'ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಹೆಚ್ಚಳ ಮಾಡದಿದ್ದರೆ 15 ಶಾಸಕರ ರಾಜೀನಾಮೆ'
ವಾಲ್ಮೀಕಿ ಸಮಾಜಕ್ಕೆ 7.5 ಮೀಸಲಾತಿ ಹೆಚ್ಚಳ ಮಾಡದಿದ್ದರೆ 15 ಶಾಸಕರು ರಾಜೀನಾಮೆ ನೀಡುತ್ತಾರೆ ಎಂದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ| ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಮೀಸಲಾತಿ ಹೆಚ್ಚಳ ಬಗ್ಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಘೋಷಿಸಲಿ, ಇಲ್ಲದಿದ್ದರೆ ಅಂದು ಶಾಸಕರ ಹಾಗೂ ಮುಖಂಡರ ಸಭೆ ನಡೆಸಿ ಚರ್ಚೆ ಮಾಡಲಾಗುತ್ತದೆ|
ಯಾದಗಿರಿ(ಡಿ.23): ವಾಲ್ಮೀಕಿ ಸಮಾಜಕ್ಕೆ 7.5 ಮೀಸಲಾತಿ ಹೆಚ್ಚಳ ಮಾಡದಿದ್ದರೆ 15 ಶಾಸಕರು ರಾಜೀನಾಮೆ ನೀಡುತ್ತಾರೆ ಎಂದು ವಾಲ್ಮೀಕಿ ಸಮುದಾಯದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರು ಹೇಳಿದ್ದಾರೆ.
ಸೋಮವಾರ ನಗರದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಮೀಸಲಾತಿ ಹೆಚ್ಚಳ ಬಗ್ಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಘೋಷಿಸಲಿ, ಇಲ್ಲದಿದ್ದರೆ ಅಂದು ಶಾಸಕರ ಹಾಗೂ ಮುಖಂಡರ ಸಭೆ ನಡೆಸಿ ಚರ್ಚೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಸಚಿವ ಬಿ.ಶ್ರೀರಾಮುಲು ಇಲ್ಲವೇ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೋಳಿ ಇಬ್ಬರಲ್ಲಿ ಒಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ, ಸುರಪುರ ಶಾಸಕ ರಾಜುಗೌಡ ಅವರಿಗೆ ಸಚಿವ ಸ್ಥಾನ ನೀಡಬೇಕು. ಹಾಗೆಯೇ ಅಯೋದ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ಮಂದಿರ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದ್ದಾರೆ.