Asianet Suvarna News Asianet Suvarna News

ವಿಜಯಪುರದಲ್ಲಿ ಫೆ.4ರಿಂದ ಪತ್ರಕರ್ತರ ರಾಜ್ಯ ಮಟ್ಟದ ಮಹಾ ಸಮ್ಮೇಳನ, ಮುಖ್ಯಮಂತ್ರಿಯಿಂದ ಚಾಲನೆ

ಗುಮ್ಮಟನಗರಿ ವಿಜಯಪುರ ಜಿಲ್ಲೆಯಲ್ಲಿ ಇದೆ ಮೊದಲ ಬಾರಿಗೆ 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ನಡೆಯುತ್ತಿದೆ. ಫೆ.4 ಮತ್ತು 5 ರಂದು ವಿಜಯಪುರದ ಶ್ರೀ ಕಂದಗಲ್ ಹಣಮಂತರಾಯ ರಂಗ ಮಂದಿರದಲ್ಲಿ ಅದ್ದೂರಿ ಸಮ್ಮೇಳನ ನಡೆಯಲಿದೆ.

State level Journalists Conference at Vijayapura on Feb 4th and 5th gow
Author
First Published Feb 3, 2023, 6:25 PM IST

ವರದಿ: ಷಡಕ್ಷರಿ‌ ಕಂಪೂನವರ್ ಏಷ್ಯಾನೆಟ್ ಸುವರ್ಣ ನ್ಯೂಸ್

ವಿಜಯಪುರ (ಫೆ.03) : ಗುಮ್ಮಟನಗರಿ ವಿಜಯಪುರ ಜಿಲ್ಲೆಯಲ್ಲಿ ಇದೆ ಮೊದಲ ಬಾರಿಗೆ 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ನಡೆಯುತ್ತಿದೆ. ಫೆ.4 ಮತ್ತು 5 ರಂದು ವಿಜಯಪುರದ ಶ್ರೀ ಕಂದಗಲ್ ಹಣಮಂತರಾಯ ರಂಗ ಮಂದಿರದಲ್ಲಿ ಅದ್ದೂರಿ ಸಮ್ಮೇಳನ ನಡೆಯಲಿದೆ. ಕಳೆದ ತಿಂಗಳು ಸಮ್ಮೇಳನ ನಡೆಯಬೇಕಿತ್ತು, ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳ ನಿಧನದಿಂದಾಗಿ ಮುಂದೂಡಲ್ಪಟ್ಟಿತ್ತು. ಎರಡು ದಿನಗಳ ಕಾಲ ರಾಜ್ಯದ ಮೂಲೆ ಮೂಲೆಯಿಂದ ಬರುವ ಪತ್ರಕರ್ತರು ಮೇಳಾವ್‌ ನಲ್ಲಿ ಭಾಗಿಯಾಗಲಿದ್ದಾರೆ.

ಪತ್ರಕರ್ತರ ಸಮ್ಮೇಳನ ಉದ್ಘಾಟಿಸಲಿರುವ ಸಿಎಂ 
ನಾಳೆ ಸರಿಯಾಗಿ 01.00 ಗಂಟೆಗೆ ಸಿಎಂ ಹೆಲಿಕಾಪ್ಟರ್‌ ಮೂಲಕ ಸೈನಿಕ ಸ್ಕೂಲ್‌ ಹೆಲಿಪ್ಯಾಡ್‌ ಬಂದಿಳಿಯಲಿದ್ದಾರೆ. ಬಳಿಕ ಕಾರ್‌ ಮೂಲಕ ನಗರದ ಹೃದಯಭಾಗದಲ್ಲಿರುವ ಕಂದಗಲ್‌ ರಂಗಮಂದಿರಕ್ಕೆ ಆಗಮಿಸಿ ಪತ್ರಕರ್ತರ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ 2.30ಕ್ಕೆ ಹೆಲಿಕಾಪ್ಟರ್‌ ಮೂಲಕ ವಾಪಸ್‌ ತೆರಳಿದ್ದಾರೆ.

