Asianet Suvarna News Asianet Suvarna News

ರೈತರ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ: ಟಿಬಿಜೆ

ರಾಜ್ಯ ಕಾಂಗ್ರೆಸ್ ಸರ್ಕಾರ ರೈತರ ಹಿತ ಕಾಪಾಡಲು ಅವಿರತ ಶ್ರಮಿಸುತ್ತಿದೆ. ಯಾವುದೇ ರೈತರು ಕೃಷಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಯ ಅಧಿಕಾರಿಗಳ ಬಳಿ ಚರ್ಚಿಸಿ ಉತ್ತಮ ಬೆಳೆ ಬೆಳೆದು ಆರ್ಥಿಕವಾಗಿ ಸಬಲರಾಗಿ ಎಂದು ಶಾಸಕ ಟಿ.ಬಿ. ಜಯಚಂದ್ರ ಹೇಳಿದರು.

State govt working hard to protect farmers' interests: TBJ snr
Author
First Published Dec 24, 2023, 9:07 AM IST

  ಶಿರಾ :  ರಾಜ್ಯ ಕಾಂಗ್ರೆಸ್ ಸರ್ಕಾರ ರೈತರ ಹಿತ ಕಾಪಾಡಲು ಅವಿರತ ಶ್ರಮಿಸುತ್ತಿದೆ. ಯಾವುದೇ ರೈತರು ಕೃಷಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಯ ಅಧಿಕಾರಿಗಳ ಬಳಿ ಚರ್ಚಿಸಿ ಉತ್ತಮ ಬೆಳೆ ಬೆಳೆದು ಆರ್ಥಿಕವಾಗಿ ಸಬಲರಾಗಿ ಎಂದು ಶಾಸಕ ಟಿ.ಬಿ. ಜಯಚಂದ್ರ ಹೇಳಿದರು.

ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ ಕರ್ನಾಟಕ ಆಹಾರ ಮತ್ತು ಸರಬರಾಜು ನಿಗಮ ನಿಯಮಿತ ವತಿಯಿಂದ ಹಮ್ಮಿಕೊಂಡಿದ್ದ ರಾಗಿ ಖರೀದಿ ಕೇಂದ್ರ ಮತ್ತು ನೋಂದಣಿಗೆ ಚಾಲನೆ ನೀಡಿ ಮಾತನಾಡಿದರು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸರ್ಕಾರ ರೈತರಿಂದ ನೇರವಾಗಿ ಉತ್ತಮ ಗುಣಮಟ್ಟದ ರಾಗಿಯನ್ನು ಪ್ರತಿ ಕ್ವಿಂಟಲ್‌ಗೆ ೩೮೪೬ ರು. ನಂತೆ ಎಪಿಎಂಸಿ ಆವರಣದಲ್ಲಿ ಖರೀದಿ ಮಾಡಲು ರಾಗಿ ಖರೀದಿ ಕೇಂದ್ರ ಸ್ಥಾಪಿಸಿದ್ದು, ತಾಲೂಕಿನ ರೈತರು ನೋಂದಣಿ ಮಾಡಿಸಿಕೊಂಡು, ಇದರ ಗರಿಷ್ಠ ಉಪಯೋಗ ಪಡಿಸಿಕೊಳ್ಳಿ ಎಂದರು.

ಕರ್ನಾಟಕ ಆಹಾರ ಮತ್ತು ಸರಬರಾಜು ನಿಗಮ ನಿಯಮಿತ ಜಿಲ್ಲಾ ವ್ಯವಸ್ಥಾಪಕ ವಿ.ಬಿ. ಶ್ರೀಧರ್ ಮಾತನಾಡಿ, ರೈತರು ಕೃಷಿ ಇಲಾಖೆಯಿಂದ ಪಡೆದಿರುವ ಫ್ರೂಟ್ಸ್ ಗುರುತಿನ ಚೀಟಿ, ಆಧಾರ್ ಕಾರ್ಡ್‌ನೊಂದಿಗೆ ತಮ್ಮ ಹೆಸರನ್ನು ನೊಂದಾಯಿಸಿಕೊಂಡು, ತಾವು ಬೆಳೆದಿರುವ ರಾಗಿಯನ್ನು ತಮ್ಮ ಜಮೀನಿಗೆ ಅನುಗುಣವಾಗಿ ಖರೀದಿ ಕೆಂದ್ರದಲ್ಲಿ ಕೊಂಡುಕೊಳ್ಳಲಾಗುವುದು. ರೈತರು ರಾಗಿ ಮಾರಾಟದ ಮೊತ್ತವನ್ನು ನೇರ ನಗದು ವರ್ಗಾವಣೆ ಮೂಲಕ ಪಡೆಯಬಹುದು ಎಂದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ದತ್ತಾತ್ರೇಯ ಗಾಧ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ. ಗಂಗಾಧರ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಚಿಕ್ಕಣ್ಣ, ರೈತ ಸಂಘದ ಜಿಲ್ಲಾ ಅಧ್ಯಕ್ಷ ಕೆ.ಎಸ್. ಧನಂಜಯಾರಾಧ್ಯ, ಖರೀದಿ ಕೇಂದ್ರದ ಅಧಿಕಾರಿ ಎಚ್. ಸುರೇಶ್, ನ್ಯಾಯಬೆಲೆ ಅಂಗಡಿ ಮಾಲಿಕರ ಸಂಘದ ಅಧ್ಯಕ್ಷ ವಸಂತರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ಮಂಜುನಾಥ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬರಗೂರು ನಟರಾಜು, ಸತ್ಯನಾರಾಯಣ, ದೇವರಾಜು, ಭೂತೇಶ್ ಇತರರು ಹಾಜರಿದ್ದರು. 

Follow Us:
Download App:
  • android
  • ios