Asianet Suvarna News Asianet Suvarna News

ಪ್ಲಾಸ್ಟಿಕ್ ಬಳಕೆ : ನಿಯಮ ಇನ್ನಷ್ಟು ಕಠಿಣ

ಪ್ಲಾಸ್ಟಿಕ್ ಬಳಕೆ ವಿರುದ್ಧ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಮೇಯರ್ ಗಂಗಾಂಬಿಕೆ ಹೇಳಿದ್ದಾರೆ. 

Strict Action Against Plastic Usage Says BBMP Mayor Gangambike
Author
Bengaluru, First Published Sep 13, 2019, 9:02 AM IST

ಬೆಂಗಳೂರು [ಸೆ.13]:  ನಿಷೇಧಿತ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ಬಳಕೆ ಮಾಡುವ ವ್ಯಾಪಾರಿಗಳು, ಉದ್ದಿಮೆದಾರರ ವ್ಯಾಪಾರ, ಉದ್ದಿಮೆ ಪರವಾನಗಿ ರದ್ದುಪಡಿಸುವುದು, ದಂಡದ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸುವಂತಹ ಇನ್ನಷ್ಟು ಕಠಿಣ ಕ್ರಮಗಳನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲಾಗುವುದು ಎಂದು ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ತಿಳಿಸಿದ್ದಾರೆ.

ಪ್ಲಾಸ್ಟಿಕ್‌ ಉತ್ಪನ್ನಗಳ ಬದಲು ಪರಿಸರ ಸ್ನೇಹಿ ಉತ್ಪನ್ನಗಳ ಬಳಕೆ ಪ್ರೋತ್ಸಾಹಿಸಲು ಬಿಬಿಎಂಪಿಯು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಯೋಜಿಸಿರುವ ಮೂರು ದಿನಗಳ ‘ಪರ್ಯಾಯ ಉತ್ಪನ್ನಗಳ ವಿಶೇಷ ಮೇಳ’ ಉದ್ಘಾಟಿಸಿ ಅವರು ಮಾತನಾಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್‌ ಉತ್ಪನ್ನಗಳ ಸಂಪೂರ್ಣ ನಿಯಂತ್ರಣಕ್ಕೆ ಹಂತ ಹಂತವಾಗಿ ಕ್ರಮ ವಹಿಸಲಾಗುತ್ತಿದೆ. ಈಗಾಗಲೇ ಮಾರುಕಟ್ಟೆ, ಅಂಗಡಿಗಳಲ್ಲಿ ವ್ಯಾಪಾರಿಗಳು ಗ್ರಾಹಕರಿಗೆ ಪ್ಲಾಸ್ಟಿಕ್‌ ಕೈ ಚೀಲದಲ್ಲಿ ಉತ್ಪನ್ನಗಳನ್ನು ನೀಡಬಾರದೆಂದು ಸೂಚಿಸಲಾಗಿದೆ. ಹೋಟೆಲ್‌ಗಳಲ್ಲಿ ಆಹಾರ ಪಾರ್ಸೆಲ್‌ ನೀಡಲು ಕಬ್ಬಿನ ತ್ಯಾಜ್ಯದಿಂದ ಉತ್ಪಾದಿಸಿದ ಬಾಕ್ಸ್‌ಗಳನ್ನು ಬಳಸುವಂತೆ ತಿಳಿಸಲಾಗಿದೆ. ನಿಯಮ ಪಾಲಿಸದವರಿಗೆ ದಂಡ ವಿಧಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್‌ ಉತ್ಪನ್ನ ಬಳಸುವವರಿಗೆ ವಿಧಿಸುವ ದಂಡ ಹೆಚ್ಚಿಸುವುದು, ಉದ್ದಿಮೆ, ವ್ಯಾಪಾರ ಪರವಾನಗಿ ರದ್ದುಪಡಿಸುವ ಇನ್ನಷ್ಟುಬಿಗಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪರಿಸರ ಸ್ನೇಹಿ ಉತ್ಪನ್ನಗಳ ಬಳಸಿ:

ನಿಷೇದಿತ ಪ್ಲಾಸ್ಟಿಕ್‌ ಉತ್ಪನ್ನಗಳಿಗೆ ಪರ್ಯಾಯವಾಗಿ ಇಂದಿನ ಮಾರುಕಟ್ಟೆಯಲ್ಲಿ ಲಭ್ಯವಿರುವ ಪರಿಸರ ಸ್ನೇಹಿ ಉತ್ಪನ್ನಗಳನ್ನು ಉಪಯೋಗಿಸುವಂತೆ ಇದೇ ವೇಳೆ ಮೇಯರ್‌ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಮೇಳದಲ್ಲಿ ಸುಮಾರು 50ಕ್ಕೂ ಹೆಚ್ಚು ಪ್ಲಾಸ್ಟಿಕೇತರ ವಸ್ತುಗಳ ಉತ್ಪಾದಕರು, ವಿತರಕರು, ಮಾರಾಟಗಾರರು ಭಾಗವಹಿಸಿ ತಾವು ಪ್ಲಾಸ್ಟಿಕ್‌ ಉತ್ಪನ್ನಗಳಿಗೆ ಪರ್ಯಾಯವಾಗಿ ತಯಾರಿಸಿರುವ ಪರಿಸರ ಸ್ನೇಹಿ ಉತ್ಪನ್ನಗಳನ್ನು ಪ್ರದರ್ಶನಕ್ಕಿಟ್ಟಿದ್ದಾರೆ. ಪರಿಸರ ಸ್ನೇಹಿ ತೆಂಗಿನ ನಾರಿನ ಬ್ಯಾಗ್‌, ಬಟ್ಟೆಬ್ಯಾಗ್‌, ಅಡಿಕೆ ಎಲೆ ಮತ್ತು ಗಾಣದಿಂದ ತೆಗೆದ ಕಬ್ಬಿನ ತ್ಯಾಜ್ಯ, ಬಾಳೆ ಎಲೆ, ಮುತ್ತುಗದ ಎಲೆಯಿಂದ ತಯಾರಿಸಿದ ತಟ್ಟೆ, ಲೋಟ, ಸ್ಪೂನ್‌ಗಳು ಸೇರಿದಂತೆ ಭೂಮಿಯಲ್ಲಿ ಕೊಳೆಯುವ, ಸುಲಭ ವಿಲೇವಾರಿ ಮಾಡಬಹುದಾದ ಸಾಕಷ್ಟುಉತ್ಪನ್ನಗಳು ಪ್ಲಾಸ್ಟಿಕ್‌ಗೆ ಪರ್ಯಾಯವಾಗಿ ಲಭ್ಯವಿದೆ. ಪ್ರಸ್ತುತ ಪರಿಸರ ಸ್ನೇಹಿ ಉತ್ಪನ್ನಗಳ ದರ ಹೆಚ್ಚಿದೆ ಎಂಬ ದೂರುಗಳಿವೆ. ಆದರೆ, ಎಲ್ಲರೂ ಇವುಗಳ ಬಳಕೆಗೆ ಮುಂದಾದರೆ, ಬೇಡಿಕೆ ಹೆಚ್ಚಾದಾಗ ದರ ತಾನಾಗಿಯೇ ಕಡಿಮೆ ಆಗುತ್ತದೆ. ಹಾಗಾಗಿ ಜನರು ಪ್ಲಾಸ್ಟಿಕೇತರ ಉತ್ಪನ್ನಗಳನ್ನು ಬಳಸಿ ಪ್ಲಾಸ್ಟಿಕ್‌ ಮುಕ್ತ ಬೆಂಗಳೂರು ನಿರ್ಮಾಣಕ್ಕೆ ಬಿಬಿಎಂಪಿಯೊಂದಿಗೆ ಕೈಜೋಡಿಸಬೇಕು ಎಂದ ಮನವಿ ಮಾಡಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಾರ್ಯಕ್ರಮದಲ್ಲಿ ಉಪಮೇಯರ್‌ ಬಿ.ಭದ್ರೇಗೌಡ, ಬಿಬಿಎಂಪಿ ಆಯುಕ್ತ ಅನಿಲ್‌ ಕುಮಾರ್‌,ಪಾಲಿಕೆ ಆಡಳಿತ ಪಕ್ಷದ ನಾಯಕ ಅಬ್ದುಲ್‌ ವಾಜಿದ್‌, ಜೆಡಿಎಸ್‌ ನಾಯಕಿ ನೇತ್ರಾ ನಾರಾಯಣ್‌ ಮತ್ತಿತರರು ಉಪಸ್ತಿತರಿದ್ದರುಮರಿದಂತಾಗಿತ್ತು. 2014ರವರೆಗೆ ಐಬಿಪಿಎಸ್‌ ಪರೀಕ್ಷೆ ಬರೆಯಲು 10ನೇ ತರಗತಿವರೆಗೆ ಕನ್ನಡದಲ್ಲಿ ವಿದ್ಯಾಭ್ಯಾಸ ಮಾಡಿರಬೇಕಾಗಿರುವುದು ಕಡ್ಡಾಯವಾಗಿತ್ತು. ಇದರಿಂದಾಗಿ ಕರ್ನಾಟಕದ ಬ್ಯಾಂಕ್‌ಗಳಲ್ಲಿ ಬಹುತೇಕ ಕನ್ನಡಿಗರೇ ಉದ್ಯೋಗ ಗಿಟ್ಟಿಸಿಕೊಳ್ಳುತ್ತಿದ್ದರು. 2014ರಲ್ಲಿ ನಿಯಮಾವಳಿಗೆ ತಿದ್ದುಪಡಿ ತಂದು ನೇಮಕಾತಿ ಆದ ಆರು ತಿಂಗಳೊಳಗಾಗಿ ಸ್ಥಳೀಯ ಭಾಷೆ ಕಲಿತರೆ ಸಾಕು ಎಂಬ ನಿಯಮ ರೂಪಿಸಲಾಯಿತು. ಇದರಿಂದಾಗಿ 2014ರ ಬಳಿಕ ರಾಷ್ಟ್ರೀಕೃತ ಬ್ಯಾಂಕ್‌, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಸಾವಿರಾರು ಮಂದಿ ಹಿಂದಿ ಭಾಷಿಕರು ಹಾಗೂ ಅನ್ಯ ಭಾಷಿಕರು ನುಸುಳುವಂತಾಯಿತು. ಇದರಿಂದ ಕನ್ನಡಿಗರ ಸಾವಿರಾರು ಉದ್ಯೋಗಗಳು ಪರ ಭಾಷಿಕರ ಪಾಲಾದವು. ಅಲ್ಲದೆ, ಗ್ರಾಮಾಂತರ ಪ್ರದೇಶದಲ್ಲೂ ಇವರೇ ತುಂಬಿಕೊಂಡು ಕನ್ನಡ ಮಾತ್ರ ಬಲ್ಲ ಗ್ರಾಹಕರಿಗೆ ಸೂಕ್ತ ಸೇವೆಯೇ ದೊರೆಯದಂತಾಯಿತು.

Follow Us:
Download App:
  • android
  • ios