ಸಮ್ಮೇಳನ ಉದ್ಘಾಟನೆಗು ಮೊದಲು ನಗರದಲ್ಲಿ ಮೆರವಣಿಗೆ 
ಸಮ್ಮೇಳನ ಉದ್ಘಾಟನೆಗು ಮೊದಲು ಬೆಳಿಗ್ಗೆ 10.00 ಗಂಟೆ ಸುಮಾರಿಗೆ ಬೃಹತ್‌ ಮೆರವಣಿಗೆ ನಡೆಯಲಿದೆ. ಸಮ್ಮೇಳನದ ಅಧ್ಯಕರು ಸೇರಿ ಸ್ಥಳೀಯ ಜನಪ್ರತಿನಿಧಿಗಳು, ಹಿರಿಯ ಪತ್ರಿಕೋಧ್ಯಮಿಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಜಯಪುರ ನಗರದ ಗಾಂಧಿ ವೃತ್ತದಿಂದ ಮೆರವಣಿಗೆ ಹೊರಟು ಕಂದಗಲ್‌ ಹನುಮಂತರಾಯ ರಂಗಮಂದಿರ ಪ್ರವೇಶಿಸಲಿದೆ. ಬಳಿಕ ವೇದಿಕೆಗೆ ಆಗಮಿಸುವ ಸಿಎಂ ಬಸವರಾಜ್‌ ಬೊಮ್ಮಾಯಿ ಸಮ್ಮೇಳನ ಉದ್ಘಾಟಿಸಿ, ಮಾತನಾಡಲಿದ್ದಾರೆ.

ವ್ಯಂಗ್ಯಚಿತ್ರ, ಛಾಯಾಚಿತ್ರ, ವಸ್ತು ಪ್ರದರ್ಶನ 
ಪತ್ರಕರ್ತರ ಸಮ್ಮೇಳನದಲ್ಲಿ ವ್ಯಂಗ್ಯಚಿತ್ರ ಪ್ರದರ್ಶನ, ಛಾಯಾಚಿತ್ರ ಪ್ರದರ್ಶನ, ವಸ್ತುಪ್ರದರ್ಶನ ನಡೆಯಲಿದೆ. ವ್ಯಂಗ್ಯಚಿತ್ರ ಪ್ರದರ್ಶನವನ್ನ ಬೃಹತ್‌ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಉದ್ಘಾಟಿಸಲಿದ್ದಾರೆ. ಸಚಿವ ಗೋವಿಂದ ಕಾರಜೋಳ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಛಾಯಾಚಿತ್ರ ಪ್ರದರ್ಶನವನ್ನ ಸಚಿವ ಸಿಸಿ ಪಾಟೀಲ್‌ ನೆರವೇರಿಸಲಿದ್ದಾರೆ. ನಗರ ಶಾಸಕ ಬಸನಗೌಡ ಪಾಟೀಲ್‌ ವಸ್ತುಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.

ಸಮ್ಮೇಳನದಲ್ಲಿ ಗೋಷ್ಠಿಗಳ ಸಂಗಮ 
ಇನ್ನು ಸಮ್ಮೇಳನದ ಪ್ರಮುಖ ಆಕರ್ಷಣೆ ಎಂದರೆ ಗೋಷ್ಠಿಗಳು ನಾಳೆ ದಿನಾಂಕ 4 ರಂದು ಮಧ್ಯಾಹ್ನ 03.00 ಗಂಟೆಗೆ ನವ ಮಾಧ್ಯಮಗಳು ಹಾಗೂ ಪತ್ರಕರ್ತರು ವಿಷಯದ ಮೇಲೆ ಗೋಷ್ಠಿ ನಡೆಯಲಿದೆ. ಕನ್ನಡಪ್ರಭ ಹಾಗೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕರಾದ ರವಿ ಹೆಗಡೆಯವರು ಗೋಷ್ಠಿಯ ಅಧ್ಯಕ್ಷತೆವಹಿಸಿ ಮಾತನಾಡಲಿದ್ದಾರೆ. ಹಿರಿಯ ಪತ್ರಕರ್ತರಾದ ಅನಂತ ಚಿನಿವಾರ್‌ ಗೋಷ್ಠಿಯನ್ನ ಉದ್ದೇಶಿಸಿ ಮಾತನಾಡಲಿದ್ದಾರೆ. ಹಿರಿಯ ಪತ್ರಕರ್ತರಾದ ಜಿ ಎಂ ಕುಮಾರ್‌, ಕೆ ದೀಪಕ್‌ ಮೈಸೂರು ಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 05.00 ಗಂಟೆಗೆ ಗಡಿ ಭಾಗದಲ್ಲಿ ಮಾಧ್ಯಮ ವಿಷಯಕ್ಕೆ ಸಂಬಂಧಿಸಿದಂತೆ ಗೋಷ್ಠಿ ನಡೆಯಲಿದ್ದು, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಡಾ. ಸಿ ಸೋಮಶೇಖರ್‌ ಗೋಷ್ಠಿ ಉದ್ಘಾಟಿಸಲಿದ್ದಾರೆ. ದಿನಾಂಕ ೫ ಬೆಳಿಗ್ಗೆ 10.00 ಗಂಟೆಗೆ ಸುದ್ದಿಮನೆ ಮತ್ತು ಪತ್ರಿಕಾ ವಿತರಕರು ವಿಷಯದ ಗೋಷ್ಠಿ ಹಾಗೂ ಸುದ್ದಿ ಮನೆ ಹಾಗೂ ಮಹಿಳೆಯರು ವಿಷಯಕ್ಕೆ ಸಂಬಂಧಿಸಿದಂತೆ ಗೋಷ್ಠಿಗಳು ನಡೆಯಲಿವೆ.

