SSLC ಪರೀಕ್ಷೆ; ಎಲ್ಲ ವಿದ್ಯಾರ್ಥಿಗಳ ಕಾಳಜಿ ವಹಿಸಿ
ಕೋವಿಡ್-19 ಇರುವ ಹಿನ್ನೆಲೆ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವಿಶೇಷವಾಗಿ ಪರಿಗಣಿಸಲಾಗಿದೆ. ಶಿಕ್ಷಣ, ಆರೋಗ್ಯ, ಪೊಲೀಸ್ ಮತ್ತು ಸಾರಿಗೆ ಇಲಾಖೆಗಳ ಸಹಯೋಗದೊಂದಿಗೆ ಕಾರ್ಯನಿರ್ವಹಿಸಬೇಕು. ಜೂನ್ 25ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಜಿಲ್ಲೆಯಲ್ಲಿ ಯಾವುದೇ ಲೋಪದೋಷಗಳಿಲ್ಲದೆ ಯಶಸ್ವಿಯಾಗಿ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಚಿಕ್ಕಮಗಳೂರು ಜಿಲ್ಲಾಧಿಜಕಾರಿ ಸೂಚಿಸಿದರು. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಚಿಕ್ಕಮಗಳೂರು(ಜೂ.11): ಜಿಲ್ಲೆಯಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ಪರೀಕ್ಷಾರ್ಥಿ ಪರೀಕ್ಷೆಯಿಂದ ವಂಚಿತರಾಗದಂತೆ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹೇಳಿದರು.
ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋವಿಡ್-19 ಇರುವ ಹಿನ್ನೆಲೆ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವಿಶೇಷವಾಗಿ ಪರಿಗಣಿಸಲಾಗಿದೆ. ಶಿಕ್ಷಣ, ಆರೋಗ್ಯ, ಪೊಲೀಸ್ ಮತ್ತು ಸಾರಿಗೆ ಇಲಾಖೆಗಳ ಸಹಯೋಗದೊಂದಿಗೆ ಕಾರ್ಯನಿರ್ವಹಿಸಬೇಕು. ಜೂನ್ 25ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಜಿಲ್ಲೆಯಲ್ಲಿ ಯಾವುದೇ ಲೋಪದೋಷಗಳಿಲ್ಲದೆ ಯಶಸ್ವಿಯಾಗಿ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳ ಮಾಹಿತಿ ಪಡೆದು ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕು. ಮಲೆನಾಡು ಭಾಗಗಳಲ್ಲಿ ಅಗತ್ಯವಿದ್ದಲ್ಲಿ ಖಾಸಗಿ ವಾಹನಗಳನ್ನು ಬಳಸಿಕೊಂಡು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳನ್ನು ತಲುಪಿಸುವ ಕಾರ್ಯ ಮಾಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಾರಿಗೆ ವ್ಯವಸ್ಥೆಯಿಂದಾಗಿ ಪರೀಕ್ಷೆ ಬರೆಯದೇ ಯಾವುದೇ ಮಕ್ಕಳು ವಂಚಿತರಾಗದಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮಾರ್ಗದ ನಕ್ಷೆಯನ್ನು ತಯಾರಿಸಿ ಸಾರಿಗೆ ಇಲಾಖಾ ಅಧಿಕಾರಿಗಳಿಗೆ ನೀಡುವಂತೆ ತಿಳಿಸಿದರು.
ಕೊರೋನಾ ಭೀತಿ: 'SSLC ಪರೀಕ್ಷೆ ನಡೆಸದೆ ಪಾಸ್ ಮಾಡಿ'
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೃತಿ, ಸರ್ವಶಿಕ್ಷಣ ಅಭಿಯಾನದ ಸಹ ನಿರ್ದೇಶಕ ಚಂದ್ರಪ್ಪ, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಅಂತರ ಜಿಲ್ಲಾ ವೀಕ್ಷಕರಾಗಿ ಆಗಮಿಸುವ ಜಿಲ್ಲಾಮಟ್ಟದ ನೋಡಲ್ ಅಧಿಕಾರಿಗಳಾದ ಪುಟ್ಟರಾಜು, ಡಯಟ್ ಪ್ರಾಂಶುಪಾಲರಾದ ಪುಷ್ಪಲತಾ ಹಾಗೂ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.