ರಾಜ್ಯ ಸರ್ಕಾರವು ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿದ್ದನ್ನು ವಿರೋಧಿಸಿ, ಶ್ರೀರಾಮಸೇನಾ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯು ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ಹಂಚಿ ಪ್ರತಿಭಟಿಸಿತು. ಸರ್ಕಾರ ಈ ನಿರ್ಧಾರ ಹಿಂಪಡೆಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದೆ.

  • ಶಾಲೆ-ಕಾಲೇಜಲ್ಲಿ ಅವಕಾಶ ನೀಡಿದ್ದಕ್ಕೆ ಆಕ್ರೋಶ
  • ವಿದ್ಯಾರ್ಥಿಗಳಿಗೆ ಶ್ರೀರಾಮಸೇನಾಯಿಂದ ಶಾಲು

ಹುಬ್ಬಳ್ಳಿ (ಜೂ.2): ರಾಜ್ಯ ಸರ್ಕಾರ(Karnataka government) ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌(Hijab)ಗೆ ಅವಕಾಶ ನೀಡಿರುವುದನ್ನು ಖಂಡಿಸಿ ಸೋಮವಾರ ಶ್ರೀರಾಮಸೇನಾ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ(Sri Rama Sena Hindu Rashtra Coordination Committee) ನಗರದ ಕನಕದಾಸ ಶಿಕ್ಷಣ ಸಮಿತಿಯ ಕಾಲೇಜು, ಮಹಿಳಾ ವಿದ್ಯಾಪೀಠ ಸೇರಿದಂತೆ ಹಲವೆಡೆ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಂಚುವ ಮೂಲಕ ಪ್ರತಿಭಟಿಸಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಿಕ್ಷಣ ಸಂಸ್ಥೆಗಳು ಧಾರ್ಮಿಕ ಚಿಹ್ನೆಗಳಿಂದ ಮುಕ್ತವಾಗಿರಬೇಕು

ಈ ವೇಳೆ ಶ್ರೀಧರ ಕಲಬುರ್ಗಿ ಮಾತನಾಡಿ, ಶಿಕ್ಷಣ ಸಂಸ್ಥೆಗಳು ಧಾರ್ಮಿಕ ಚಿಹ್ನೆಗಳಿಂದ ಮುಕ್ತವಾಗಿರಬೇಕು ಹಾಗೂ ಎಲ್ಲ ವಿದ್ಯಾರ್ಥಿಗಳಿಗೆ ಒಂದೇ ರೀತಿಯ ನಿಯಮಗಳು ಅನ್ವಯವಾಗಬೇಕು ಎಂದು ಈ ಹಿಂದಿನ ಬಿಜೆಪಿ ಸರ್ಕಾರವು ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ಹಾಕಿಕೊಂಡು ಬರುವುದನ್ನು ಸಂಪೂರ್ಣವಾಗಿ ನಿಷೇಧಿಸಿತ್ತು. ಜತೆಗೆ ಶಾಲೆಗಳಲ್ಲಿ ಸಮವಸ್ತ್ರ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿತ್ತು. ಆದರೆ ಕಾಂಗ್ರೆಸ್‌ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿರುವುದು ಖಂಡನಾರ್ಹ.

ರಾಜ್ಯ ಸರ್ಕಾರ ನಿರ್ಧಾರ ಹಿಂಪಡೆಯದಿದ್ದರೆ ಹೋರಾಟ ತೀವ್ರ

ಇದನ್ನು ವಿರೋಧಿಸಿ ಶ್ರೀರಾಮಸೇನಾ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ರಾಜ್ಯಾದ್ಯಂತ ಎಲ್ಲ ಕೇಸರಿ ಶಾಲು ವಿತರಿಸುತ್ತಿದ್ದೇವೆ. ರಾಜ್ಯ ಸರ್ಕಾರ ಕೂಡಲೇ ಈ ನಿರ್ಧಾರ ಹಿಂಪಡೆಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಎಲ್ಲ ಶಾಲಾ- ಕಾಲೇಜುಗಳಲ್ಲಿ ಶ್ರೀರಾಮಸೇನೆಯಿಂದ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.