ಮೈಸೂರು(ಸೆ.08): ಈ ಬಾರಿ ಜಿಲ್ಲೆಯ ಆದಿವಾಸಿ ಜನರಿಗೆ ವಿಶ್ವವಿಖ್ಯಾತ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ಜಿಲ್ಲಾಡಳಿತದ ವತಿಯಿಂದ ಕಲ್ಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ತಿಳಿಸಿದರು.

ಎಚ್‌.ಡಿ. ಕೋಟೆ ಪಟ್ಟಣದ ಡಾ.ಬಿ.ಆರ್‌. ಅಂಬೇಡ್ಕರ್‌ ಭವನದಲ್ಲಿ ಗ್ರಾಮೀಣ ದಸರಾ ಮಹೋತ್ಸವ ಏರ್ಪಡಿಸುವ ಸಂಬಂಧ ಆಯೋಜಿಸಿದ್ದ ತಾಲೂಕಿನ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಸೋಮಣ್ಣ, ಜಿಟಿಡಿ ಪ್ರೀತಿಯಿಂದ ಹೊಗಳಿಕೆ : ಸಾರಾ

ಜಿಲ್ಲೆಯ ಗಡಿ ತಾಲೂಕುಗಳಾದ ಎಚ್‌.ಡಿ. ಕೋಟೆ, ಹುಣಸೂರು ಹಾಗೂ ಪಿರಿಯಾಪಟ್ಟಣ ತಾಲೂಕು ವ್ಯಾಪ್ತಿಯಲ್ಲಿ ನೆಲೆಸಿರುವ ಆದಿವಾಸಿ ಜನರನ್ನು ದಸರಾ ಉತ್ಸವದ ವೇಳೆ ಬಸ್‌ಗಳ ಮೂಲಕ ಮೈಸೂರಿಗೆ ಕರೆತಂದು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ಮಾಡುವುದು ಈ ಬಾರಿ ನಮ್ಮ ಆದ್ಯತೆಯ ಕೆಲಸವಾಗಿದೆ. ಹೀಗೆ ಮೈಸೂರಿಗೆ ಆಗಮಿಸುವ ಗಿರಿಜನರಿಗೆ ಊಟೋಪಚಾರದ ವ್ಯವಸ್ಥೆಯೊಂದಿಗೆ ಚಾಮುಂಡಿ ಬೆಟ್ಟ, ಅರಮನೆ ಹಾಗೂ ಮೃಗಾಲಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.

ಶಾಸಕ ಅನಿಲ್‌ ಚಿಕ್ಕಮಾದು, ನಿರಂಜನ್‌ ಕುಮಾರ್‌, ಮಾಜಿ ಶಾಸಕ ಸಿದ್ದರಾಜು, ಬಿಜೆಪಿ ಜಿಲ್ಲಾಧ್ಯಕ್ಷ ಎಂ. ಶಿವಣ್ಣ, ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ, ಉಪಾಧ್ಯಕ್ಷೆ ಗೌರಮ್ಮ, ಎಸಿ ವೀಣಾ, ಹೆಚ್ಚುವರಿ ಎಸ್ಪಿ ಸ್ನೇಹಾ, ತಾಪಂ ಅಧ್ಯಕ್ಷೆ ಮಂಜುಳಾ ದೇವಣ್ಣ, ಉಪಾಧ್ಯಕ್ಷೆ ಮಂಜುಳಾ ಚಂದ್ರೇಗೌಡ, ಸರಗೂರು ಪಪಂ ಅಧ್ಯಕ್ಷೆ ಜ್ಯೋತಿ ಯೋಗೇಶ್‌ ಇದ್ದರು.