ಬಿಬಿಎಂಪಿ ಚುನಾವಣಾ ವಿಭಾಗದಿಂದ ವಿಶೇಷ ಅಭಿಯಾನ
ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ, ಬದಲಾವಣೆ ಸೇರಿದಂತೆ ಮತ್ತಿತರ ತಿದ್ದುಪಡಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಬಿಬಿಎಂಪಿ ಚುನಾವಣಾ ವಿಭಾಗದಿಂದ ನ.18-19 ಹಾಗೂ ಡಿ.2-3ರಂದು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು (ನ.18): ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ, ಬದಲಾವಣೆ ಸೇರಿದಂತೆ ಮತ್ತಿತರ ತಿದ್ದುಪಡಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಬಿಬಿಎಂಪಿ ಚುನಾವಣಾ ವಿಭಾಗದಿಂದ ನ.18-19 ಹಾಗೂ ಡಿ.2-3ರಂದು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕಳೆದ ಅಕ್ಟೋಬರ್ 27ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಅದರಲ್ಲಿ ಏನಾದರೂ ಬದಲಾವಣೆಗಳಿದ್ದರೆ ಅದನ್ನು ಸರಿಪಡಿಸಲು ಡಿ.9ರವರೆಗೆ ಅವಕಾಶ ಕಲ್ಪಿಸಲಾಗಿದೆ. ಅದರ ಜತೆಗೆ ಇದೀಗ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಶನಿವಾರ ಮತ್ತು ಭಾನುವಾರಗಳಂದೂ ಕರಡು ಪಟ್ಟಿಯಲ್ಲಿ ಬದಲಾವಣೆಗೆ ಅವಕಾಶ ನೀಡಲಾಗುತ್ತಿದೆ. ಅದರಂತೆ ನ.18-19 ಹಾಗೂ ಡಿ.2-3ರಂದು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
Congress ವಿರುದ್ಧ ಕಾಫಿನಾಡಲ್ಲಿ ಫೋಸ್ಟರ್ ಅಭಿಯಾನ: ಸಿದ್ದು ವಿರುದ್ಧ ಶ್ಯಾಡೋ ಸಿಎಂ ಪೋಸ್ಟರ್
ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಬೇಕೆನ್ನುವವರು, ಪಟ್ಟಿಯಲ್ಲಿ ಹೆಸರು ಬದಲಾವಣೆ ಅಥವಾ ಇನ್ನಿತರ ತಿದ್ದುಪಡಿ ಮಾಡಿಕೊಳ್ಳಲು ಇಚ್ಛಿಸುವವರು ವಿಶೇಷ ಅಭಿಯಾನದ ದಿನಗಳಂದು ಬಿಬಿಎಂಪಿಯ ಕಂದಾಯ ಅಧಿಕಾರಿ, ಸಹ ಕಂದಾಯ ಅಧಿಕಾರಿ, ವಾರ್ಡ್ ಕಚೇರಿಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೆ ಮತದಾರರ ಪಟ್ಟಿಗೆ ಹೆಸರು ಸೇರಿಸಲಿಚ್ಛಿಸುವವರು ವೆಬ್‌ಸೈಟ್ voters.eci.gov.in ಅಥವಾ voter helpline ಮೊಬೈಲ್ ಆ್ಯಪ್‌ನಲ್ಲಿಯೂ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಬಿಬಿಎಂಪಿ ಚುನಾವಣಾ ವಿಭಾಗದ ವಿಶೇಷ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದಿನಿಂದ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ: ಭಾರತ ಚುನಾವಣೆ ಆಯೋಗದ ನಿರ್ದೇಶನದಂತೆ ‘ಮಿಂಚಿನ ನೋಂದಣಿ’ ಕಾರ್ಯಕ್ರಮ ನ.18 ಮತ್ತು 19ರಂದು ದ.ಕ. ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ನಡೆಯಲಿದೆ. ಈ ಎರಡು ದಿನಗಳಲ್ಲಿ ಎಲ್ಲ ಬೂತ್ ಮಟ್ಟದ ಅಧಿಕಾರಿಯವರು ಹಾಗೂ ಬಿಎಲ್‌ಒ ಮೇಲ್ವಿಚಾರಕರು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತಗಟ್ಟೆಯಲ್ಲಿ ಉಪಸ್ಥಿತರಿರುವರು. ಸಾರ್ವಜನಿಕರ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲ್ಪಟ್ಟಿದೆಯೇ ಎಂದು ಪರಿಶೀಲಿಸುವುದು.
ನಾನು, ವಿಜಯೇಂದ್ರ ಜೋಡೆತ್ತುಗಳು, ಬಿಜೆಪಿ ಅಧಿಕಾರಕ್ಕೆ ತರಲು ಹೋರಾಟ: ಆರ್.ಅಶೋಕ್
ಅರ್ಹ ಮತದಾರರಿಂದ ಹೊಸದಾಗಿ ಹೆಸರು ಸೇರ್ಪಡೆಗೆ ನಮೂನೆ-6 ಪಡೆದುಕೊಳ್ಳುವುದು, ವಲಸೆಹೋದ, ಮೃತಪಟ್ಟ, ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕುವ ಬಗ್ಗೆ ನಮೂನೆ-7 ಸ್ವೀಕರಿಸುವುದು ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ಹಾಗೂ ಇತರೆ ಯಾವುದಾದರು ತಿದ್ದುಪಡಿ ಅಗತ್ಯವಿದ್ದಲ್ಲಿ ನಮೂನೆ-8 ಸ್ವೀಕರಿಸಲಾಗುವುದು. ಈ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ದ.ಕ. ಜಿಲ್ಲಾ ಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.