ಬೆಂಗಳೂರು(ಜು.25): ಕೊರೋನಾ ಸೋಂಕಿತರ ಬಳಿ ನಿಗದಿಗಿಂತ ಹೆಚ್ಚು ಹಣ ವಸೂಲಿ ಮಾಡದರೆ ಅಂತಹ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು ಎಂದು ಐಜಿಪಿ ಡಿ.ರೂಪಾ ಎಚ್ಚರಿಕೆ ನೀಡಿದ್ದಾರೆ.

ಖಾಸಗಿ ಆಸ್ಪತ್ರೆಗಳು ಕೊರೋನಾ ಸೋಂಕಿತರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ ನಿಗಾ ವಹಿಸಲು ರಾಜ್ಯ ಸರ್ಕಾರ ಐಎಎಸ್‌ ಅಧಿಕಾರಿ ಹರ್ಷ ಗುಪ್ತ ಹಾಗೂ ಐಪಿಎಸ್‌ ಅಧಿಕಾರಿ ರೂಪಾ ನೇತೃತ್ವದಲ್ಲಿ ತಂಡ ನಿಯೋಜಿಸಿತ್ತು.

ಮುನಿರತ್ನ ಬರ್ತ್‌ಡೇ ವಿಶ್‌ಗೆ ಆಕ್ಷೇಪ: ಇದು ರಾಜಕೀಯದ ಸತ್ಸಂಪ್ರದಾಯ ಎಂದ ನಿಖಿಲ್

ಐಎಎಸ್‌ ಅಧಿಕಾರಿ ಹರ್ಷಾ ಗುಪ್ತಾ ಹಾಗೂ ಡಿ.ರೂಪಾ ಅವರು ಹಲವು ಆಸ್ಪತ್ರೆಗಳಿಗೆ ಭೇಟಿ ನೀಡಿ ಬಿಲ್‌ ಪುಸ್ತಕಗಳನ್ನು ಪರಿಶೀಲಿಸಿದ್ದು, ಕೆಲವೊಂದು ಆಸ್ಪತ್ರೆಗಳು ರೋಗಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡಿರುವುದನ್ನು ಪತ್ತೆ ಹಚ್ಚಿದ್ದಾರೆ.

ಹೆಚ್ಚುವರಿ ಹಣವನ್ನು ವಾಪಸ್‌ ರೋಗಿಗಳ ಖಾತೆಗೆ ಜಮೆ ಮಾಡುವಂತೆ ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ. ಕೆಲ ಆಸ್ಪತ್ರೆಯವರು, 22 ರೋಗಿಗಳಿಂದ ರಾಜ್ಯ ಸರ್ಕಾರ ನಿಗದಿಪಡಿಸಿದ್ದ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿದ್ದು ಖಾತ್ರಿಯಾಗಿದೆ. ಖಾಸಗಿ ಆಸ್ಪತ್ರೆಯವರು .24 ಲಕ್ಷ ಹೆಚ್ಚುವರಿಯಾಗಿ ಬಿಲ್‌ ಪಡೆದಿದ್ದಾರೆ. ಹಣವನ್ನು ವಾಪಸು ರೋಗಿಗಳಿಗೆ ಕೊಡಿಸಲಾಗುತ್ತಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಬಕ್ರೀದ್ ಹಬ್ಬ ಹೇಗೆ ಆಚರಿಸ್ಬೇಕು? ಮಾರ್ಗಸೂಚಿ ಹೊರಡಿಸಿದ ಸರ್ಕಾರ

ಇದಕ್ಕೂ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ್ದ ಅವರು, ಸರ್ಕಾರದ ನಿಯಮದಂತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕು. ವೈದ್ಯಕೀಯ ದರ ನಿಗದಿ ಬಗ್ಗೆ ಆನ್‌ಲೈನ್‌ಲ್ಲಿ ಮಾಹಿತಿ ಅಪ್‌ಡೇಟ್‌ ಮಾಡಬೇಕು. ಕೊರೋನಾ ಸೋಂಕಿತರಿಗೆ ಸೂಕ್ತ ಮಾಹಿತಿ ನೀಡುವಂತೆ ಆಸ್ಪತ್ರೆ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.