ಬೆಳಗಾವಿ(ಆ.28): ತಾಲೂಕಿನ ಪೀರನವಾಡಿ ಗ್ರಾಮದ ವಿವಾದಿತ ಸ್ಥಳದಲ್ಲಿಯೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಇಂದು(ಶುಕ್ರವಾರ) ಬೆಳಗಿನ ಜಾವ ಅಭಿಮಾನಿಗಳು ಪ್ರತಿಷ್ಠಾಪನೆ ಮಾಡಿ ಸಂಭ್ರಮಾಚರಣೆ ಮಾಡಿದ್ದಾರೆ. ರಾಯಣ್ಣನ ಮೂರ್ತಿಗೆ ದೊಡ್ಡ ಹೂಮಾಲೆ ಹಾಕಿ, ಕ್ರಾಂತಿವೀರ, ಶೂರ, ಧೀರ ಸಂಗೊಳ್ಳಿ ರಾಯಣ್ಣನ ಪರ ಘೋಷಣೆಗಳನ್ನು ಕೂಗಿ ವಿಜಯೋತ್ಸವ ಆಚರಿಸಿದ್ದಾರೆ.

"

ಪೀರನವಾಡಿ ಗ್ರಾಮದ ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಪ್ರತಿಷ್ಠಾಪನೆ ಮಾಡಬೇಕು ಎಂದು ಆಗ್ರಹಿಸಿ ರಾಯಣ್ಣನ ಅಭಿಮಾನಿಗಳು, ನಾನಾ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ನಿನ್ನೆ(ಗುರುವಾರ) ಸುವರ್ಣವಿಧಾನಸೌಧದ ಎದುರು ರಾಷ್ಟ್ರೀಯ ಹೆದ್ದಾರಿ 4ರ ಮೇಲೆ ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು, ಬೀದರ್‌, ಕೊಪ್ಪಳ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಕಾರ್ಯಕರ್ತರು ಆಗಮಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

ಬೆಳಗಾವಿ: ನಿಲ್ಲದ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಾರ್

ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ವಿವಾದವನ್ನ ಸರಿಪಡಿಸಿ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಗೆ ಸೂಚನೆ ನೀಡಿದ್ದರು. ಸಿಎಂ ಸೂಚನೆಗೆ ಎಚ್ಚೆತ್ತ ರಮೇಶ ಜಾರಕಿಹೊಳಿ ಅವರು ರಾಯಣ್ಣ ಪ್ರತಿಮೆ ವಿವಾದವನ್ನ ಶೀಘ್ರದಲ್ಲಿ ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದ್ದಾರೆ.