Asianet Suvarna News Asianet Suvarna News

ಇಲಕಲ್ಲ: ರಾಜ್ಯ ಮಟ್ಟದ ವ್ಯಸನಮುಕ್ತ ದಿನಾಚರಣೆ, ಪಠ್ಯ ಪುಸ್ತಕದಲ್ಲಿ ಅಳವಡಿಸಲು ಕ್ರಮ, ಕಾಶಪ್ಪನವರ

ಪ್ರೌಢಶಾಲಾ ಮಟ್ಟದಲ್ಲಿಯೇ ಪಠ್ಯ ಪುಸ್ತಕದಲ್ಲಿ ಅಳವಡಿಸಿ ಮಕ್ಕಳಲ್ಲಿ ಅರಿವು ಮೂಡಿಸಿದಲ್ಲಿ ವ್ಯಸನ ಮುಕ್ತ ದೇಶವನ್ನಾಗಿಸಲು ಸಾಧ್ಯವೆಂದ ಶಾಸಕ ಕಾಶಪ್ಪನವರ, ವ್ಯಸನಗಳಿಂದಾಗುವ ದುಷ್ಪರಿಣಾಮಗಳ ಕುರಿತು ಪಠ್ಯದಲ್ಲಿ ಕಡ್ಡಾಯವಾಗಿ ಅಳವಡಿಸುವ ಕುರಿತಂತೆ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರ ಜೊತೆ ಚರ್ಚೆ ಮಾಡಿ ಪಠ್ಯ ಪುಸ್ತಕದಲ್ಲಿ ಸೇರಿಸಲು ಮನವಿ ಮಾಡಲಾಗುವುದು ಎಂದರು. 

State Level Addiction Free Day Held at Ilkal in Bagalkot grg
Author
First Published Aug 1, 2023, 9:05 PM IST

ವರದಿ: ಮಲ್ಲಿಕಾರ್ಜುನ ಹೊಸಮನಿ, ಏಷಿಯಾನೆಟ್ ಸುವರ್ಣ ನ್ಯೂಸ್, ಬಾಗಲಕೋಟೆ

ಬಾಗಲಕೋಟೆ(ಆ.01): ಇಲಕಲ್ಲ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ಆಚರಿಸಲ್ಪಡುವ ವ್ಯಸನಮುಕ್ತ ದಿನಾಚರಣೆ ಕುರಿತು ಶಾಲಾ ಕಾಲೇಜುಗಳ ಪಠ್ಯಪುಸ್ತಕದಲ್ಲಿ ಒಂದು ವಿಷಯವಾಗಿ ಅಳವಡಿಸಲು ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಇಲಕಲ್ಲ ವಿಜಯ ಮಹಾಂತೇಶ ಅನುಭವ ಮಂಟಪದಲ್ಲಿ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ, ಯುವಬಲ ಜಾಗೃತಿ ಪರಿಷತ್ ಸಹಯೋಗದಲ್ಲಿ ಹಮ್ಮಿಕೊಂಡ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ಯುವ ಪೀಳಿಗೆ ದುಶ್ಚಟಗಳಿಗೆ ಬಲಿಯಾಗುತ್ತಿದ್ದು, ಆ ದುಶ್ಚಟಗಳಿಂದ ಮುಕ್ತರನ್ನಾಗಿ ಮಾಡುವ ನಿಟ್ಟಿನಲ್ಲಿ ವಿಜಯ ಮಹಾಂತ ಶಿವಯೋಗಿಗಳ ಕಾರ್ಯ ಮಹತ್ವವಾಗಿದೆ ಎಂದರು.

ಬಾಗಲಕೋಟೆ: ಸ್ಮಶಾನದ ಜಾಗಕ್ಕೆ ಬೀದಿಗಿಳಿದ ಗ್ರಾಮಸ್ಥರು..!