 

ಪತ್ರಕರ್ತರ ಆರೋಗ್ಯಕ್ಕಾಗಿ 50 ಲಕ್ಷ ಮೀಸಲು

ಸಮಾರೋಪ ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ 
ದಿನಾಂಕ 5 ರಂದು ಮಧ್ಯಾಹ್ನ 1.45 ಕ್ಕೆ ಜ್ಞಾನಯೋಗಾಶ್ರಮದ ಸಿದ್ದಲಿಂಗ ಸ್ವಾಮೀಜಿಗಳ ನೇತೃತ್ವದಲ್ಲಿ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಲಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಕಾನೂನು ಸಚಿವ ಜೆ ಸಿ ಮಧುಸ್ವಾಮಿ ಸೇರಿದಂತೆ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆ. ಸಚಿವ ಜೆ.ಸಿ.ಮಾಧುಸ್ವಾಮಿ ಸಮಾರೋಪ ಭಾಷಣ ಮಾಡಲಿದ್ದು, ಇದೇ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿವಿಧ ಪ್ರಶಸ್ತಿಗಳನ್ನು ಪ್ರಧಾನ ಮಾಡಲಿದ್ದಾರೆ. ಸಚಿವರಾದ ಆರ್.ಅಶೋಕ್, ಶಶಿಕಲಾ ಜೊಲ್ಲೆ, ಡಾ.ಕೆ.ಸುಧಾಕರ, ಮಾಜಿ ಸಚಿವರುಗಳಾದ ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭಾಗವಹಿಸುವರು.ಶಾಸಕರುಗಳಾದ ಯಶವಂತ್ರಾಯಗೌಡ ಪಾಟೀಲ, ಸುನೀಲಗೌಡ ಪಾಟೀಲ, ಪ್ರಕಾಶ ರಾಠೋಡ, ಪ್ರಕಾಶ ಹುಕ್ಕೆರಿ, ಮಾಜಿ ಶಾಕರುಗಳಾದ ರಾಜು ಆಲಗೂರ, ಡಾ| ಮಕ್ಬುಲ್ ಬಾಗವಾನ, ವಿಠ್ಠಲ ಕಟಕದೊಂಡ, ಮುಖಂಡುಗಳಾದ ಅಬ್ದುಲ್ ಹಮೀದ್ ಮುಶ್ರೀಫ್  ಹಾಗೂ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾದ ಅಮರೇಶ ದೊಡಮನಿ ಅವರು ಭಾಗವಹಿಸಲಿದ್ದಾರೆ.

ಕರ್ನಾಟಕ ಪತ್ರಕರ್ತೆಯರ ಸಂಘಕ್ಕೆ ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ

ಸಮ್ಮೇಳನಕ್ಕೆ ಆಗಮಿಸುವ ಪ್ರತಿನಿಧಿಗಳಿಗೆ ನೋಂದಣಿ 
ಸಮ್ಮೇಳನಕ್ಕೆ ಆಗಮಿಸುವ ಪ್ರತಿನಿಧಿಗಳಿಗೆ ಸಮ್ಮೇಳನದ ಹತ್ತಿರದ ಸ್ಥಳದಲ್ಲಿಯೇ ನೋಂದಣಿ ಮಾಡಲಾಗುವದು, ಅಲ್ಲಿ ೩ಜಿಲ್ಲೆಗೆ ಒಂದರಂತೆ 10 ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ. ಪ್ರಶಸ್ತಿಪುರಸ್ಕೃತರಿಗೆ ಸೇರಿ ಹೊರಗಿನ ಎಲ್ಲ ಪ್ರತಿನಿಧಿಗಳಿಗೆ ಸೂಕ್ತ ವಸತಿ ವ್ಯವಸ್ಥೆ ಮಾಡಲಾಗಿದೆ. 5ರಂದು ಪ್ರತಿನಿಧಿಗಳಿಗೆ ಜಿಲ್ಲಾ ಪ್ರವಾಸವನ್ನು ಕೂಡಾ ಕೈಕೊಳ್ಳಲಾಗಿದೆ.

Follow Us:
Download App:
  • android
  • ios