ಇಸ್ರೇಲ್ ದಾಳಿಯಲ್ಲಿ ಹತರಾದ ಇರಾನ್‌ನ ಮಾಜಿ ನಾಯಕ ಅಯತೊಲ್ಲಾ ಖಮೇನಿ ಅವರ ಭಾವಚಿತ್ರ ಅಳವಡಿಸಿದ್ದನ್ನು ವಿರೋಧಿಸಿ, ಶ್ರೀರಾಮಸೇನೆ ಕಾರ್ಯಕರ್ತರು ಬೆಳಗಾವಿಯ ವಿವಿಧೆಡೆ ಛತ್ರಪತಿ ಶಿವಾಜಿ ಮತ್ತು ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರ ಭಾವಚಿತ್ರವಿರುವ ಬ್ಯಾನರ್‌ಗಳನ್ನು ಅಳವಡಿಸಿದ್ದಾರೆ.
ಬೆಳಗಾವಿ (ಮಾ.17): ಇಸ್ರೇಲ್ ದಾಳಿಯಲ್ಲಿ ಹತರಾದ ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಭಾವಚಿತ್ರ ಅಳವಡಿಸಿರುವುದನ್ನು ವಿರೋಧಿಸಿ ಶ್ರೀರಾಮಸೇನೆ ಕಾರ್ಯಕರ್ತರು ನಗರದ ವಿವಿಧೆಡೆ ಶಿವಾಜಿ ಮತ್ತು ನೆತನ್ಯಾಹು ಭಾವಚಿತ್ರದ ಬ್ಯಾನರ್‌ಗಳನ್ನು ಅಳವಡಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ನಗರದ ಅಶೋಕ ವೃತ್ತ ಹಾಗೂ ಸಂಗೊಳ್ಳಿ ರಾಯಣ್ಣ ವೃತ್ತಗಳಲ್ಲಿ ಛತ್ರಪತಿ ಶಿವಾಜಿ ಮಹಾರಾಜ, ಪ್ರಧಾನಿ ನರೇಂದ್ರ ಮೋದಿ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಭಾವಚಿತ್ರವಿರುವ ಬ್ಯಾನರ್‌ಗಳನ್ನು ಅಳವಡಿಸಿ ಯುಗಾದಿ ಹಬ್ಬ ಹಾಗೂ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.
ಇದನ್ನೂ ಓದಿ: Karnataka Rains: 13 ಜಿಲ್ಲೆಯಲ್ಲಿ ಬೇಸಿಗೆ ಮಳೆ: ಸಿಡಿಲು ಬಡಿದು ಬಾಲಕ ಸಾವು!
ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ನೇತೃತ್ವದಲ್ಲಿ ಕಾರ್ಯಕರ್ತರು ಬ್ಯಾನರ್‌ಗಳನ್ನು ಅಳವಡಿಸಿದರು. ಖಮೇನಿ ಭಾವಚಿತ್ರ ಅಳವಡಿಸಿರುವುದನ್ನು ವಿರೋಧಿಸುವ ಉದ್ದೇಶದಿಂದಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಘಟನೆಯ ಕಾರ್ಯಕರ್ತರು ತಿಳಿಸಿದ್ದಾರೆ.


