ಮಂಗಳೂರು - ಬೆಂಗಳೂರು ಮಧ್ಯೆ ವಿಶೇಷ ರೈಲು : ಇಲ್ಲಿದೆ ಟೈಮ್ ಟೇಬಲ್
ಬೆಂಗಳೂರು ಹಾಗೂ ಮಂಗಳೂರು ನಡುವೆ ವಿಶೇಷ ರೈಲು ಸಂಚಾರ ಮಾಡಲಿದೆ. ಅದರ ಸಮಯವೇನು..? ಇಲ್ಲಿದೆ ಸಂಪೂರ್ಣ ವಿವರ
ಮಂಗಳೂರು (ಡಿ.07): ಮಂಗಳೂರು ಮತ್ತು ಬೆಂಗಳೂರು ನಡುವೆ ಸ್ಪೆಷಲ್ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಸಾಮಾನ್ಯ ದರದೊಂದಿಗೆ ಆರಂಭಿಸಲು ಭಾರತೀಯ ನೈರುತ್ಯ ರೈಲ್ವೆ ಮುಂದಾಗಿದೆ.
ಬೆಂಗಳೂರು (ಕೆಎಸ್‌ಆರ್)- ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲು (06515) ವಾರದಲ್ಲಿ 4 ದಿನಗಳ ಕಾಲ ಸಂಚಾರ ಮಾಡಲಿದೆ. ಬೆಂಗಳೂರು ರೈಲು ನಿಲ್ದಾಣದಿಂದ ಪ್ರತಿ ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಪ್ರಯಾಣ ಬೆಳೆಸಲಿದೆ.
ಈ ರೈಲು ಸಂಚಾರ ಡಿ.8ರಿಂದ 24ರವರೆಗೆ ಸಾರ್ವಜನಿಕ ಸೇವೆಗೆ ಮುಕ್ತವಾಗಿ ಸಿಗಲಿದೆ. ಕೆಎಸ್‌ಆರ್ ರೈಲು ನಿಲ್ದಾಣದಿಂದ ಹೊರಡುವ ಸ್ಪೆಷಲ್ ಎಕ್ಸ್‌ಪ್ರೆಸ್ ರೈಲು ರಾತ್ರಿ 10:30ಕ್ಕೆ ಪ್ರಯಾಣ ಆರಂಭಿಸಲಿದ್ದು, ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ಬೆಳಗ್ಗೆ 8:35ಕ್ಕೆ ತಲುಪಲಿದೆ.
ರೈಲು ಪ್ರಯಾಣಿಕರಿಗೊಂದು ಸಂತಸದ ಸುದ್ದಿ ...
ಮಂಗಳೂರು ಸೆಂಟ್ರಲ್‌ನಿಂದ ಬೆಂಗಳೂರಿಗೆ ಮಂಗಳವಾರ, ಬುಧವಾರ, ಶುಕ್ರವಾರ, ಭಾನುವಾರ ಈ ಸಂಚರಿಸಲಿದ್ದು, ಡಿ.9ರಿಂದ 25ರವರೆಗೆ ಈ ವಿಶೇಷ ರೈಲು ಓಡಾಡಲಿದೆ. ಮಂಗಳೂರು ಸೆಂಟ್ರಲ್‌ನಿಂದ ರಾತ್ರಿ 7 ಗಂಟೆಗೆ ಪ್ರಯಾಣ ಆರಂಭಿಸಲಿದ್ದು, ಬೆಂಗಳೂರಿನ ಕೆಎಸ್‌ಆರ್ ರೈಲು ನಿಲ್ದಾಣವನ್ನು ಬೆಳಗ್ಗೆ 7 ಗಂಟೆಗೆ ತಲುಪಲಿದೆ.