ಚಿಕ್ಕಮಗಳೂರು (ಫೆ.15): ಶೃಂಗೇರಿ ತಾಲೂಕಿನಲ್ಲಿ ನಡೆದ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರಾಜು ಅಲಿಯಾಸ್‌ ಗಣೇಶ್‌, ಜಯಕುಮಾರ್‌ ಎಂಬವರನ್ನು ಬಂಧಿಸಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು 17 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯ ಮೇಲೆ ಸುಮಾರು 30 ಮಂದಿ ಅತ್ಯಾಚಾರ ನಡೆಸಿದ್ದು, ಈ ಪ್ರಕರಣ ಗಂಭೀರ ಸ್ವರೂಪದ್ದಾಗಿದೆ. ಈ ಸಂಬಂಧ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಶೃತಿ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಆರೋಪಿಗಳ ಬಂಧನ ಹಾಗೂ ವಿಚಾರಣೆಗೆ 5 ಮಂದಿ ಸಬ್‌ ಇನ್‌ಸ್ಪೆಕ್ಟರ್‌ ಹಾಗೂ ಸಿಬ್ಬಂದಿಯನ್ನೊಳಗೊಂಡ ತಂಡಗಳನ್ನು ರಚನೆ ಮಾಡಲಾಗಿದೆ.

ಶೃಂಗೇರಿ ಬಾಲಕಿ ರೇಪ್‌ ಪ್ರಕರಣ : 15 ಮಂದಿ ಅರೆಸ್ಟ್

ಈ ಪ್ರಕರಣದಲ್ಲಿ ಭಾಗಿ ಆಗಿರುವವರನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆರೋಪಿಗಳಿಗೆ ಆಶ್ರಯ ನೀಡಿರುವವರ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ. ಅಂಥವರ ಮೇಲೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.