ಕರ್ನಾಟಕ-ಮಹಾರಾಷ್ಟ್ರ ಗಡಿಭಾಗದಲ್ಲಿ ಹೆಸರುವಾಸಿಯಾಗಿದ್ದ ಸೋಲಾಪುರ ಮಂದ್ರೂಪ ಸ್ವಾಮೀಜಿ ವಿಧಿವಶ
ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ದಕ್ಷಿಣ ಸೋಲಾಪುರ ತಾಲೂಕಿನ ಮಂದ್ರೂಪ ಪಟ್ಟಣದ ಶ್ರೀ ರೇಣುಕಾಚಾರ್ಯ ಶಿವಾಚಾರ್ಯ ಮಹಾಸ್ವಾಮೀಜಿ(65) ಲಿಂಗೈಕ್ಯರಾಗಿದ್ದಾರೆ.
ವಿಜಯಪುರ (ಡಿ. 23) : ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ದಕ್ಷಿಣ ಸೋಲಾಪುರ ತಾಲೂಕಿನ ಮಂದ್ರೂಪ ಪಟ್ಟಣದ ಶ್ರೀ ರೇಣುಕಾಚಾರ್ಯ ಶಿವಾಚಾರ್ಯ ಮಹಾಸ್ವಾಮೀಜಿ(65) ಲಿಂಗೈಕ್ಯರಾಗಿದ್ದಾರೆ.
ಶುಕ್ರವಾರ ಬೆಳಗ್ಗೆ 10 ಗಂಟೆಗೆ ಮಂದ್ರೂಪದಲ್ಲಿ ಶ್ರೀಗಳು ಪೂಜೆಯಲ್ಲಿ ನಿರತರಾಗಿದ್ದಾಗ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಸೋಲಾಪುರದ ಅಶ್ವಿನಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಶ್ರೀಗಳು ಬೆಳಗ್ಗೆ 11ಕ್ಕೆ ಲಿಂಗೈಕ್ಯರಾಗಿದ್ದಾರೆ.
ಶನಿವಾರ ಮಧ್ಯಾಹ್ನ 3ಕ್ಕೆ ಮಂದ್ರೂಪದಲ್ಲಿರುವ ಮಠದ ಆವರಣದಲ್ಲಿ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ ಎಂದು ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ತದ್ದೇವಾಡಿ ಶ್ರೀಗಳಾದ ಶ್ರೀ ಮಹಾಂತೇಶ ಹಿರೇಮಠ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಶ್ರೀಗಳ ಅಗಲುವಿಕೆ ವೀರಶೈವ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮಠದ ಭಕ್ತರು ಕಂಬನಿ ಮಿಡಿದಿದ್ದಾರೆ.
Mangaluru: ಮರಕಡ ಪರಾಶಕ್ತಿ ಮಠದ ಶ್ರೀ ನರೇಂದ್ರನಾಥ ಸ್ವಾಮೀಜಿ ಲಿಂಗೈಕ್ಯ