ಬಳ್ಳಾರಿ(ಮೇ.27): ಕೊರೋನಾ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಸ್ಟಾಫ್‌ನರ್ಸ್‌ ಒಬ್ಬರಿಗೆ ಕೊರೋನಾ ಸೋಂಕು ಮಂಗಳವಾರ ದೃಢಪಟ್ಟಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. 

ಆಸ್ಪತ್ರೆಯಲ್ಲಿ 14 ದಿನಗಳ ಕಾಲ ಕಾರ್ಯ ನಿರ್ವಹಿಸಿದ್ದ ವೈದ್ಯರು, ಸ್ಟಾಫ್‌ನರ್ಸ್‌ ಸೇರಿದಂತೆ ವಿವಿಧ ಸಿಬ್ಬಂದಿಯನ್ನು 14 ದಿನ ನಗರದ ಲಾಡ್ಜ್‌ವೊಂದರಲ್ಲಿ ಕ್ವಾರಂಟೈನ್‌ ಮಾಡಲಾಗಿತ್ತು. ಮನೆಗೆ ತೆರಳುವ ಮುನ್ನ ಗಂಟಲುದ್ರವ ಪಡೆದು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿತ್ತು. ಇವರಲ್ಲಿ ಸ್ಟಾಫ್‌ನರ್ಸ್‌ವೊಬ್ಬರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. 

ಕ್ರೂರಿ ಕೊರೋನಾ ಅಟ್ಟಹಾಸಕ್ಕೆ ಮೂರು ಹೆಣ್ಣು ಮಕ್ಕಳು ಅನಾಥ..!

ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಪಿಪಿಎ ಕಿಟ್‌ ನೀಡಲಾಗಿತ್ತು. ಜೊತೆಗೆ ನರ್ಸ್‌ಗೆ ವೈರಸ್‌ ಇರುವ ಯಾವುದೇ ಲಕ್ಷಣಗಳು ಕಂಡು ಬಂದಿರಲಿಲ್ಲ. ಆದಾಗ್ಯೂ ವೈರಸ್‌ ಕಂಡು ಬಂದಿರುವುದು ಉಳಿದ ಸಿಬ್ಬಂದಿಯಲ್ಲಿ ಆತಂಕ ಸೃಷ್ಟಿಸಿದೆ. ಸೋಂಕಿತ ವ್ಯಕ್ತಿ ಜತೆ ಸಂಪರ್ಕದಲ್ಲಿದ್ದ 10 ಸಿಬ್ಬಂದಿಯನ್ನು ಕ್ವಾರಂಟೈನ್‌ ಮಾಡಲಾಗಿದೆ.