ವಿರಾಜಪೇಟೆ(ಮೇ.03): ಕೊರೋನಾ ಯೋಧರ ಮೇಲೆ ಬೀದಿ ನಾಯಿಯೊಂದು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ವಿರಾಜಪೇಟೆ ತಾಲೂಕಿನ ಕಡಂಗದಲ್ಲಿ ಸಂಭವಿಸಿದೆ.

ವಿರಾಜಪೇಟೆ ಗ್ರಾಮಾಂತರ ಪೊಲೀಸ್‌ ಠಾಣೆಯ ಪೇದೆಗಳಿಬ್ಬರು ಕಡಂಗದಲ್ಲಿ ಕೋವಿಡ್‌ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭ ಬೀದಿ ನಾಯಿಯೊಂದು ಏಕಾಏಕಿ ದಾಳಿ ಮಾಡಿ, ಇವರಿಗೆ ಕಚ್ಚಿ ನಂತರ ಸ್ಥಳೀಯ ಮೂರು ಮಂದಿಗೆ ಕಚ್ಚಿ ಗಾಯಗೊಳಿಸಿದೆ ಎಂದು ತಿಳಿದು ಬಂದಿದೆ.

ಸರ್ಕಾರಿ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ದಾಖಲೆಗಳು

ಗಾಯಳುಗಳಿಗೆ ವಿರಾಜಪೇಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ಕೊಡಗಿನಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ನಿವೃತ್ತ ಯೋಧರೊಬ್ಬರು ಹಲ್ಲೆ ನಡೆಸಲು ಯತ್ನಿಸಿದ ಘಟನೆಯೂ ನಡೆದಿತ್ತು.