ಬೆಂಗಳೂರು(ಜು.12): ಕೊರೋನಾ ಸೋಂಕಿನಿಂದ ಮೃತಪಟ್ಟಮಹಿಳೆಯ ಮೃತದೇಹವನ್ನು ವಿಲ್ಸನ್‌ ಗಾರ್ಡನ್‌ ಚಿತಾಗಾರದ ಮುಂದಿಟ್ಟು ಆಸ್ಪತ್ರೆ ಸಿಬ್ಬಂದಿ ಪರಾರಿಯಾಗಿರುವ ಘಟನೆ ಶುಕ್ರವಾರ ನಡೆದಿದೆ.

"

ಸೋಂಕು ಪೀಡಿತ ಶಾಂತಿನಗರದ 30 ವರ್ಷದ ಮಹಿಳೆ ಚಿಕಿತ್ಸೆಗಾಗಿ ಕಂಫರ್ಟ್‌ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತ ಪಟ್ಟಿದ್ದು, ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗುವುದಾಗಿ ತಿಳಿಸಿದ ಆಸ್ಪತ್ರೆಯ ಸಿಬ್ಬಂದಿ ಮೃತದೇಹವನ್ನು ವಿಲ್ಸನ್‌ ಗಾರ್ಡನ್‌ ರುದ್ರಭೂಮಿಯ ಮುಂದಿಟ್ಟು ಪರಾರಿಯಾಗಿದ್ದಾರೆ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದಾರೆ.

ಬೆಂಗ್ಳೂರು ಪೊಲೀಸರಿಗೆ ಕೊರೋನಾ ಭೀತಿ: ಠಾಣೆಯಲ್ಲಿ ವಿಶೇಷ ಪೂಜೆ

ಬಳಿಕ ಬಿಬಿಎಂಪಿ ಸಿಬ್ಬಂದಿಯ ನೆರವಿನಿಂದ ಶನಿವಾರ ಶವಸಂಸ್ಕಾರ ಮಾಡಲಾಗಿದೆ ಎಂದು ಮೃತರ ಸಂಬಂಧಿ ಮೊಹಮ್ಮದ್‌ ಫಾರುಕ್‌ ತಿಳಿಸಿದ್ದಾರೆ. ಕೊರೋನಾ ಸೋಂಕಿತರ ಮೃತಪಟ್ಟತಕ್ಷಣ ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಿಬೇಕು ಎಂಬ ನಿಯಮವಿದೆ. ಆದರೆ, ಆಸ್ಪತ್ರೆ ಸಿಬ್ಬಂದಿ ಈ ಕಾರ್ಯಕ್ಕೆ ಮುಂದಾಗದೆ ಬೇಜವಾಬ್ದಾರಿತನದಿಂದ ನಡೆದುಕೊಂಡಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.