ಅಜಾನ್ ಕುರಿತು ವಿವಾದಾತ್ಮಕ ಹೇಳಿಕೆ : ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ SDPI ಪ್ರತಿಭಟನೆ
ಮಾಜಿ ಸಚಿವ ಹಾಗೂ ಶಾಸಕ ಕೆ.ಎಸ್. ಈಶ್ವರಪ್ಪ(KS Eshwarappa) ಅಲ್ಲಾಹು ಕುರಿತು ಹಾಗೂ ಅಜಾನ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಹಾಗೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗ (ಮಾ.16) : ಮಾಜಿ ಸಚಿವ ಹಾಗೂ ಶಾಸಕ ಕೆ.ಎಸ್. ಈಶ್ವರಪ್ಪ(KS Eshwarappa) ಅಲ್ಲಾಹು ಕುರಿತು ಹಾಗೂ ಅಜಾನ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಹಾಗೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಶಾಸಕ ಕೆ.ಎಸ್. ಈಶ್ವರಪ್ಪ ಅವರು ಮುಸ್ಲಿಮರ ಕುರಿತಾಗಿ ಪದೇ ಪದೇ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕರು ಈ ರೀತಿ ಹೇಳಿಕೆ ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಶಾಸಕರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಸಮಾಜದಲ್ಲಿ ಧಕ್ಕೆ ತರುವ ರೀತಿಯಲ್ಲಿ ಹೇಳಿಕೆ ನೀಡುತ್ತಿರುವ ಶಾಸಕ ಕೆ.ಎಸ್. ಈಶ್ವರಪ್ಪ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಅಜಾನ್ ಸದ್ದು ಕೇಳುತ್ತಲೇ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಾಡು ಹೇಳೋದನ್ನ ನಿಲ್ಲಿಸಿದ ಶೆಹನಾಜ್!
ಅವರ ಈ ರೀತಿಯ ಹೇಳಿಕೆಯಿಂದ ಮುಸ್ಲಿಂ ಸಮುದಾಯ(Muslim community)ದವರ ಭಾವನೆಗೆ ನೋವುಂಟಾಗಿದೆ. ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಶಾಸಕ ಈಶ್ವರಪ್ಪ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಇಮ್ರಾನ್, ರಾಜ್ಯ ಸಮಿತಿ ಸದಸ್ಯರಾದ ಸಲೀಂ ಖಾನ್, ಜಿಲ್ಲಾ ಕಾರ್ಯದರ್ಶಿ ಕಲೀಂ, ಜಿಲ್ಲಾ ಸಮಿತಿ ಸದಸ್ಯರಾದ ಫೈರೋಜ್, ಜೀಲಾನ್, ಇಸಾಕ್, ರಹಿಂ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
'ಲೌಡ್ ಸ್ಪೀಕರ್ ಅಜಾನ್' ವಿರುದ್ಧ 2ನೇ ಹಂತದ ಹೋರಾಟಕ್ಕೆ ಸಿದ್ಧತೆ
ಕೆ.ಎಸ್.ಈಶ್ವರಪ್ಪ ಗಡಿಪಾರಿಗೆ ಆಗ್ರಹಿಸಿ ಎಸ್‌ಡಿಪಿಐ ಪ್ರತಿಭಟನೆ
ರಾಯಚೂರು: ಇಸ್ಲಾಂ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಎಸ್‌ಡಿಪಿಐ ಜಿಲ್ಲಾ ಸಮಿತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಸ್ಥಳೀಯ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸಮಿತಿ ಪದಾಧಿಕಾರಿಗಳು, ಸದಸ್ಯರು, ಮುಖಂಡರು ಈಶ್ವರಪ್ಪ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಡಿಸಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಸರ್ಕಾರದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಿದ್ದ ಕೆ.ಎಸ್.ಈಶ್ವರಪ್ಪ ಮುಸ್ಲಿಂ ಧರ್ಮ ಹಾಗೂ ಅವರ ಆಚಾರ, ವಿಚಾರಗಳ ಕುರಿತು ಪದೇ ಪದೇ ನಾಲಿಗೆ ಹರಿಬಿಡುತ್ತಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಅಶಾಂತಿ, ಕೋಮು ಗಲಭೆಯ ವಾತಾವರಣ ನಿರ್ಮಾಣಕ್ಕೆ ಇವರು ಕಾರಣೀಭೂತರಾಗುತ್ತಿದ್ದಾರೆ. ಇಂತಹ ವ್ಯಕ್ತಿಯು ಹಲವಾರು ತಪ್ಪುಗಳನ್ನು ಮಾಡುತ್ತಿದ್ದರು ಸಹ ರಾಜ್ಯ ಸರ್ಕಾರ ಹಾಗೂ ಬಿಜೆಪಿ ಹೈಕಮಾಂಡ್ ಅವರ ವಿರುದ್ಧ ಯಾವುದೇ ರೀತಿಯ ಕ್ರಮ ಜರುಗಿಸದೆ ಮೃದು ಧೋರಣೆ ಅನುಸರಿಸುತ್ತಿರುವುದು ಖಂಡನೀಯ ವಿಷಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಮಿತಿ ಮುಖಂಡರಾದ ಗೌಸ ಮೋಹಿದ್ದಿನ್, ಸೈಯದ್ ಇಶಾಫ್ ಹುಸೇನ್, ಜಲಾಲ್ ಪಾಷಾ, ಸೈಯದ್ ಇರ್ಫಾನ್ ಸೇರಿ ಅನೇಕರಿದ್ದರು.