ಸಿಎಂ, ಶಿಕ್ಷಣ ಸಚಿವರ ಜೊತೆ ಚರ್ಚೆ ಮಾಡಿ ದಿನಾಚರಣೆ ಕುರಿತು ಪಠ್ಯ ಪುಸ್ತಕದಲ್ಲಿ ಸೇರಿಸಲು ಮನವಿ

ಪ್ರೌಢಶಾಲಾ ಮಟ್ಟದಲ್ಲಿಯೇ ಪಠ್ಯ ಪುಸ್ತಕದಲ್ಲಿ ಅಳವಡಿಸಿ ಮಕ್ಕಳಲ್ಲಿ ಅರಿವು ಮೂಡಿಸಿದಲ್ಲಿ ವ್ಯಸನ ಮುಕ್ತ ದೇಶವನ್ನಾಗಿಸಲು ಸಾಧ್ಯವೆಂದ ಶಾಸಕ ಕಾಶಪ್ಪನವರ, ವ್ಯಸನಗಳಿಂದಾಗುವ ದುಷ್ಪರಿಣಾಮಗಳ ಕುರಿತು ಪಠ್ಯದಲ್ಲಿ ಕಡ್ಡಾಯವಾಗಿ ಅಳವಡಿಸುವ ಕುರಿತಂತೆ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರ ಜೊತೆ ಚರ್ಚೆ ಮಾಡಿ ಪಠ್ಯ ಪುಸ್ತಕದಲ್ಲಿ ಸೇರಿಸಲು ಮನವಿ ಮಾಡಲಾಗುವುದು ಎಂದರು. 

ಮಹಾಪುರುಷರು, ಮಹಾತಪಸ್ವಿಗಳು ಒಂದಲ್ಲ ಒಂದು ರೀತಿಯಲ್ಲಿ ಸಮಾಜ ಸುಧಾರಣೆ ಕಾರ್ಯದಲ್ಲಿ ತೊಡಗಿದ್ದರು. ಮಹಾಂತ ಶ್ರೀಗಳ ಜನರಲ್ಲಿರು ದುಶ್ಚಟಗಳನ್ನು ಬಿಡಿಸಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಮಹಾಂತ ಶ್ರೀಗಳ ಜನ್ಮ ದಿನಾಚರಣೆ ದಿನವಾದ ಆಗಸ್ಟ್‌ 1 ರಂದು ರಾಜ್ಯ, ಜಿಲ್ಲಾ, ತಾಲೂಕಾ ಮಟ್ಟದಲ್ಲಿ ವ್ಯಸನಮುಕ್ತ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.

ಇಲಕಲ್ ಶ್ರೀಗಳು ಮದ್ಯ ವ್ಯಸನಿಗಳಿಗೆ ಚಿಕಿತ್ಸೆ ರೂಪದಲ್ಲಿ ಮನ ಪರಿರ್ತನೆ ಮಾಡುತ್ತಿದ್ದ ಶ್ರೇಷ್ಠ ಸಂತರು

ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಮಾತನಾಡಿ ಸಮಾಜಕ್ಕೆ ಶ್ರೀಗಳು ಆದರ್ಶ ಪ್ರಾಯರಾಗಿದ್ದಾರೆ. ಸಮಾಜ ಸುಧಾರಣೆಗೆ ತಮ್ಮದೇಯಾದ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಮಾಜದಲ್ಲಿರುವ ಜನ ವಿವಿಧ ವ್ಯಸನಗಳಿಗೆ ಅಂಟಿಕೊಂಟು ತಮ್ಮ ಜೀವನವನ್ನೇ ಹಾಳುಮಾಡಿಕೊಳ್ಳುತ್ತಿದ್ದಾರೆ. ಅವರನ್ನು ಉತ್ತಮ ಜೀವನದತ್ತ ಕೊಂಡೊಯ್ಯುವ ಕಾರ್ಯವಗಬೇಕು. ದುಶ್ಚಟಗಳಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕು. ಶ್ರೀಗಳು ಮದ್ಯ ವ್ಯಸನಿಗಳಿಗೆ ಚಿಕಿತ್ಸೆ ರೂಪದಲ್ಲಿ ಮನ ಪರಿರ್ತನೆ ಮಾಡುತ್ತಿದ್ದಾರೆ. ಈ ಕಾರ್ಯ ಶಾಲಾ ಹಂತದಲ್ಲಿ ಈ ಕಾರ್ಯ ನಡೆದಲ್ಲಿ ವ್ಯಸನಮುಕ್ತ ಸಮಾಜ ನಿರ್ಮಿಸಲು ಸಾಧ್ಯವೆಂದರು.

