ಮೈಸೂರು (ಮೇ.11): ದಿನದಿಂದ ದಿನಕ್ಕೆ ಕೊರೋನಾ 2ನೇ ಅಲೆಯ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಸೋಮವಾರ ಅರಮನೆ ಕೋಟೆ ಮಾರಮ್ಮನ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. 

ಮೈಸೂರು ಅರಮನೆ ಕೋಟೆಗೆ ಹೊಂದಿಕೊಂಡಂತಿರುವ ಕೋಟೆ ಮಾರಮ್ಮನ ಮೊರೆ ಹೋದರೆ ಸಾಂಕ್ರಾಮಿಕ ರೋಗ ನಿವಾರಣೆಯಾಗುತ್ತದೆ ಎಂಬ ಪ್ರತೀತಿ ಇದೆ. 

ಅಗತ್ಯಕ್ಕನುಗುಣವಾಗಿ ಜಿಲ್ಲೆಗಳಿಗೆ ಆಕ್ಸಿಜನ್ ಹಂಚಿಕೆ : ST ಸೋಮಶೇಖರ್ ..

ಈ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಶಶಿಶೇಖರ ದಿಕ್ಷೀತ್‌ ನೇತೃತ್ವದಲ್ಲಿ ಸಚಿವ ಸೋಮಶೇಖರ್‌ ವಿಶೇಷ ಪೂಜೆ ನೆರವೇರಿಸಿದರು. ಸಂಸದ ಪ್ರತಾಪ್‌ ಸಿಂಹ ಇದ್ದರು.

ಮೈಸೂರಿನಲ್ಲಿಯೂ ದಿನದಿನಕ್ಕೆ ಸೋಂಕಿತರ ಸಂಖ್ಯೆ ಏರುಗತಿಯಲ್ಲೇ ಸಾಗುತ್ತಿದ್ದು,ಸಾವಿರಾರು ಪ್ರಕರಣಗಳು  ಪತ್ತೆಯಾಗುತ್ತಿವೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona