Asianet Suvarna News Asianet Suvarna News

ಆಕ್ಸಿಜನೇಟೆಡ್ ಬೆಡ್ ಗಳ ಸಂಖ್ಯೆ ಏರಿಸಲು ಕ್ರಮ : ಎಸ್.ಟಿ.ಸೋಮಶೇಖರ್

  • ಮೈಸೂರಿನಲ್ಲಿ ಏರಿಕೆಯಾಗುತ್ತಿರುವ ಕೋವಿಡ್ ಪ್ರಕರಣಗಳು
  • ಆಕ್ಸಿಜನೇಟೆಡ್ ಬೆಡ್ ಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸುವತ್ತ ಯೋಜನೆ 
  • ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್
Steps to increase  number of oxygenated beds in mysuru Says Minuster ST Somashekhar snr
Author
Bengaluru, First Published May 11, 2021, 3:40 PM IST

ಮೈಸೂರು (ಮೇ.11):   ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ  ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಕ್ಸಿಜನೇಟೆಡ್ ಬೆಡ್ ಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿಸುವತ್ತ ಯೋಜನೆ ರೂಪಿಸಲಾಗುತ್ತಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. 

ಹೆಚ್.ಡಿ.ಕೋಟೆ ತಾಲೂಕಿನ ಅಂಬೇಡ್ಕರ್ ಭವನದಲ್ಲಿಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್   ಖಾಸಗಿ ಆಸ್ಪತ್ರೆಗಳು ಶೇ.50 ರಷ್ಟು ಬೆಡ್ ಗಳನ್ನು ನೀಡಬೇಕು ಎಂದು ಈಗಾಗಲೇ ತಿಳಿಸಲಾಗಿದೆ. ಇದಕ್ಕಾಗಿ ನಿನ್ನೆ (ಮೇ.10) ಸುತ್ತೂರು ಸ್ವಾಮೀಜಿಗಳೊಂದಿಗೆ  ಸಭೆ ನಡೆಸಲಾಗಿದ್ದು, ಅವರು ಸಹ 300 ಆಕ್ಸಿಜನೇಟೆಡ್ ಬೆಡ್ ಗಳನ್ನು ನೀಡಲು ಒಪ್ಪಿಗೆ  ನೀಡಿದ್ದಾರೆ ಎಂದರು.

ಉಲ್ಬಣವಾಗುತ್ತಿದೆ ಮಹಾಮಾರಿ : ಮೈಸೂರು ಮಾರಮ್ಮಗೆ ಸಚಿವರ ಪೂಜೆ ..

ಕೋವಿಡ್ 2ನೇ ಅಲೆಯು ಹೆಚ್ಚು ಅಪಾಯಕಾರಿಯಾಗಿದ್ದು, ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆ ಸಾವುನೋವು ಹೆಚ್ಚಾಗುತ್ತಿದೆ. ಇದಕ್ಕಾಗಿ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಎಚ್.ಡಿ‌.ಕೋಟೆ ತಾಲೂಕಿನ ಪಿಡಿಒಗಳ ಮೇಲೆ ಸಾಕಷ್ಟು ದೂರು ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ದೂರುಗಳು ಬಾರದಂತೆ ಕಾರ್ಯನಿರ್ವಹಿಸಬೇಕು ಎಂದು ಎಚ್ಚರಿಕೆ ನೀಡಿದರು. 

ಎಚ್.ಡಿ. ಕೋಟೆ ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ಇಲ್ಲಿನ ಆಸ್ಪತ್ರೆಗಳಲ್ಲಿ ನುರಿತ ಫಿಜಿಷಿಯನ್ಸ್ ಇಲ್ಲ. ಈ ಬಗ್ಗೆ ಕೆ.ಡಿ.ಪಿ ಸಭೆಯಲ್ಲೂ ಪ್ರಸ್ತಾಪಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, ಅವುಗಳಲ್ಲಿ ವೈದ್ಯರನ್ನು ನೇಮಿಸಿಲ್ಲ ಎಂದರು.

'ಕೊನೆ ಕ್ಷಣದಲ್ಲಿ ಆಕ್ಸಿಜನ್ ಕೇಳಿದರೆ ನಾವೇನು ಮಾಡೋಕಾಗುತ್ತೆ?'

 ಪ್ರಸ್ತುತ 3 ಆಂಬ್ಯುಲೆನ್ಸ್ ಇದ್ದು, ಅವು ದುರಸ್ಥಿಯಾಗಬೇಕಿದೆ. ಕೇವಲ ಒಂದು ಆಂಬ್ಯುಲೆನ್ಸ್ ಮಾತ್ರ ಕಾರ್ಯನಿರ್ವಹಿಸುತ್ತಿದೆ. ಹೀಗಾಗಿ ಶೀಘ್ರವಾಗಿ ವೈದ್ಯರನ್ನು ಹಾಗೂ ನುರಿತ ಸಿಬ್ಬಂದಿಗಳನ್ನು ನೇಮಿಸಿಕೊಡಬೇಕೆಂದು ಶಾಸಕರು ಮನವಿ ಸಲ್ಲಿಸಿದರು.

ಸಭೆಯಲ್ಲಿ ಹಾಜರಿದ್ದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾತನಾಡಿ, ಜನರಿಗೆ ಕೋವಿಡ್ ಬಗ್ಗೆ ಸ್ವತಃ ಅರಿವು ಬರಬೇಕು. ಮೊದಲ ಅಲೆಯಲ್ಲಿ ಕಡಿಮೆ ಕೋವಿಡ್ ತೀವ್ರತೆ ಕಡಿಮೆ ಇತ್ತು.  ಆದರೆ 2 ನೇ ಅಲೆಯಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ. ಹೀಗಾಗಿ ಜನರು ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಹೇಳಿದರು.

ಹೆಚ್.ಡಿ.ಕೋಟೆ ತಾಲೂಕಿನ ಗಡಿಗಳನ್ನು ಮುಚ್ಚಲಾಗಿದ್ದು, ಹೊರಗಿನಿಂದ ಬರುವವರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಅನಾವಶ್ಯಕವಾಗಿ ಓಡಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದ್ದು, ವಾಹನಗಳನ್ನು ಜಪ್ತಿ ಮಾಡಲಾಗುತ್ತಿದೆ  ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ತಿಳಿಸಿದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

Follow Us:
Download App:
  • android
  • ios