ಸಮಾಜದಲ್ಲಿನ ದುಶ್ಚಟ ಬಿಡಿಸಲು ಜೋಳಿಗೆ ಹಿಡಿದಿದ್ದ ಇಲಕಲ್ ಶ್ರೀಗಳು

ಜನಪದ ಸಾಹಿತಿ ಶಂಭು ಬಳೇಗಾರ ಅವರು ತಮ್ಮ ಆಶಯ ನುಡಿಗಳಲ್ಲಿ ಸಮಾಜ ಸುಧಾರಣೆಗೆ ಧರ್ಮ ಪ್ರಸಾರ, ಲೋಕ ಸಂಚಾರ, ಅನ್ನ ಸಂತರ್ಪಣೆ ಯಂತಹ ಕಾರ್ಯಗಳಲ್ಲಿ ಮಹಾಂತ ಶ್ರೀಗಳು ಜನರಲ್ಲಿರುವ ದುಶ್ಚಟಗಳನ್ನು ಬಿಡಿಸಲು ಜೋಳಿಗೆ ಹಿಡಿದುಕೊಂಡಿದ್ದಾರೆ. ಜೋಳಿಗೆ ಹಿಡಿದು ಊರ ಊರ ತಿರುಗಿ ನಿಮ್ಮಲ್ಲಿರುವ ದುಶ್ಚಟಗಳನ್ನು ಜೋಳಿಗೆಯಲ್ಲಿ ಹಾಕಿಸಿಕೊಳ್ಳುವ ಮೂಲಕ ಅವರನ್ನು ವ್ಯಸನಮುಕ್ತರನ್ನಾಗಿ ಮಾಡುವ ಸಂಕಲ್ಪ ಮಾಡಿದ್ದಾರೆ ಎಂದರು.

ಆ.5ರಂದು ಗೃಹಜ್ಯೋತಿ ಯೋಜನೆಗೆ ಚಾಲನೆ: ಸಚಿವ ತಿಮ್ಮಾಪೂರ

ಗದಗ ಜಿಲ್ಲೆ ಡಂಬಳ ತೋಂಟದಾರ್ಯ ಸಂಸ್ಥಾನಮಠದ ತೋಂಟದ ಸಿದ್ದರಾಮ ಶ್ರೀ, ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಶ್ರೀ, ಇಲಕಲ್ಲ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ಗುರು ಮಹಾಂತ ಶ್ರೀಗಳು ಆಶೀರ್ವಚನ ನೀಡಿದರು. ಪ್ರಾರಂಭದಲ್ಲಿ ಮಾವು ಅಭಿವೃದ್ದಿ ಮಂಡಳಿಯ ಮಾಜಿ ನಿರ್ದೇಶಕ ಜಿ.ಎಸ್.ಗೌಡರ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. 

ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಾಧೀಶ ಎನ್.ಶರಣಪ್ಪ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಶೀಲ್ದಾರ ಬಸಲಿಂಗಪ್ಪ ನೈಕೋಡಿ, ಇಲಕಲ್ಲ ನಗರಸಭೆ ಪೌರಾಯುಕ್ತ ರಾಜು ಬಣಕಾರ, ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಚೇರಮನ್ ಎಂ.ವಿ.ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು. ಕೊನೆಯಲ್ಲಿ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿ ಎಸ್.ಶಂಕರಪ್ಪ ವಂದಿಸಿದರು. 

Follow Us:
Download App:
  • android
  • ios