ಮೈಸೂರು(ಮಾ.05): ಮೈಸೂರಿನ ನಂಜನಗೂಡು ಭಾಗದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, 2 ವರ್ಷದ ಪುಟ್ಟ ಮಗುವಿಗೆ ಮೇಲೆ ಬೀದಿನಾಯಿಗಳು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದೆ.

ನಂಜನಗೂಡಿನಲ್ಲಿ ಬೀದಿ ನಾಯಿಗಳ ಹಾವಳಿ ಇನ್ನೂ ಮುಗಿದಿಲ್ಲ. ಎರಡು ವರ್ಷದ ಮಗುವಿನ ಮೇಲೆ ಬೀದಿ ನಾಯಿ ದಾಳಿ ಮಾಡಿ ಗಾಯ ಮಾಡಿವೆ. ಬಾಲಕಿ ಸುಶೃತಾ ಮೇಲೆ ಬೀದಿ ನಾಯಿ ದಾಳಿ ಮಾಡಿದೆ. ನಂಜನಗೂಡಿನ ತ್ಯಾಗರಾಜ ಕಾಲೋನಿಯಲ್ಲಿ ಘಟನೆ ನಡೆದಿದೆ.

ಕಾಲೇಜ್‌ ಡೇ ದಿನ ಮದ್ಯ ಸೇವನೆ: ಡಿಗ್ರಿ ವಿದ್ಯಾರ್ಥಿ ಆತ್ಮಹತ್ಯೆ

15 ದಿನದ ಹಿಂದೆ ನಂಜನಗೂಡಿನ ವಿದ್ಯಾನಗರದಲ್ಲಿ 5 ಮಕ್ಕಳಿಗೆ ಬೀದಿ ನಾಯಿಗಳು ಕಚ್ಚಿದ್ದವು. ನಾಯಿ‌ ಮಗುವಿನ ಬೆನ್ನು, ತೊಡೆ ಎದೆ ಭಾಗವನ್ನು ಕಚ್ಚಿದ್ದು, ಗಂಭೀಯ ಗಾಯವಾಗಿದೆ. ಬಾಲಕಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಬೀದಿ ನಾಯಿಗಳನ್ನು ನಿಯಂತ್ರಿಸಲು ವಿಫಲವಾಗಿರುವ ಬಗ್ಗೆ ನಗರಸಭೆ ಅಧಿಕಾರಿಗಳ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಜನರು ಆಗ್ರಹಿಸಿದ್ದಾರೆ.